ಕೊಪ್ಪಳದ ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಆರೋಪ; ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಪತ್ನಿ ವಿರುದ್ಧ ಎಫ್ಐಆರ್ ದಾಖಲು

ರಿಯಲ್ ಎಸ್ಟೇಟ್ ಹೆಸರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಕಲ್ಲು ಗಣಿಗಾರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ನಿ ಸಿಮ್ರಾನ್ ಸೈಯದ್ ವಿರುದ್ಧ ಕೊಪ್ಪಳ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳದ ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಆರೋಪ; ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಪತ್ನಿ ವಿರುದ್ಧ ಎಫ್ಐಆರ್ ದಾಖಲು
ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ
Follow us
TV9 Web
| Updated By: ಆಯೇಷಾ ಬಾನು

Updated on:Jun 02, 2022 | 10:08 AM

ಕೊಪ್ಪಳ: ಕೊಪ್ಪಳದ ಗದಗ ರಸ್ತೆಯ ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಆರೋಪ ಕೇಳಿ ಬಂದಿದ್ದು ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಪತ್ನಿ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಆರೋಪವಿದ್ದು ಪತಿ ಮಾಡಿದ ತಪ್ಪಿಗೆ ಪತ್ನಿ ವಿರುದ್ಧ ಪ್ರಕರಣ ದಾಖಲಾಗಿದೆ.

ರಿಯಲ್ ಎಸ್ಟೇಟ್ ಹೆಸರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಕಲ್ಲು ಗಣಿಗಾರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ನಿ ಸಿಮ್ರಾನ್ ಸೈಯದ್ ವಿರುದ್ಧ ಕೊಪ್ಪಳ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಲ್ಪಾ ಗ್ರ್ಯಾಂಡ್ ಹೋಟೆಲ್ ಹಿಂಭಾಗ ಸರ್ವೇ ನಂಬರ್ 656 ರಲ್ಲಿ ಅನಧಿಕೃತ ಗಣಿಗಾರಿಕೆ, ಕಲ್ಲು ಬ್ಲಾಸ್ಟಿಂಗ್ ಮಾಡಿರುವ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಇದನ್ನೂ ಓದಿ: Samrat Prithviraj: ‘ಆರ್​​ಆರ್​ಆರ್​​’, ‘ಧಾಕಡ್​’ ಹಾದಿಯಲ್ಲಿ ‘ಸಾಮ್ರಾಟ್ ಪೃಥ್ವಿರಾಜ್’; ವಾರಾಣಸಿಯಲ್ಲಿ ಚಿತ್ರದ ಪ್ರಚಾರ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೆ.ಎಂ ಸೈಯದ್ ಪತ್ನಿ ಹೆಸರಿನ ಸರ್ವೇ ನಂಬರ್ 656, 4 ಎಕರೆ, 16 ಗುಂಟೆಯ, ಪಟ್ಟಾ ಭೂಮಿಯಲ್ಲಿ ಅನಧಿಕೃತ, ಗಣಿಗಾರಿಕೆ ಮತ್ತು ಸ್ಥಳದಲ್ಲಿ ಬ್ಲಾಸ್ಟಿಂಗ್ ಮಾಡಿ ಕಲ್ಲು ಅಗೆದಿರುವ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದ್ದು ಕಲ್ಲುಗಣಿಗಾರಿಕೆಯಿಂದ ಮಳೆ ಮಲ್ಲೇಶ್ವರ ಬೆಟ್ಟದ ಪರಿಸರ ಹಾಗೂ ಐತಿಹಾಸಿಕ ಶಾಸನಗಳಿಗೆ ಧಕ್ಕೆ ಆಗಿರುವ ಆರೋಪ ಸಹ ಇದೆ. ಗಣಿ ಮತ್ತು ಭೂವಿಜ್ಞಾನ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ಬಂದ ಹಿನ್ನೆಲೆ ಜಂಟಿಯಾಗಿ ಎರಡು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇ 31 ಮಂಗಳವಾರ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದಾಗ ಹೇರಳವಾಗಿ ಕಲ್ಲುಗಳನ್ನು ಅಗೆಯಲಾಗಿತ್ತು. ಕಲ್ಲುಗಳಿಗೆ ಡ್ರಿಲಿಂಗ್ ಮಾಡಿ ಸ್ಫೋಟಿಸಿದ್ದಾರೆ. ಹೀಗಾಗಿ ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ದೂರಿನ ಮೇರೆಗೆ ಕೊಪ್ಪಳ ನಗರ ಠಾಣೆಯಲ್ಲಿ ಸೈಯದ್ ಪತ್ನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದನ್ನೂ ಓದಿ: Rahul Gandhi: ಇಡಿ ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ರಾಹುಲ್ ಗಾಂಧಿ, ಜೂನ್ 8ಕ್ಕೆ ಸೋನಿಯಾ ಗಾಂಧಿ ವಿಚಾರಣೆ

Published On - 10:08 am, Thu, 2 June 22

ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ