ಕೊಪ್ಪಳ: ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಎರಡು ಗುಂಪುಗಳ ಗಲಾಟೆ

ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ಜಿಲ್ಲೆ ಕಾರಟಗಿ ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ನಡೆದಿದೆ. ಸದ್ಯ ಕೊಪ್ಪಳ ಎಸ್​ಪಿ, ಐಜಿಪಿ ಬೂದಗುಂಪಾ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಗಲಾಟೆ ಸಂಬಂಧ ಕೆಲವರನ್ನು ವಶಕ್ಕೆ ಪಡೆಯಲಾಗಿದೆ.

ಕೊಪ್ಪಳ: ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಎರಡು ಗುಂಪುಗಳ ಗಲಾಟೆ
ಮೀಸಲಾತಿಗಾಗಿ ಗಲಾಟೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on:Aug 13, 2023 | 10:52 AM

ಕೊಪ್ಪಳ: ಗ್ರಾಮ ಪಂಚಾಯಿತಿ (Gram Panchayat) ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ಜಿಲ್ಲೆ ಕಾರಟಗಿ (Kartagi) ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳು ಕಟ್ಟಿಗೆ, ಕಲ್ಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿವೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೊಲೀಸರ ನಿಯೋಜಿಸಲಾಗಿದೆ.

ಬೂದಗುಂಪಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಎಸ್​​ಟಿ ಮೀಸಲಾತಿ ಬಂದಿತ್ತು. ಇದನ್ನು ಪ್ರಶ್ನಿಸಿ ಇತರೆ ಸಮುದಾಯಗಳು ಕೋರ್ಟ್ ಮೆಟ್ಟಿಲೇರಿದ್ದವು. ಈ ಹಿನ್ನೆಲೆಯಲ್ಲಿ ನಿನ್ನೆ (ಆ.12) ರಾತ್ರಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ವಾಗ್ವಾದ ವಿಕೋಪಕ್ಕೆ ತಿರುಗಿ ಎರಡು ಸಮುದಾಯಗಳ ನಡುವೆ ನಡೆದ ಗಲಾಟೆ ನಡೆದಿದೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ

ಸದ್ಯ ಕೊಪ್ಪಳ ಎಸ್​ಪಿ, ಐಜಿಪಿ ಬೂದಗುಂಪಾ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಗಲಾಟೆ ಸಂಬಂಧ ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್​ಪಿ ನೇತೃತ್ವದಲ್ಲಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 am, Sun, 13 August 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ