ಶೌಚಕ್ಕೆ ಹೋಗುತ್ತಿದ್ದ ಮಹಿಳೆಯ ವಿಡಿಯೊ ಮಾಡಿದ ಕಾಮುಕನಿಗೆ ಸಾರ್ವಜನಿಕರಿಂದ ಥಳಿತ
ಶೌಚಾಲಯಕ್ಕೆ ತೆರಳ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಕಾಮುಕನನ್ನು ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯ ನಿವಾಸಿಗಳು ಥಳಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.
ಕೊಪ್ಪಳ: ಶೌಚಾಲಯಕ್ಕೆ ತೆರಳ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಕಾಮುಕನನ್ನು ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯ ನಿವಾಸಿಗಳು ಥಳಿಸಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯ ಕನಕಗಿರಿ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ. ಕಾಮುಕ ಮರದ ಮರೆಯಲ್ಲಿ ನಿಂತು ಮಹಿಳೆಯರ ವಿಡಿಯೋ ಮಾಡುತ್ತಿದ್ದನು. ಇದನ್ನು ಗಮನಿಸಿದ ಮಹಿಳೆ ವಿಷಯವನ್ನು ಸ್ಥಳೀಯರಿಗೆ ತಿಳಸಿದ್ದಾರೆ. ಕೂಡಲೇ ಸ್ಥಳಿಯರು ಕಾಮುಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಕಟ್ಟಿಹಾಕಿ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕನಕಗಿರಿ ಪೊಲೀಸರು ಕಾಮುಕನನ್ನ ವಶಕ್ಕೆ ಪಡೆದಿದ್ದಾರೆ. ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಆಕ್ಸಿಡೆಂಟ್ ಮಾಡಿರುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದವರ ಸೆರೆ
ಬೆಂಗಳೂರು: ಆಕ್ಸಿಡೆಂಟ್ ಮಾಡಿರುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಮೀಲ್ ಖಾನ್ ಬಂಧನ, ಮತ್ತೋರ್ವ ಬಾಲಕ ಬಂಧಿತ ಆರೋಪಿಗಳು. ಆರೋಪಿಗಳು ಲಾಲ್ಬಾಗ್, ಹೊಸೂರು ರಸ್ತೆಯಲ್ಲಿ ಒಂಟಿಯಾಗಿ ಸಂಚರಿಸುವ ವಾಹನ ಸವಾರರನ್ನು ಅಡ್ಡಗಟ್ಟಿ ಅಪಘಾತ ಮಾಡಿರುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದರು. ಸದ್ಯ ಆರೋಪಿಗಳು ಪೊಲೀಸರ ಅತಿಥಿಯಾಗಿದ್ದು, ಬಂಧಿತ ಆರೋಪಿಗಳಿಂದ 15 ಸಾವಿರ ನಗದು, ಒಂದು ಬೈಕ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:36 pm, Fri, 11 November 22