ಕೊಪ್ಪಳ: ಕನ್ನಡ ಹಾಡು ಗಾಯನ ಕಾರ್ಯಕ್ರಮದಲ್ಲಿ ತಲೆ ಸುತ್ತಿ ಕೆಳಗೆ ಬಿದ್ದ ವಿದ್ಯಾರ್ಥಿಗಳು

ಕೊಪ್ಪಳದ ಸಾರ್ವಜನಿಕ ಮೈದಾದನಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಬಿಸಿಲಿನ ಝಳಕ್ಕೆ ವಿದ್ಯಾರ್ಥಿಗಳು ತಲೆ ಸುತ್ತಿ ಕೆಳಗೆ ಬಿದ್ದಿದ್ದಾರೆ. ತಲೆ ಸುತ್ತಿ ಬಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಕರು ಆರೈಕೆ ಮಾಡಿದ್ರು.

ಕೊಪ್ಪಳ: ಕನ್ನಡ ಹಾಡು ಗಾಯನ ಕಾರ್ಯಕ್ರಮದಲ್ಲಿ ತಲೆ ಸುತ್ತಿ ಕೆಳಗೆ ಬಿದ್ದ ವಿದ್ಯಾರ್ಥಿಗಳು
ಕನ್ನಡ ಹಾಡು ಗಾಯನ ಕಾರ್ಯಕ್ರಮದಲ್ಲಿ ತಲೆ ಸುತ್ತಿ ಕೆಳಗೆ ಬಿದ್ದ ವಿದ್ಯಾರ್ಥಿಗಳು
Follow us
TV9 Web
| Updated By: ಆಯೇಷಾ ಬಾನು

Updated on: Oct 28, 2021 | 12:21 PM

ಕೊಪ್ಪಳ: ಕನ್ನಡಕ್ಕಾಗಿ ನಾವು ಅಭಿಯಾನದಡಿ ಕೊಪ್ಪಳದಲ್ಲಿ ನಡೆದ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಲೆ ಸುತ್ತಿ ಕೆಳಗೆ ಬಿದ್ದ ಆತಂಕಕಾರಿ ಘಟನೆ ನಡೆದಿದೆ. ಕೊಪ್ಪಳದ ಸಾರ್ವಜನಿಕ ಮೈದಾದನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಬಿಸಿಲಿನ ಝಳಕ್ಕೆ ವಿದ್ಯಾರ್ಥಿಗಳು ತಲೆ ಸುತ್ತಿ ಕೆಳಗೆ ಬಿದ್ದಿದ್ದಾರೆ. ತಲೆ ಸುತ್ತಿ ಬಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಕರು ಆರೈಕೆ ಮಾಡಿದ್ರು.

ಇನ್ನು ಕೆಲ ವಿದ್ಯಾರ್ಥಿಗಳು ಹಾಡು ಹಾಡುವುದನ್ನು ಬಿಟ್ಟು ಮನೆಗಳತ್ತ ಹೆಜ್ಜೆ ಹಾಕಿದ್ದಾರೆ. ಬಿಸಿಲಿನ ತಾಪದ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿದ್ಯಾರ್ಥಿಗಳು ಹಿಂದೇಟು ಹಾಕಿದ್ದಾರೆ. ಮೈದಾನದಲ್ಲಿ ಜಿಲ್ಲಾಡಳಿತ ನೀರಿನ ಸೌಲಭ್ಯ ಕೂಡ ಮಾಡಿಲ್ಲ. ಹೀಗಾಗಿ ಜಿಲ್ಲಾಡಳಿತದ ಕ್ರಮಕ್ಕೆ ವ್ಯಾಪಕ ಆಕ್ರೋಶ ಹೊರ ಹಾಕಿದ್ರು.

ಸದ್ಯ ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಇನ್ನು ಲಕ್ಷಕಂಠಗಳ ಗೀತ ಗಾಯನ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಗಳು, ಅಧಿಕಾರಿಗಳು, ತಹಶೀಲ್ದಾರ್ ನಾಗರಾಜ್, ಪೌರಾಯುಕ್ತ ಅರವಿಂದ ಜಮಖಂಡಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೈಗೊಂಡಿರುವ ವಿಶೇಷ ಅಭಿಯಾನ ಇದಾಗಿದ್ದು ‘ಕನ್ನಡಕ್ಕಾಗಿ ನಾವು’ ಅಭಿಯಾನದಡಿ ಇಂದು 5 ಲಕ್ಷ ಜನ ಕನ್ನಡ ಹಾಡು ಹಾಡಲಿದ್ದಾರೆ. ವಿಶ್ವದಾದ್ಯಂತ ಇಂದು ಒಂದು ಸಾವಿರ ಸ್ಥಳಗಳಲ್ಲಿ ಸಾಮೂಹಿಕ ಗೀತ ಗಾಯನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ಮೇಲೂ ಗಾಯನ ಮಾಡಲಾಗುತ್ತಿದ್ದು ಇಂದು ಬೆಳಗ್ಗೆ 11ರಿಂದ 11.30ರವರೆಗೆ ಗಾಯನ ಕಾರ್ಯಕ್ರಮ ನಡೆಯಲಿದೆ. ವಿವಿಧ ಪ್ರಮುಖ ಸ್ಥಳಗಳಲ್ಲಿ ಉದ್ಯಮಿಗಳು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರಿಂದ ಸಮೂಹ ಗಾಯನ ಕಾರ್ಯಕ್ರಮ ನಡೆಯಲಿದ್ದು ಇಂದು ಕನ್ನಡದ 3 ಹಾಡುಗಳನ್ನು ಹಾಡುವಂತೆ ಸರ್ಕಾರ ಮನವಿ ಮಾಡಿದೆ. ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಡುಗಳನ್ನ ಹಾಡಲು ಮನವಿ ಮಾಡಲಾಗಿದ್ದು ಸಮಯ ಇದ್ದರೆ ಮತ್ತಷ್ಟು ಹಾಡುಗಳನ್ನ ಹಾಡಬಹುದು.

ಇದನ್ನೂ ಓದಿ: ವಿಶ್ವದಾದ್ಯಂತ ಕನ್ನಡ ಡಿಂಡಿಮ ಕಲರವ, ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡ ಹಾಡು ಗಾಯನ

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?