Koppal rain: ಕೊಪ್ಪಳದಲ್ಲಿ ಭಾರೀ ಮಳೆಗೆ ಕೊಚ್ಚಿಹೋದ ರಸ್ತೆ | video

| Updated By: ಸಾಧು ಶ್ರೀನಾಥ್​

Updated on: Oct 12, 2022 | 12:42 PM

ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರಿ ಮಳೆಗೆ ರಸ್ತೆಯೊಂದು ಕೊಚ್ಚಿ ಹೋಗಿದೆ.

Koppal rain: ಕೊಪ್ಪಳದಲ್ಲಿ ಭಾರೀ ಮಳೆಗೆ ಕೊಚ್ಚಿಹೋದ ರಸ್ತೆ | video
ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರಿ ಮಳೆಗೆ ರಸ್ತೆಯೊಂದು ಕೊಚ್ಚಿ ಹೋಗಿದೆ.
Follow us on

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ (Koppal rain) ಅಪಾರ ಹಾನಿಯಾಗಿದೆ. ಕರ್ನಾಟಕದ ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರಿ ಮಳೆಗೆ ರಸ್ತೆಯೊಂದು (Road) ಕೊಚ್ಚಿ ಹೋಗಿದೆ. ಎಎನ್‌ಐ ಸುದ್ದಿ ಸಂಸ್ಥೆ ಹಂಚಿಕೊಂಡಿರುವ ವಿಡಿಯೋದಲ್ಲಿ ರಸ್ತೆ ಜಲಾವೃತಗೊಂಡಿರುವುದನ್ನು ಕಾಣಬಹುದಾಗಿದೆ. ಸ್ಥಳೀಯರು ಸಂಕಷ್ಟ ಎದುರಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡು ಬಂದಿದೆ. ಮಳೆ ನೀರಿನಿಂದ ರಸ್ತೆ ಸಂಪೂರ್ಣ ಜಲಾವೃತವಾಗಿವೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಕರ್ನಾಟಕ, ತಮಿಳುನಾಡು ಮತ್ತು ರಾಯಲಸೀಮಾದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತು ಒಳನಾಡಿನಲ್ಲಿ ಭಾರೀ ಮಳೆಯ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ ವೆಬ್‌ ಡೆಸ್ಕ್‌ ವರದಿ ಮಾಡಿದೆ.