ಗೃಹ ಸಚಿವ ಕೆಲಸ ಬಿಟ್ಟು ಬೇರೆಯೇ ಮಾಡ್ತಾನೆ: ಏಕವಚನದಲ್ಲೇ ಪ್ರಿಯಾಂಕ್ ಖರ್ಗೆ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಕೊಪ್ಪಳದಲ್ಲಿ ಸಂಸದ ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ವಿರುದ್ಧ ನಕಲಿ ಸಿಡಿ ತಯಾರಿಸಿರುವುದನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದರು. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ, ಗೃಹ ಸಚಿವರು ತಮ್ಮ ಇಲಾಖೆ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧವೂ ಟೀಕಾಪ್ರಹಾರ ನಡೆಸಿದರು.

ಗೃಹ ಸಚಿವ ಕೆಲಸ ಬಿಟ್ಟು ಬೇರೆಯೇ ಮಾಡ್ತಾನೆ: ಏಕವಚನದಲ್ಲೇ ಪ್ರಿಯಾಂಕ್ ಖರ್ಗೆ ವಿರುದ್ಧ ಶ್ರೀರಾಮುಲು ವಾಗ್ದಾಳಿ
ಸಾಂದರ್ಭಿಕ ಚಿತ್ರ
Image Credit source: Google
Edited By:

Updated on: Oct 17, 2026 | 5:32 PM

ಮುಖ್ಯಾಂಶಗಳು

  • ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ನಕಲಿ ಹಾಗೂ ಬೋಗಸ್ ಸಿಡಿ
  • ರಾಹುಲ್ ಗಾಂಧಿ ಹಾಗೂ 'ಕಾಕ್ರೋಚ್ ಪಾರ್ಟಿ' ವಿರುದ್ಧ ವಾಗ್ದಾಳಿ
  • ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ

ಕೊಪ್ಪಳ, ಅ.17: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದೆ. ಆಡಳಿತ ಹಾಗೂ ವಿರೋಧ ಪಕ್ಷಗಳ ನಡೆವೇ ಭಾರೀ ಮಾತಿನ ಚಕಮಕಿ ನಡೆಯುತ್ತಿದೆ. ಇದೀಗ ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಯ ಕಾರ್ಯವೈಖರಿಯ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಸಂಸದ ಬಿ. ಶ್ರೀರಾಮುಲು, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ನಕಲಿ ಹಾಗೂ ಬೋಗಸ್ ಸಿಡಿ ತಯಾರಿಸಲಾಗಿದೆ ಎಂದು ಆರೋಪಿಸಿದ್ದು, ಈ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ವೇಳೆ ರಾಜ್ಯದ ಗೃಹಸಚಿವ ಪ್ರಿಯಾಂಕ ಖರ್ಗೆ ಮೇಲೆ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಕೆಳಗೆ ಇಳಿಸಲು ನಕಲಿ ಸಿಡಿ ಸಿದ್ಧಪಡಿಸಲಾಗಿದೆ. ಯಾರನ್ನೋ ಒಬ್ಬರನ್ನು ಬುರ್ಖಾ ಹಾಕಿ ಕೂರಿಸಿ ಮಾತನಾಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಆದ ಈ ಅಪಮಾನ ಯಾರಿಗೂ ಆಗಬಾರದು. ರಾಜ್ಯದಲ್ಲಿ ಹಿಂದುಳಿದ ವರ್ಗದ ನಾಯಕನಿಗೆ ಅಪಮಾನ ಮಾಡಲಾಗುತ್ತಿದ್ದು, ಸಿಎಂ ಇನ್ವಾಲ್ಮೆಂಟ್‌ನಿಂದಲೇ ಈ ಸಿಡಿ ತಯಾರಾಗಿದೆ ಎಂದು ಶ್ರೀರಾಮುಲು ಗಂಭೀರ ಆರೋಪ ಮಾಡಿದರು. ತಪ್ಪಿತಸ್ಥರನ್ನು ಬಂಧಿಸುವ ಬದಲು ಸೇಡಿನ ರಾಜಕಾರಣ ಆರಂಭವಾಗಿದ್ದು, ಬೆಳೆಯುತ್ತಿರುವವರನ್ನು ತುಳಿಯುವ ಕೆಲಸ ನಡೆಯುತ್ತಿದೆ. ಹೀಗಾಗಿ ಈ ಸ್ಟಿಂಗ್ ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಮತ್ತು ಜೆಡಿಎಸ್‌ನವರೇ ಸ್ಟಿಂಗ್ ಮಾಡಿಸಿದ್ದಾರೆ ಎಂಬ ಸಚಿವ ಶಿವರಾಜ್ ತಂಗಡಗಿ ಆರೋಪಕ್ಕೆ ತಿರುಗೇಟು ನೀಡಿದ ಶ್ರೀರಾಮುಲು, “ತಂಗಡಗಿ ಅವರಿಗೆ ಜ್ಞಾನ ಕಡಿಮೆ, ಅವರಿಗೆ ಅಧಿಕಾರದ ಪಿತ್ತ ತಲೆಗೆ ಏರಿದೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ: ಅಚ್ಚರಿಯ ಕಾರಣ ನೀಡಿದ ಮಾಜಿ ಶಾಸಕಿ

ರಾಹುಲ್ ಗಾಂಧಿ ಹಾಗೂ ‘ಕಾಕ್ರೋಚ್ ಪಾರ್ಟಿ’ ವಿರುದ್ಧ ವಾಗ್ದಾಳಿ:

ಇನ್ನು ಇದೇ ವೇಳೆ ರಾಹುಲ್ ಗಾಂಧಿ ಕಾಂಗ್ರೆಸ್ ಪಾರ್ಟಿ ಬಿಟ್ಟು ‘ಕಾಕ್ರೋಚ್ ಪಾರ್ಟಿ’ ಹಿಡಿದಿದ್ದಾರೆ ಎಂದು ವ್ಯಂಗ್ಯವಾಡಿದ ಶ್ರೀರಾಮುಲು, ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿ ಜಿರಳೆ (ಕಾಕ್ರೋಚ್) ಪಾರ್ಟಿಯೊಂದಿಗೆ ಕೈಜೋಡಿಸಲು ಹೊರಟಿದ್ದಾರೆ. ಜಿರಳೆ ಜೊತೆ ಸೇರಿ ದೊಡ್ಡ ನಾಯಕನಾಗಲು ಹೊರಟಿರುವ ರಾಹುಲ್ ಗಾಂಧಿಗೆ ದೇಶದ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು. “ಕಾಕ್ರೋಚ್ ಪಾರ್ಟಿಗೆ ಡಿಕೆ ಶಿವಕುಮಾರ್ ಫಂಡಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಕಾಕ್ರೋಚ್ ಪಾರ್ಟಿಗೆ ಶಿವಕುಮಾರ್ ಎಟಿಎಂ ಇದ್ದ ಹಾಗೆ” ಎಂದು ಟೀಕಿಸಿದ ಅವರು, ರಾಹುಲ್ ಗಾಂಧಿ ಶಿವಕುಮಾರ್ ಅವರ ಕಾಲರ್ ಹಿಡಿದು ಎಳೆದಿದ್ದಾರೆ ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ:

ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ‘ಸೋಷಿಯಲ್ ಮೀಡಿಯಾ ಮಂತ್ರಿ’ ಎಂದು ಕರೆದ ಶ್ರೀರಾಮುಲು, “ಬೆಳಿಗ್ಗೆ ಎದ್ದರೆ ಸೋಶಿಯಲ್ ಮೀಡಿಯಾ ನೋಡ್ತಾನೆ, ಯಾರು ಆತನ ವಿರುದ್ಧ ಮಾತಾಡ್ತಾರೆ ಅವರ ಮೇಲೆ ಕೇಸ್ ಹಾಕ್ತಾನೆ ಹೊರತು ತನ್ನ ಇಲಾಖೆಯಲ್ಲಿ ಸರಿಯಾಗಿ ಕೆಲಸ ಮಾಡ್ತಾ ಇಲ್ಲ” ಎಂದು ಕಿಡಿಕಾರಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Sat, 17 October 26

ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us