AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ: ಡಿ.10ರಂದು ಬೆಳಗಾವಿಯಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕರೆ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬಸವಜಯಮೃತ್ಯುಂಜಯ ಸ್ವಾಮೀಜಿ ಡಿ.10ರಂದು ಬೆಳಗಾವಿಯಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ. 2024ರಲ್ಲಿ ನಡೆದಿದ್ದ ಲಾಠಿಚಾರ್ಜ್ ಘಟನೆ ಖಂಡಿಸಿ, ಡಿ.10ನ್ನು ಲಿಂಗಾಯತರ ಮೇಲಿನ ದೌರ್ಜನ್ಯ ದಿನವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ: ಡಿ.10ರಂದು ಬೆಳಗಾವಿಯಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕರೆ
ಬಸವಜಯಮೃತ್ಯುಂಜಯ ಸ್ವಾಮೀಜಿImage Credit source: Basava Jaya Mruthyunjaya Swamiji Facebook Page
ಶಿವಕುಮಾರ್ ಪತ್ತಾರ್
| Edited By: |

Updated on:Nov 25, 2026 | 7:29 PM

Share

ಕೊಪ್ಪಳ, ನವೆಂಬರ್​ 25: ಡಿಸೆಂಬರ್ 2ರಿಂದ 11ರ ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಕರ್ನಾಟಕ ವಿಧಾನಮಂಡಲ ಚಳಿಗಾಲದ ಅಧಿವೇಶನದ ನಡುವೆಯೇ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಡಿ.10ರಂದು ಬೆಳಗಾವಿಯಲ್ಲಿ 1 ದಿನದ ಉಪವಾಸ ಸತ್ಯಾಗ್ರಹಕ್ಕೆ ಬಸವಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಹೋರಾಟದ ವೇಳೆ 2024ರಲ್ಲಿ ನಡೆದಿದ್ದ ಲಾಠಿಚಾರ್ಜ್ ಘಟನೆ ಖಂಡಿಸಿ, ಡಿ.10ನ್ನು ಲಿಂಗಾಯತರ ಮೇಲಿನ ದೌರ್ಜನ್ಯ ದಿನವಾಗಿ ಆಚರಿಸಲು ನಿರ್ಧರಿಸಲಾಗಿದೆ. ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.

ಉಪವಾಸ ಸತ್ಯಾಗ್ರಹಕ್ಕೆ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಜನರು ಆಗಮಿಸುವ ನಿರೀಕ್ಷೆ ಇದ್ದು, ಅಧಿವೇಶನದಲ್ಲಿ ಧ್ವನಿ ಎತ್ತಲು ಸಮಾಜದ ಶಾಸಕರನ್ನು ಬಸವಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಆಡಳಿತ ಮತ್ತು ವಿಪಕ್ಷದ ಶಾಸಕರು ಸಮಾಜದ ಪರ ನಿಲ್ಲಬೇಕು. ಎಲ್ಲಾ ಪೀಠಗಳ ಸ್ವಾಮೀಜಿಗಳನ್ನು ಹೋರಾಟಕ್ಕೆ ಆಹ್ವಾನಿಸಿರುವೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹಾಗೂ ಎಲ್ಲ ಲಿಂಗಾಯತರಿಗೆ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸ್ಥಾನ ನೀಡ್ಬೇಕು. ರಾಜಕೀಯ ಪಕ್ಷಗಳು ಯಾವುದೇ ಇರಲಿ, ಮೀಸಲಾತಿ ಹೋರಾಟ ನಿರಂತರ ಎಂದು ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ರದ್ದುಗೊಳಿಸಿ ಹೈಕೋರ್ಟ್ ಆದೇಶ

2024ರ ಡಿಸೆಂಬರ್​​ 10ರಂದು ಏನಾಗಿತ್ತು?

‘3ಬಿ’ ಪ್ರವರ್ಗದ ಅಡಿಯಲ್ಲಿ ಶೇ. 5ರಷ್ಟು ಮೀಸಲಾತಿ ಪಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು, ಶೇ. 15ರಷ್ಟು ಮೀಸಲಾತಿ ಇರುವ ‘2ಎ’ ಪ್ರವರ್ಗಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಪಂಚಮಸಾಲಿ ಸಮುದಾಯ ಹೋರಾಟ ನಡೆಸಿತ್ತು. ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ, ಹೋರಾಟಗಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರ ಆದೇಶದ ಮೇರೆಗೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದರು. ಈ ವೇಳೆ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:27 pm, Wed, 25 November 26

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'