AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವು ಲೆಕ್ಕದಲ್ಲಿ ಪರ್ಫೆಕ್ಟ್ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮ್ಯಯ ಅಂದ್ರೆ ಪರ್ಫೆಕ್ಟ್​. ಲೆಕ್ಕ, ಅಂಕಿ-ಅಂಶದಲ್ಲಿ ಸಿಎಂ ಸಿದ್ದರಾಮಯ್ಯ ಪರ್ಫೆಕ್ಟ್​ ಎಂದು ರಾಜ್ಯ ರಾಜಕಾರಣಲ್ಲಿ ಎಲ್ಲರಿಗೂ ಗೊತ್ತಿರುವ ವಿಷಯ. ಈ ಅಂಕಿ-ಅಂಶದಲ್ಲಿ ಸಿಎಂ ಹಲವು ಬಾರಿ ತಾವು ಪರ್ಫೆಕ್ಟ್​ ಎಂದು ಸಾಬೀತು ಮಾಡಿದ್ದುಂಟು, ಅದಕ್ಕಾಗಿ ಅವರನ್ನು ಲೆಕ್ಕರಾಮಯ್ಯ ಅಂತಲೂ ಕರೆಯುತ್ತಾರೆ. ಇದೀಗ ಮತ್ತೊಮ್ಮೆ ತಮ್ಮ ಅಂಕಿ-ಅಂಶ ಪರ್ಫೆಕ್ಟ್​ ಎಂದು ಸಾಬೀತುಪಡಿಸಿದ್ದಾರೆ.

ತಾವು ಲೆಕ್ಕದಲ್ಲಿ ಪರ್ಫೆಕ್ಟ್ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 22, 2024 | 6:07 PM

Share

ಕೊಪ್ಪಳ, (ಸೆಪ್ಟೆಂಬರ್ 22): ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಇಂದು ತುಂಗಭದ್ರಾ ಜಲಾಶಯ ಗೇಟ್ ದುರಸ್ತಿ ಮಾಡಿದವರಿಗೆ ಸರ್ಕಾರದಿಂದ ಸತ್ಕಾರ ಮಾಡಲಾಯಿತು. ಮುನಿರಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಭಾಷಣದ ವೇಳೆ ಅಧಿಕಾರಿಗಳು, ಸಚಿವರು, ಶಾಸಕರ ಮೇಲೆ ಗರಂ ಆದ ಘಟನೆ ನಡೆಯಿತು. ಜೊತೆಗೆ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಲೆಕ್ಕದಲ್ಲಿ ಪರ್ಫೆಕ್ಟ್ ಎಂದು ಮತ್ತೊಮ್ಮೆ ಸಾಬೀತು ಪಡಿಸಿದರು.

ತುಂಗಭದ್ರ ಅಣೆಕಟ್ಟೆಯಿಂದ ಯಾವ ರಾಜ್ಯದ ಎಷ್ಟು ಎಕರೆ ಪ್ರದೇಶಕ್ಕೆ ನೀರು ಒದಗಿಸಲಾಗುತ್ತಿದೆ ಎನ್ನುವ ಬಗ್ಗೆ ಅಂಕಿ ಅಂಶ ಸಮೇತ ವಿವರಿಸಿದರು. ಎಡ ಮತ್ತು ಬಲ ದಂಡೆಯಲ್ಲಿ ಎಷ್ಟೆಷ್ಟು ಎಕರೆಗೆ ನೀರುಣಿಸಲಾಗುತ್ತಿದೆ ಎನ್ನುವ ಅಂಕಿ ಅಂಶ ಕೂಡ ಹೇಳಿದರು.

ಇದನ್ನೂ ಓದಿ: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪಿಸಿದ ಸಿಎಂ

ಈ ವೇಳೆ ವೇದಿಕೆಯಲ್ಲಿದ್ದ ಕೆಲವರು ಬೇರೆ ಅಂಕಿ ಅಂಶ ಹೇಳಿ ಅವರನ್ನು ತಿದ್ದಲು ಯತ್ನಿಸಿದರು. ಆದರೆ, ಎಲ್ಲರು ಕೊಟ್ಟ ಅಂಕಿ ಅಂಶಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಬಳಿಕ ಇಲಾಖೆ ಮುಖ್ಯಸ್ಥರನ್ನು ಕರೆದು ದಾಖಲೆ ತರಿಸಿಕೊಂಡರು.

ದಾಖಲೆಗಳ ಪ್ರಕಾರ ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದ ಅಂಕಿ ಅಂಶಗಳು, ಕೊಟ್ಟ ಲೆಕ್ಕವೇ ಸರಿಯಾಗಿತ್ತು. ಬಳಿಕ ಮುಖ್ಯಮಂತ್ರಿಗಳು ಸಭಿಕರ ಕಡೆಗೆ ಥಂಬ್ಸ್ ಅಪ್ ತೋರಿಸಿ ನನ್ನ ಲೆಕ್ಕವೇ ಪರ್ಪೆಕ್ಟ್ ಎಂದರು.

ಇದಕ್ಕೆ ನೆರದಿದ್ದ ಜನರು ಶಿಳ್ಳೆ ಹಾಕಿ ಸಂಭ್ರಮಿಸಿದರು. ನಾನು ಹೇಳಿದ್ದೆ ಸರಿಯಾಗಿದೆ, ತಪ್ಪಾಗಿ ಮಾಹಿತಿ ನೀಡಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳೋದಾಗಿ ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?