
ಕೊಪ್ಪಳ, ಮಾರ್ಚ್ 22: ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತ ಪುನೀತ್ ಕೆರಹಳ್ಳಿಗೆ (Puneeth Kerehalli) ಮಾರ್ಚ್ 21ರಿಂದ 23ರವರೆಗೆ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಈ ನಡುವೆಯೂ ದರ್ಶನಕ್ಕೆ ಒತ್ತಾಯಿಸಿದ ಕೆರಹಳ್ಳಿ, ಪೊಲೀಸರೊಂದಿಗೆ ವಾಗ್ವಾದ ನಡೆಸಿ, ನಂತರ ಅಧಿಕಾರಿಗಳೊಂದಿಗೇ ಅಂಜನಾದ್ರಿ ಬೆಟ್ಟ ಏರಿದ್ದಾರೆ.
ಕನಕಗಿರಿಯಲ್ಲಿ ಈ ಹಿಂದೆ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರಹಳ್ಳಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ಮತೀಯ ಭಾವನೆಗಳಿಗೆ ಪ್ರಚೋದನೆ ಉಂಟು ಮಾಡುವ ವಿವಾದಾತ್ಮಕ ಭಾಷಣ ಮಾಡಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಕೇಸ್ ಕೂಡ ದಾಖಾಗಿತ್ತು. ಹೀಗಾಗಿ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ನಡೆಯಲಿದ್ದ ಶಿವಾಜಿ ಜಯಂತೋತ್ಸವದಲ್ಲಿ ಭಾಗವಹಿಸಲು ಮುತಾಲಿಕ್ ಹಾಗೂ ಕೆರಹಳ್ಳಿ ಆಗಮಿಸುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಈ ಆದೇಶ ಹೊರಡಿಸಿದ್ದಾರೆ.
ಪೊಲೀಸರೊಂದಿಗಿನ ವಾಗ್ವಾದದ ವೀಡಿಯೋ ಇಲ್ಲಿದೆ
ಇದನ್ನೂ ಓದಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್ ಕೆರೆಹಳ್ಳಿ ಮತ್ತೆ ಬಂಧನ
ಈ ನಡುವೆ ನಿರ್ಬಂಧದ ನಡುವೆಯೂ ಪುನೀತ್ ಕೆರಹಳ್ಳಿ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ್ದು, ಅವರಿಗೆ ನೋಟಿಸ್ ನೀಡಲು ಮುಂದಾದ ಯಲಬುರ್ಗಾ ಪೊಲೀಸರೊಂದಿಗೆ ಅವರು ವಾಗ್ವಾದ ನಡೆಸಿದ್ದಾರೆ. ನೋಟಿಸ್ ನಕಲಿ, ಇದು ಕಲರ್ ಝರಾಕ್ಸ್ ಎಂದು ವಾದಿಸಿದ ಪುನೀತ್, ತಾವು ದರ್ಶನ ಮಾಡುವುದಾಗಿ ಒತ್ತಾಯಿಸಿದ್ದಾರೆ. ಪೊಲೀಸರು ನಿಯಮ ಪಾಲನೆಗೆ ಒತ್ತಾಯಿಸಿ ಸ್ಥಳ ತೊರೆಯುವಂತೆ ಸೂಚಿಸಿದ ನಂತರ ಕೆಲಕಾಲದ ವಾಗ್ವಾದ ನಡೆದಿದೆ. ಬಳಿಕ ಪೊಲೀಸರೊಂದಿಗೆ ಪುನೀತ್ ಅಂಜನಾದ್ರಿ ಬೆಟ್ಟ ಏರಿದ್ದಾರೆ ಎನ್ನಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:39 am, Sun, 22 March 26