2ನೇ ಬಾರಿ ಸಿಎಂ ಆಗಿದಕ್ಕೆ ಪತ್ರ ಬರೆದಿದ್ದ ವಿದ್ಯಾರ್ಥಿನಿಗೆ ಸಿದ್ದರಾಮಯ್ಯ ಮರು ಪತ್ರ ಬರೆದು ಪ್ರಶಂಸಿಸಿದ್ದು ಹೀಗೆ

ಕೊಪ್ಪಳದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿಯ ಶ್ರೆಯಾಂಕ ವಿ.ಮೆಣಸಗಿ ಎಂಬ ವಿದ್ಯಾರ್ಥಿನಿ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನಾ ಪತ್ರ ಬರೆದಿದ್ದರು. ಇದಕ್ಕೆ ಸಿಎಂ ಪ್ರತಿಕ್ರಿಯಿಸಿದ್ದು ವಿದ್ಯಾರ್ಥಿನಿ ಸಂತಸ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ: ಎರಡನೇ ಭಾರಿಗೆ ಸಿಎಂ ಆಗಿದ್ದಕ್ಕೆ ಸಿದ್ದರಾಮಯ್ಯನವರಿಗೆ(Siddaramaiah) ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದ 8ನೇ ತರಗತಿ ವಿದ್ಯಾರ್ಥಿನಿಗೆ(Student) ಸಿಎಂ ಸಿದ್ದರಾಮಯ್ಯ ಪತ್ರ(Letter) ಬರೆದು ಧನ್ಯವಾದ ತಿಳಿಸಿದ್ದಾರೆ. ಪತ್ರ ಓದಿ ಅತೀವ ಸಂತಸಪಟ್ಟ ಸಿದ್ದರಾಮಯ್ಯನವರು ವಿದ್ಯಾರ್ಥಿನಿ ಪತ್ರಕ್ಕೆ ಮರಳಿ ಪತ್ರ ಬರೆದಿದ್ದಾರೆ. ಕೊಪ್ಪಳದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿಯ ಶ್ರೆಯಾಂಕ ವಿ.ಮೆಣಸಗಿ ಎಂಬ ವಿದ್ಯಾರ್ಥಿನಿ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನಾ ಪತ್ರ ಬರೆದಿದ್ದರು. ಇದಕ್ಕೆ ಸಿಎಂ ಪ್ರತಿಕ್ರಿಯಿಸಿದ್ದು ವಿದ್ಯಾರ್ಥಿನಿ ಸಂತಸ ವ್ಯಕ್ತಪಡಿಸಿದ್ದಾರೆ.

ಕಳೆದ ಮೇ ತಿಂಗಳಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದೆಗೆ ಏರಿದೆ. ರಾಜ್ಯ ಕೈ ಪಡೆಯ ಮಾಸ್ ಲೀಡರ್ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಎರಡನೇ ಭಾರಿಗೆ ಮುಖ್ಯಮಂತ್ರಿ‌ ಖುರ್ಚಿ ಏರುತ್ತಿದ್ದಂತೆ ಕೊಪ್ಪಳದ ಪುಟ್ಟ ಬಾಲಕಿಯೊಬ್ಬಳು ಸಿಎಂ ಸಿದ್ದರಾಮಯ್ಯಗೆ ಅಭಿನಂದಿಸಿ ಪತ್ರ ಬರೆದಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಪತ್ರದ ಮುಖೇನವೇ ಬಾಲಕಿಗೆ ಉತ್ತರ ನೀಡಿದ್ದಾರೆ. ಮೇ 29 ರಂದು ಕೊಪ್ಪಳದ ಮಾಸ್ತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಶ್ರೇಯಾಂಕ ಮಣಸಿಗೆ ಎನ್ನೋರು ಪತ್ರ ಬರೆದು ಅಭಿನಂದಿಸಿದ್ದರು.‌ ರಾಜ್ಯದಲ್ಲಿ ಎರಡನೇ ಬಾರಿಗೆ ಸಿಎಂ ಆಗುತ್ತಿದ್ದೀರಿ. ಕಳೆದ ಬಾರಿಯಂತೆ ಈ ಬಾರಿಯೂ ಉತ್ತಮ, ಕಳಂಕ ರಹಿತ ಆಡಳಿತ ನೀಡಿ. ಬಡವರು, ದೀನದಲಿತರ ಆಶಾಕಿರವಾಗಿರೋ ತಮಗೆ ಅಭಿನಂದನೆಗಳು ಅಂತ ಬಾಲಕಿ ಶಹಬ್ಬಾಶಿಗರಿ ನೀಡಿದ್ದಳು. 2013 ರಿಂದ 18 ರವೆಗೆ ಕಳಂಕ ರಹಿತ ಆಡಳಿತ ನೀಡಿ ಭೇಷ್ ಎನ್ನಿಸಿಕೊಂಡಿದ್ದೀರಿ, ಮತ್ತೊಮ್ಮೆ ರಾಜ್ಯದ ಜನಮೆಚ್ಚಿದ ನಾಯಕರಾಗಿ ಹೊರಹೊಮ್ಮಿ.ಈ ಬಾರಿಯೂ ಜನಮೆಚ್ಚುವ ಕೆಲಸ‌ ಮಾಡಿ ಅಂತ ಶುಭ ಹಾರೈಸಿದ್ದರು.

ಇದನ್ನೂ ಓದಿ: Birthday Boy Yatindra: ಯತೀಂದ್ರ ಸಿದ್ದರಾಮಯ್ಯ ಹುಟ್ಟುಹಬ್ಬ, ಮೈಸೂರು ಇಂದಿರಾ ಕ್ಯಾಂಟೀನ್ ಬಂದವರಿಗೆ ಹೋಳಿಗೆ ಊಟ!

ಇನ್ನು ಬಾಲಕಿ ಪತ್ರ ಸಿಎಂ ಸಿದ್ದರಾಮಯ್ಯ ಕಚೇರಿಗೆ ತಲುಪುತ್ತಿದ್ದಂತೆ. ಪುಟ್ಟ ಬಾಲಕಿಯ ಪತ್ರ ಓದಿರೋ ಸಿಎಂ ಸಿದ್ದರಾಮಯ್ಯ ಖುದ್ದು ಬಾಲಕಿಗೆ ಪತ್ರ ಬರೆದು ಶುಭ ಹಾರೈಸಿದ್ದಾರೆ. ಇಂದಿನ ಮಕ್ಕಳೇ ನಾಳಿನ ರಾಷ್ಟ್ರ ನಿರ್ಮಾತೃಗಳು. ಚಿಕ್ಕ ವಯಸ್ಸಿನಲ್ಲೆ ನಿನಗಿರೋ ಸಾಮಾಜಿಕ ಕಾಳಜಿ ಮೆಚ್ಚುವಂತದ್ದು ಎಂದು ಉತ್ತರ ನೀಡಿದ್ದಾರೆ. ಅಷ್ಟೆ ಅಲ್ಲದೇ ಜೀವನದಲ್ಲಿ ಶ್ರದ್ದೆಯಿಂದ ವಿಧ್ಯೆ ಕಲಿತು ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡು ಅಂತ ಪುಟ್ಟ ‌ಬಾಲಕಿಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಸದ್ಯ ಸಿದ್ದು ಪತ್ರ ಬರೆದಿರೋದನ್ನ ನೋಡಿ ಬಾಲಕಿ ಫುಲ್‌ಖುಷ್ ಆಗಿದ್ದಾಳೆ. ತನ್ನ ಪತ್ರಕ್ಕೆ ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದು ಇನ್ನಿಲ್ಲದ ಖುಷಿ ನೀಡಿದ್ದು ಪುಟ್ಟ ಪೋರಿಯ ಪೋಷಕರು ಕೂಡಾ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಕೊಪ್ಪಳಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:23 am, Wed, 28 June 23

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us