ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿದ ಮತ್ತೊಂದು ಪ್ರಕರಣ ರಾಜ್ಯದಲ್ಲಿ ವರದಿಯಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲೇ ರಾಜ್ಯದಲ್ಲಿ ಮತೀಯ, ಧರ್ಮ ಸಂಘರ್ಷಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗಷ್ಟೇ ರಾಮನವಮಿ ಸಂದರ್ಭ ಬೆಂಗಳೂರಿನಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಲಾಗಿತ್ತು. ಇದೀಗ ಗಂಗಾವತಿಯ ಶ್ರೀರಾಮ ನಗರದಲ್ಲಿ ಘಟನೆ ನಡೆದಿದೆ.

ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ
ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಕುಮಾರ್ ರಾಠೋಡ್
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Ganapathi Sharma

Updated on:Apr 24, 2024 | 7:34 AM

ಕೊಪ್ಪಳ, ಏಪ್ರಿಲ್ 24: ಬೆಂಗಳೂರಿನಲ್ಲಿ ರಾಮ ನವಮಿ ದಿನ ಜೈ ಶ್ರೀರಾಮ್ (Jai Sri Ram) ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿಯಲ್ಲಿ (Gangavati) ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ಶ್ರೀರಾಮನಗರದ ಸನ್​ ಶೈನ್ ಬಾರ್​ನಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಮದ್ಯ ಸೇವನೆಯ ವೇಳೆ ಶ್ರೀರಾಮ ನಗರದ ಕುಮಾರ್ ರಾಠೋಡ್ ಎಂಬಾತ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಅದೇ ವೇಳೆ ಮುಸ್ಲಿಂ ಯವಕರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಾಳು ಕುಮಾರ್ ರಾಠೋಡ್​ರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

ಇದನ್ನೂ ಓದಿ: ಜೈ ಶ್ರೀರಾಮ್​ ಎಂದಿದ್ದಕ್ಕೆ ಹಲ್ಲೆ​​: ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಆರೋಪಿಗಳು

ಸ್ಥಳೀಯರು ಹೇಳಿದ್ದೇನು?

ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ ವಿಚಾರವಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕುಮಾರ್ ರಾಠೋಡ್​ಗೆ ಮದ್ಯಪಾನದ ಚಟವಿದೆ. ಬಾರ್​​ನಲ್ಲಿ ಗ್ಲಾಸಿಗೆ ನೀರು ಸುರಿಯುವ ಸಂದರ್ಭ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾನೆ. ಹನುಮ ಜಯಂತಿ ಇರುವ ಕಾರಣ ಆತ ಘೋಷಣೆ ಕೂಗಿದ್ದಾನೆ. ಈ ವೇಳೆ ಅಲ್ಲಿದ್ದ ಮುಸ್ಲಿಂ ಯುವಕನೊಬ್ಬ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಈ ವೇಳೆ ಅವರಿಬ್ಬರ ನಡುವೆ ಜಗಳವಾಗಿದೆ. ಕೆಲವು ನಿಮಿಷಗಳ ನಂತರ ಬಾರ್​​ನಿಂದ ಹೊರಬಂದಾಗ ಅವರ ಸಮುದಾಯದ 20ರಿಂದ 30 ಮಂದಿ ಅಲ್ಲಿಗೆ ಬಂದು ಕುಮಾರ್ ರಾಠೋಡ್ ಮೇಲೆ ಹಲ್ಲೆ ಮಾಡಿದ್ದಾರೆ. ಜತೆಗೆ ಆತನ ಬಂಜಾರ ಸಮುದಾಯದ ಕುರಿತಾಗಿ ಜಾತಿ ನಿಂದನೆಯನ್ನೂ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನಂತರ ಸ್ಥಳೀಯರು ಜಗಳ ನಿಲ್ಲಿಸಿ ಕುಮಾರ್ ರಾಠೋಡ್​ನನ್ನು ಮನೆಗೆ ತಲುಪಿಸಿದರು. ಆದರೆ, ನಂತರ ಆತನಿಗೆ ಹೊಟ್ಟೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಯಿತು ಎಂದೂ ಸ್ಥಳೀಯರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:29 am, Wed, 24 April 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ