ಅಯೋಧ್ಯೆ ಮಂದಿರ ಉದ್ಘಾಟನೆ ವೇಳೆ ಶಾಂತಿ ಕದಡುವ ಫೇಸ್ ಬುಕ್ ಪೋಸ್ಟ್: ಕೊಪ್ಪಳ ಪೊಲೀಸರಿಂದ FIR ದಾಖಲು
ಶ್ರೀರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ಸಂದೇಶ ಹಾಕಿರುವುದು ದ್ವೇಷ ಹರಡುವ ಕುತಂತ್ರ ಮಾಡಿದ್ದಾನೆ ಎಂದು ಕೊಪ್ಪಳ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದಾರೆ. ಯುವಕನನ್ನು ಠಾಣೆಗೆ ಕರೆಸಿ, ಎಚ್ಚರಿಕೆ ನೀಡಿ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊಪ್ಪಳ, ಜನವರಿ 23: ನಿನ್ನೆ ಮಹತ್ವದ ದಿನದಲ್ಲಿ ಅತ್ತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ವೇಳೆ ಇತ್ತ ಕೊಪ್ಪಳದಲ್ಲಿ ಯುವಕನೊಬ್ಬ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್ ಮಾಡಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾರುಕ್ ಖಾನ್ (25) ಎಂಬ ಯುವಕ ತನ್ನ ಫೇಸ್ ಬುಕ್ ಪೇಜ್ನಲ್ಲಿ ವಿವಾದಾತ್ಮಕ ಸಂದೇಶ ಪೋಸ್ಟ್ ಮಾಡಿದ್ದು, ಆತನ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಶಾರುಕ್ ಖಾನ್, ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದ ನಿವಾಸಿ. ಕಳೆದ ಕೆಲ ತಿಂಗಳಿಂದ ಶಾರುಕ್ ಖಾನ್ ಕೊಪ್ಪಳದ ಶ್ರೀಶೈಲ ನಗರದಲ್ಲಿ ವಾಸವಿದ್ದಾನೆ.
ವಿವಾದಾತ್ಮಕ ಫೇಸ್ ಬುಕ್ ಸಂದೇಶ ಜನವರಿ 20 ರಂದು ಪೋಸ್ಟ್ ಮಾಡಲಾಗಿದ್ದು, ಹೀಗಿದೆ: ಮಂದಿರ ಒಂದಲ್ಲ ನೂರು, ಸಾವಿರ ಕಟ್ಟಿಕೊಳ್ಳಲಿ. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಮಸೀದಿಯನ್ನು ಕೆಡವಿ ಅದರ ಮೇಲೆ ನಿರ್ಮಿಸಿರುವ ಮಂದಿರಕ್ಕೆ ನಮ್ಮ ವಿರೋಧವಿದೆ. ಇನ್ಶಾ ಅಲ್ಲಾಹ್ ಒಂದು ದಿನ ಬಾಬರಿ ಮಸೀದಿ ಎದ್ದು ನಿಲ್ಲಲಿದೆ’ ಎನ್ನುವ ಸಂದೇಶವನ್ನು ಆ ಯುವಕ ತನ್ನ ಸಾಮಾಜಿಕ ಜಾಲತಾಣ ಪುಟದಲ್ಲಿ ಹಾಕಿಕೊಂಡಿದ್ದ.
ಇದನ್ನೂ ಓದಿ: ರಾಮಲಲ್ಲಾ ಇನ್ಮುಂದೆ ಟೆಂಟ್ನಲ್ಲಿ ಅಲ್ಲ, ದಿವ್ಯ ಮಂದಿರದಲ್ಲಿ ಇರುತ್ತಾನೆ: ನರೇಂದ್ರ ಮೋದಿ
ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆಯಂತೆ
ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಹಿಳೆ ತಂದೆಯಿಂದ ಪೊಲೀಸರಿಗೆ ದಾಖಲೆಗಳ ಸಲ್ಲಿಕೆ ಮಾಡಲಾಗಿದ್ದು, 2018 ರಿಂದ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ದೃಢಪಟ್ಟಿದ್ದಾರೆ.
ಏನಿದು ಪ್ರಕರಣ? ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಅಯೋಧ್ಯೆ ರಾಮ ಮಂದಿರ ಇಂದು ಲೋಕಾರ್ಪಣೆಗೊಂಡಿದೆ. ಮಂದಿರದಲ್ಲಿ ಪ್ರಭು ಶ್ರೀರಾಮ ವಿರಾಜಮಾನನಾಗಿದ್ದಾನೆ. ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಅದರಂತೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲೂ ಸಿಹಿ ಹಂಚಿ ಸಂಭ್ರಮಿಸಲಾಗುತ್ತಿತ್ತು. ಜೈ ಶ್ರೀರಾಮ್ ಘೋಷಣೆಗಳು ಮೊಳಗುತ್ತಿದ್ದವು.
ಈ ವೇಳೆ ಮುಸ್ಲಿಂ ಮಹಿಳೆಯೊಬ್ಬಳು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಲ್ಲದೆ, ನೀವು ಮೋದಿ ಪರ ಕೆಲಸ ಮಾಡುತ್ತಿದ್ದೀರಿ ಎಂದು ಪೊಲೀಸರಿಗೆ ಆವಾಜ್ ಹಾಕಿದ್ದಳು. ಪರಿಣಾಮವಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಹಿಂದೂ ಕಾರ್ಯಕರ್ತರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದಲ್ಲದೆ, ಇನ್ನಷ್ಟು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಲಾರಂಭಿಸಿದರು.
ಈ ವೇಳೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪುತ್ರ ಕೆಇ ಕಾಂತೇಶ್ ಅವರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದು, ಮುಸ್ಲಿಂ ಮಹಿಳೆ ಗೊಂದಲ ಸೃಷ್ಟಿಸುತ್ತಿದ್ದರೂ ಸುಮ್ಮನಿದ್ದೀರಾ ಎಂದು ಪ್ರಶ್ನಿಸಿದರು. ಬಳಿಕ ಎಚ್ಚೆತ್ತ ಪೊಲೀಸರು, ಮುಸ್ಲಿಂ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ ಜೀಪ್ನಲ್ಲಿ ಕರೆದೊಯ್ದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:25 am, Tue, 23 January 24