ಕೊಪ್ಪಳ: ಮತ್ತೂರು ಗ್ರಾಮದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಮತ್ತೂರು ಗ್ರಾಮದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. . ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ನವಜಾತ ಶಿಶುವನ್ನು ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲೆಯಲ್ಲಿ ಮೇಲಿಂದ ಮೇಲೆ ಇಂತಹ ಪ್ರಕರಣಗಳು ನಡೆಯುತ್ತಲೇ ಇವೆ.

ಕೊಪ್ಪಳ: ಮತ್ತೂರು ಗ್ರಾಮದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ
ನವಜಾತ ಹೆಣ್ಣು ಶಿಶು
Follow us
TV9 Web
| Updated By: ಆಯೇಷಾ ಬಾನು

Updated on: Sep 18, 2023 | 9:27 AM

ಕೊಪ್ಪಳ, ಸೆ.18: ಮತ್ತೂರು ಗ್ರಾಮದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ(New Born Girl Baby) . ಕೊಪ್ಪಳ ತಾಲೂಕಿನ ಮತ್ತೂರು ಗ್ರಾಮ ನಿನ್ನೆ ಮಧ್ಯಾಹ್ನ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ನವಜಾತ ಶಿಶುವನ್ನು ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲೆಯಲ್ಲಿ ಮೇಲಿಂದ ಮೇಲೆ ಇಂತಹ ಪ್ರಕರಣಗಳು ನಡೆಯುತ್ತಲೇ ಇವೆ. ಸದ್ಯ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕಲಂ 176, 318, 201 ಅಡಿಯಲ್ಲಿ ಅಳವಂಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೋಟೆಲ್​ ಮಾಲೀಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ದರೋಡೆ

ಕೋಲಾರದ ಮುನೇಶ್ವರ ನಗರದಲ್ಲಿ ನಿನ್ನೆ ರಾತ್ರಿ ಹೋಟೆಲ್​ ಮಾಲೀಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ದರೋಡೆ ಮಾಡಲಾಗಿದೆ. ಬೈಕ್ ನಲ್ಲಿ ಬಂದಿದ್ದ ಮೂರು ಜನ ದುಷ್ಕರ್ಮಿಗಳು ಸಹನ ದರ್ಶಿನಿ ಹೋಟೆಲ್ ಮಾಲೀಕ ನವೀನ್ ಶೆಟ್ಟಿ ಎಂಬುವರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ. ಘಟನೆ ವೇಳೆ ಸ್ಥಳೀಯರು ಓರ್ವನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳು ಹೋಟೆಲ್ ಮಾಲೀಕ ನವೀನ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೋಟೆಲ್ ಮುಗಿಸಕೊಂಡು ಮನೆಗೆ ಬರುತ್ತಿದ್ದ ವೇಳೆ ಕೃತ್ಯ ನಡೆದಿದೆ. ಸ್ಥಳಕ್ಕೆ‌ ಕೋಲಾರ ನಗರ ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮತ್ತು ಅತ್ತೆಯನ್ನು ಕೊಲೆಗೈದ ಪತಿ

ಅಕ್ರಮ ಗಾಂಜಾ ಬೆಳೆದಿದ್ದ ವ್ಯಕ್ತಿ ಅಂದರ್

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಕೊಳತೂರು ಗ್ರಾಮದಲ್ಲಿ ಬೆಳೆದಿದ್ದ 5 ಕೆ.ಜಿ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಟಿ ನರಸೀಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆನಂದ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮಾದೇವ ಬಿನ್ ಪುಟ್ಟಸ್ವಾಮಿ ಎಂಬುವವರ ಮನೆಯ ಶೌಚಾಲಯದ ಹಿಂಬದಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

 ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP