ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋ​ ಶೂಟ್, ಸಾರ್ವಜನಿಕರ ಆಕ್ರೋಶ

ಕಳೆದ ತಿಂಗಳು ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿತ್ತು. ಇದು ಸರ್ಕಾರದ ವೈಫಲ್ಯವೆಂದು ವಿಪಕ್ಷಗಳು ಆರೋಪ ಮಾಡಿದ್ದವು. ಈ ಬೆನ್ನೆಲ್ಲೇ ಜಲಾಶಯದ ಮೇಲೆ ಪ್ರೀ ವೆಡ್ಡಿಂಗ್​ ಶೂಟ್​ ಫೋಟೋ ವೈರಲ್​ ಆಗಿದೆ. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋ​ ಶೂಟ್, ಸಾರ್ವಜನಿಕರ ಆಕ್ರೋಶ
ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್​ ಶೂಟ್
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Sep 06, 2024 | 10:18 AM

ಕೊಪ್ಪಳ, ಸೆಪ್ಟೆಂಬರ್​ 06: ಭದ್ರತಾ ದೃಷ್ಟಿಯಿಂದ ತುಂಗಭದ್ರಾ ಜಲಾಶಯದ (Tungabadra Dam) ಮೇಲೆ ಯಾವುದೇ ತರಹದ ಚಿತ್ರೀಕರಣ ನಿಷೇಧಿಸಲಾಗಿದೆ. ಆದರೂ ಕೂಡ ತುಂಗಭದ್ರಾ ಜಲಾಶಯದ ಮೇಲಿನ ಪ್ರೀ ವೆಡ್ಡಿಂಗ್ (Pre Wedding) ಫೋಟೋ ವೈರಲ್ ಆಗಿದೆ. KA-01 MY 2174 ಬೆಂಗಳೂರು ಪಾಸಿಂಗ್​ ಕಾರನ್ನು ಜಲಾಶಯ ಮೇಲ್ಭಾಗದಲ್ಲಿ ಕಾರು ತೆಗೆದುಕೊಂಡು ಹೋಗಿ, ಅಲ್ಲಿ ಕಾರಿನ ಮುಂದೆ ಮತ್ತು ಮೇಲೆ ಜೋಡಿಗಳು  ಫೋಟೋ ತೆಗೆಸಿಕೊಂಡಿದ್ದಾರೆ.

ನಿಷೇಧ ಇದ್ದರೂ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಹೇಗೆ ನಡೆಯಿತು? ಪ್ರೀ ವೆಡ್ಡಿಂಗ್ ಫೋಟೋ ಶೂಟ್​ಗೆ ಅಧಿಕಾರಿಗಳು ಅನುಮತಿ ನೀಡಿದ್ರಾ? ಎಂಬ ಪ್ರಶ್ನೆಗಳು ಉದ್ಭವಾಗಿವೆ. ಯಾವಾಗ ಫೋಟೋ ಶೂಟ್ ಆಗಿದೆ, ಪರವಾನಿಗೆ ನೀಡಿದವರು ಯಾರು ಎಂಬುವುದರ ಬಗ್ಗೆ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಚ್ಚಿ ಹೋಗಿತ್ತು ತುಂಗಭದ್ರಾ ಡ್ಯಾಂ ಗೇಟ್​

ಕಳೆದ ತಿಂಗಳು ಆಗಸ್ಟ್ 10 ರಂದು ತುಂಗಭದ್ರಾ ಜಲಾಶಯದ 19ನೇ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿತ್ತು. ಇದು ದೇಶದಲ್ಲಿ ಸಾಕಷ್ಟು ಸುದ್ದಿಯಾಗಿತ್ತು. 19ನೇ ಗೇಟ್ ವೊಂದರಿಂದಲೇ ಬರೋಬ್ಬರಿ 35 ಸಾವಿರ ಕ್ಯೂಸೆಕ್ ನೀರು ಹೊರ ಹೋಗಿತ್ತು. ಜಲಾಶಯದಿಂದ ಒಂದೇ ವಾರದಲ್ಲಿ 45 ಟಿಎಂಸಿಗೂ ಹೆಚ್ಚು ನೀರು ವ್ಯರ್ಥವಾಗಿ ಹರಿದು ಹೋಗಿತ್ತು.

ಇದನ್ನೂ ಓದಿ: ರೈತರನ್ನು ಕೈಬಿಡಲಿಲ್ಲ ಮಳೆರಾಯ, ತುಂಗಭದ್ರಾ ಜಲಾಶಯ ಮತ್ತೆ ಭರ್ತಿಯಾಗುತ್ತಿದೆ ಅಂದ್ರೆ ಸುಮ್ನೆ ಅಲ್ಲ!

ನಿರಂತರವಾಗಿ ಒಂದು ವಾರ ಕಾಲ ಶ್ರಮವಹಿಸಿದ್ದ ಸಿಬ್ಬಂದಿ, ಸ್ಟಾಪ್ ಲಾಗ್ ಗೇಟ್​ನ ಐದು ಎಲಿಮೆಂಟ್​ಗಳನ್ನು ಅಳವಡಿಸಿ, ಹರಿಯುವ ನೀರನ್ನು ತಡೆಯುವಲ್ಲಿ ಸಫಲರಾಗಿದ್ದರು. ಆಗಸ್ಟ್ 17 ರಂದು ಐದು ಎಲಿಮೆಂಟ್​ಗಳ ಪ್ರಕ್ರಿಯೆಯನ್ನು ಮುಗಿಸಿದ್ದರು.

ಎಲಿಮೆಂಟ್ ಅಳವಡಿಕೆ ಪೂರ್ಣಗೊಂಡರು ಕೂಡಾ ಗೇಟ್​ನಿಂದ ಅಲ್ಪಪ್ರಮಾಣದ ನೀರು ಹೊರ ಹೋಗುತ್ತಿತ್ತು. ಹೀಗಾಗಿ ಮತ್ತೆ ಕೆಲಸ ಆರಂಭಿಸಿದ ಸಿಬ್ಬಂದಿ, ಹನಿ ನೀರು ಹೋಗದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:09 am, Fri, 6 September 24

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ