ಕೊಪ್ಪಳದ ಏಳು ವರ್ಷ ಮಗುವಿಗೆ ವಕ್ಕರಿಸಿದ ಕೊರೊನಾ

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪೋಷಕರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಗುವಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಕೊರೊನಾ ಪರೀಕ್ಷೆಯಿಂದ ಮಗುವಿಗೆ ರಕ್ಕಸ ಕೊರೊನಾ ಸೋಂಕು ಇರುವುದು ದೃಢವಾಗಿದೆ.

  • TV9 Web Team
  • Published On - 12:20 PM, 4 Apr 2021
ಕೊಪ್ಪಳದ ಏಳು ವರ್ಷ ಮಗುವಿಗೆ ವಕ್ಕರಿಸಿದ ಕೊರೊನಾ
ಕೊರೊನಾ ಎರಡನೇ ಅಲೆ ಆರ್ಭಟ (ಪ್ರಾತಿನಿಧಿಕ ಚಿತ್ರ)

ಕೊಪ್ಪಳ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ತಾಂಡವಾಡುತ್ತಿದೆ. ರಾಜ್ಯದೆಲ್ಲೆಡೆ ದಿನೇ ದಿನೇ ಕೊರೊನಾ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಏಳು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢವಾಗಿದೆ. ಡೆಂಗ್ಯೂ ಜ್ವರ ಹಿನ್ನೆಲೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಕೊರೊನಾ ಸೋಂಕು ತಗುಲಿರುವ ಮಾಹಿತಿ ತಿಳಿದುಬಂದಿದೆ.

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪೋಷಕರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಗುವಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಕೊರೊನಾ ಪರೀಕ್ಷೆಯಿಂದ ಮಗುವಿಗೆ ರಕ್ಕಸ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯ ವೆಂಟಿಲೇಟರ್​ನಲ್ಲಿ ಮಗು ಚಿಕಿತ್ಸೆ ಪಡೆಯುತ್ತಿದೆ.

ಇನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ 12 ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ. ಸೋಂಕಿತ ವಿದ್ಯಾರ್ಥಿಗಳಿದ್ದ ವಸತಿ ಶಾಲೆಯನ್ನು ಸೀಲ್​ಡೌನ್ ಮಾಡಲಾಗಿದೆ. 7 ರಿಂದ 10ನೇ ತರಗತಿಯವರೆಗೆ ಸುಮಾರು 162 ವಿದ್ಯಾರ್ಥಿಗಳು ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಸತಿ ಶಾಲೆಯಲ್ಲಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ ಸುಮಾರು 12 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವ ಮಾಹಿತಿ ತಿಳಿದುಬಂದಿದೆ.

ಸೀಲ್​ಡೌನ್​ ಆಗಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ

8ನೇ ಮತ್ತು 9ನೇ ತರಗತಿಯ ತಲಾ ಐದು ಮಂದಿ ವಿದ್ಯಾರ್ಥಿಗಳಿಗೆ ಮತ್ತು 10ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರಿಂದ ತಾಲೂಕು ಆಡಳಿತ ಮೂರಾರ್ಜಿ ವಸತಿ ಶಾಲೆಯನ್ನು ಸೀಲ್​ಡೌನ್ ಮಾಡಿದೆ.

ರಾಜ್ಯದ ರಾಜಧಾನಿಯಲ್ಲಿ ದಿನೇದಿನೇ ಕೊವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಇಂದು 2,808 ಕೊವಿಡ್ ಕೇಸ್ ಪತ್ತೆಯಾಗುವ ಸಾಧ್ಯತೆಯಿದೆ.

ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿದ್ದರೂ ಗದಗ ಜಿಲ್ಲೆಯ ಜನರು ತಲೆ ಕೆಡಿಸಿಕೊಳ್ಳದೆ ಬೆಟಗೇರಿಯಲ್ಲಿ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೆ ಜನರು ತರಕಾರಿ ಖರೀದಿಸುತ್ತಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ಆಡಳಿತ ಸರ್ಕಾರದ ಆದೇಶ ಪಾಲನೆಗೆ ಮುಂದಾಗಿದೆ.

ಇದನ್ನೂ ಓದಿ

India Coronavirus Update: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,249 ಜನರಿಗೆ ಕೊರೊನಾ ಸೋಂಕು, 513 ಬಲಿ

ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಬಂದ್​; ನಿಯಮ ಉಲ್ಲಂಘನೆ ಶಿಕ್ಷಾರ್ಹ ಅಪರಾಧ: ಜಿಲ್ಲಾಡಳಿತದಿಂದ ಆದೇಶ

(Seven year old child has been confirmed to have a corona virus in koppal)