ಹೆತ್ತವರನ್ನೇ ರಾಡ್​ನಿಂದ ಹೊಡೆದು ಸಾಯ್ಸಿದ, ಕೊಲೆಗೆ ಕಾರಣ ತಿಳಿದು ಬಂದಿಲ್ಲ!

ಕೊಪ್ಪಳ: ಹೆತ್ತವರನ್ನೇ ಮಗ ರಾಡ್‌ನಿಂದ ಹೊಡೆದು ಹತ್ಯೆಗೈದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಕ್ಕಮ್ಮ(55), ಗಿರಿಯಪ್ಪ(60) ಮಗ ರಮೇಶ್​ನಿಂದ ಮೃತಪಟ್ಟ ಹೆತ್ತವರು. ಮಾನಸಿಕ ಖಿನ್ನತೆಗೊಳಗಾಗಿದ್ದ ರಮೇಶ್ ತಂದೆ ತಾಯಿಯನ್ನು ರಾಡ್​ನಿಂದ ಹೊಡೆದು ಕೊಲೆ ಮಾಡಿದ್ದಾನೆ. ತಾಯಿ ಅಕ್ಕಮ್ಮ ಮನೆಯಲ್ಲೇ ಮೃತಪಟ್ಟಿದ್ದು, ತಂದೆ ಗಿರಿಯಪ್ಪ ಆಸ್ಪತ್ರೆಗೆ ತೆರಳುವಾಗ ಮಾರ್ಗ ಮಧ್ಯೆ ಉಸಿರು ಚೆಲ್ಲಿದ್ದಾರೆ. ಮಗ ರಮೇಶ್​ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆತ್ತವರನ್ನೇ ರಾಡ್​ನಿಂದ ಹೊಡೆದು ಸಾಯ್ಸಿದ, ಕೊಲೆಗೆ ಕಾರಣ ತಿಳಿದು ಬಂದಿಲ್ಲ!
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 02, 2020 | 11:48 AM

ಕೊಪ್ಪಳ: ಹೆತ್ತವರನ್ನೇ ಮಗ ರಾಡ್‌ನಿಂದ ಹೊಡೆದು ಹತ್ಯೆಗೈದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಕ್ಕಮ್ಮ(55), ಗಿರಿಯಪ್ಪ(60) ಮಗ ರಮೇಶ್​ನಿಂದ ಮೃತಪಟ್ಟ ಹೆತ್ತವರು.

ಮಾನಸಿಕ ಖಿನ್ನತೆಗೊಳಗಾಗಿದ್ದ ರಮೇಶ್ ತಂದೆ ತಾಯಿಯನ್ನು ರಾಡ್​ನಿಂದ ಹೊಡೆದು ಕೊಲೆ ಮಾಡಿದ್ದಾನೆ. ತಾಯಿ ಅಕ್ಕಮ್ಮ ಮನೆಯಲ್ಲೇ ಮೃತಪಟ್ಟಿದ್ದು, ತಂದೆ ಗಿರಿಯಪ್ಪ ಆಸ್ಪತ್ರೆಗೆ ತೆರಳುವಾಗ ಮಾರ್ಗ ಮಧ್ಯೆ ಉಸಿರು ಚೆಲ್ಲಿದ್ದಾರೆ. ಮಗ ರಮೇಶ್​ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:38 am, Tue, 2 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us