ಹೆತ್ತವರನ್ನೇ ರಾಡ್‌ನಿಂದ ಹೊಡೆದು ಸಾಯ್ಸಿದ, ಕೊಲೆಗೆ ಕಾರಣ ತಿಳಿದು ಬಂದಿಲ್ಲ!
ಕೊಪ್ಪಳ: ಹೆತ್ತವರನ್ನೇ ಮಗ ರಾಡ್‌ನಿಂದ ಹೊಡೆದು ಹತ್ಯೆಗೈದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಕ್ಕಮ್ಮ(55), ಗಿರಿಯಪ್ಪ(60) ಮಗ ರಮೇಶ್ನಿಂದ ಮೃತಪಟ್ಟ ಹೆತ್ತವರು. ಮಾನಸಿಕ ಖಿನ್ನತೆಗೊಳಗಾಗಿದ್ದ ರಮೇಶ್ ತಂದೆ ತಾಯಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ತಾಯಿ ಅಕ್ಕಮ್ಮ ಮನೆಯಲ್ಲೇ ಮೃತಪಟ್ಟಿದ್ದು, ತಂದೆ ಗಿರಿಯಪ್ಪ ಆಸ್ಪತ್ರೆಗೆ ತೆರಳುವಾಗ ಮಾರ್ಗ ಮಧ್ಯೆ ಉಸಿರು ಚೆಲ್ಲಿದ್ದಾರೆ. ಮಗ ರಮೇಶ್ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ: ಹೆತ್ತವರನ್ನೇ ಮಗ ರಾಡ್‌ನಿಂದ ಹೊಡೆದು ಹತ್ಯೆಗೈದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಕ್ಕಮ್ಮ(55), ಗಿರಿಯಪ್ಪ(60) ಮಗ ರಮೇಶ್ನಿಂದ ಮೃತಪಟ್ಟ ಹೆತ್ತವರು.
ಮಾನಸಿಕ ಖಿನ್ನತೆಗೊಳಗಾಗಿದ್ದ ರಮೇಶ್ ತಂದೆ ತಾಯಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ತಾಯಿ ಅಕ್ಕಮ್ಮ ಮನೆಯಲ್ಲೇ ಮೃತಪಟ್ಟಿದ್ದು, ತಂದೆ ಗಿರಿಯಪ್ಪ ಆಸ್ಪತ್ರೆಗೆ ತೆರಳುವಾಗ ಮಾರ್ಗ ಮಧ್ಯೆ ಉಸಿರು ಚೆಲ್ಲಿದ್ದಾರೆ. ಮಗ ರಮೇಶ್ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 11:38 am, Tue, 2 June 20