ಪಂಚಮಸಾಲಿ ಸಮಾಜಕ್ಕೆ ದುಡಿದವರಿಗೆ ಸಚಿವ ಸ್ಥಾನ ನೀಡಬೇಕಿತ್ತು: ಬಸವ ಜಯಮೃತ್ಯುಂಜಯ ಸ್ವಾಮಿಜಿ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 23, 2023 | 5:06 PM

ಸಮಾಜಕ್ಕಾಗಿ ದುಡಿದ ಲಕ್ಷ್ಮೀ ಹೆಬ್ಬಾಳಕರ್​, ವಿಜಯಾನಂದ ಕಾಶಪ್ಪನವರ ಮತ್ತು ವಿನಯ ಕುಲಕರ್ಣಿ ಅವರನ್ನು ಸಚಿವರನ್ನಾಗಿ ಮಾಡಬೇಕಿತ್ತು. ಆದರೆ ಶಿವಾನಂದ ಪಾಟೀಲರನ್ನು ಮಾಡಿದ್ದು ಎಷ್ಟು ಸರಿ ಎಂದು ಸಮಾಜದವರು ಕೇಳುತ್ತಿದ್ದಾರೆ ಎಂದು ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಜಿ ಪ್ರಶ್ನಿಸಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ ದುಡಿದವರಿಗೆ ಸಚಿವ ಸ್ಥಾನ ನೀಡಬೇಕಿತ್ತು: ಬಸವ ಜಯಮೃತ್ಯುಂಜಯ ಸ್ವಾಮಿಜಿ
ಬಸವ ಜಯಮೃತ್ಯುಂಜಯ ಸ್ವಾಮಿಜಿ
Follow us on

ಕೊಪ್ಪಳ, ಆಗಸ್ಟ್​ 23: ಸಮಾಜಕ್ಕಾಗಿ ದುಡಿದ ಲಕ್ಷ್ಮೀ ಹೆಬ್ಬಾಳಕರ್​, ವಿಜಯಾನಂದ ಕಾಶಪ್ಪನವರ ಮತ್ತು ವಿನಯ ಕುಲಕರ್ಣಿ ಅವರನ್ನು ಸಚಿವರನ್ನಾಗಿ ಮಾಡಬೇಕಿತ್ತು. ಆದರೆ ಶಿವಾನಂದ ಪಾಟೀಲರನ್ನು ಮಾಡಿದ್ದು ಎಷ್ಟು ಸರಿ ಎಂದು ಸಮಾಜದವರು ಕೇಳುತ್ತಿದ್ದಾರೆ ಎಂದು ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಜಿ (Basava Jayamrutyunjaya Swamiji) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ರಾಜ್ಯ ಸರಕಾರ ಪಂಚಮಸಾಲಿ ಸಮಾಜಕ್ಕೆ ದುಡಿದವರಿಗೆ ಸಚಿವ ಸ್ಥಾನ ನೀಡಬೇಕಿತ್ತು ಎಂದು ಹೇಳಿದ್ದಾರೆ.

ಪಂಚಮಸಾಲಿ ಸಮಾಜದ ಶಕ್ತಿ ಏನು ಎಂಬುವುದು ಈ ಚುನಾವಣೆಯಲ್ಲಿ ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಮೂವರನ್ನು ಸೇರಿಸಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯ ಏನೇ ಇರಲಿ. ಪಂಚಮಸಾಲಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕೆ ಎಂದು ಆಗ್ರಹಿಸಿದರು.

ಪಂಚಮಸಾಲಿಗೆ 2 ಎ ಮೀಸಲಾತಿ ನೀಡಬೇಕು

ಶ್ರಾವಣ ಮಾಸದಲ್ಲಿ ಪಂಚಮಸಾಲಿಗೆ ಮೀಸಲಾತಿಗಾಗಿ ಮತ್ತೆ ಹೋರಾಟ ಆರಂಭವಾಗಲಿದ್ದು, ಇಷ್ಟರಲ್ಲಿಯೇ ಪಂಚಮಸಾಲಿ ಸಮಾಜದ ಮುಖಂಡರ ಸಭೆ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಮೀಸಲಾತಿಗಾಗಿ ಜಾಗೃತಿ ಮೂಡಿಸಲಾಗುವುದು. ಪಂಚಮಸಾಲಿಗೆ 2 ಎ ಮೀಸಲಾತಿ ನೀಡಬೇಕು. ಇಲ್ಲವೆ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು. ಈ ನಿಟ್ಟಿನಲ್ಲಿ ಇಂದಿನ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ ಕರ್ನಾಟಕದ ಪರವಿದೆ: ಸಂಸದ ತೇಜಸ್ವಿ ಸೂರ್ಯ

ಕಾಂಗ್ರೆಸ್ ಪಕ್ಷಕ್ಕೆ ಪಂಚಮಸಾಲಿ ಸಮಾಜದ ಶಕ್ತಿ ಏನು ಎಂಬುವುದು ಗೊತ್ತಾಗಿದೆ. ಮುಖ್ಯಮಂತ್ರಿಗಳ ಮೇಲೆ ನಾವು ಭರವಸೆ ಇಟ್ಟುಕೊಂಡಿದ್ದೇವೆ. 2024 ರ ಲೋಕಸಭಾ ಚುನಾವಣೆಯೊಳಗೆ ಮೀಸಲಾತಿಯ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇಷ್ಟಲಿಂಗ ಪೂಜೆಯ‌ ಮೂಲಕ‌ ಹೋರಾಟ ಮತ್ತೆ ಆರಂಭ

ಶ್ರಾವಣ ಮಾಸದಲ್ಲಿ‌ಇಷ್ಟಲಿಂಗ ಪೂಜೆಯ‌ ಮೂಲಕ‌ ಹೋರಾಟ ಆರಂಭಿಸಲಾಗುವುದು ಎಂದು ಇತ್ತೀಚೆಗೆ ದಾವಣಗೆರೆಯಲ್ಲಿ‌ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದರು. ರಾಜ್ಯದಲ್ಲಿ‌ಕಾಂಗ್ರೆಸ್ ಸರ್ಕಾರ ಬಂದಿದೆ. ಸಿದ್ದರಾಮಯ್ಯ ಸರ್ಕಾರ ಬರಬೇಕಾದ್ರೆ ಪಂಚಮಸಾಲಿ ಸಮಾಜದ ಸಹಕಾರ ಸಹ‌ ಇದೆ. ಈ ವಿಚಾರ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ ಎಂದಿದ್ದರು.

ಇದನ್ನೂ ಓದಿ: ಕಾವೇರಿ ಪ್ರತಿಭಟನೆ, ಸೋತು ಸುಣ್ಣವಾಗಿರುವ ಬಿಜೆಪಿಯಿಂದ ಭಾವನಾತ್ಮಕ ರಾಜಕೀಯ; ಎಂಬಿ ಪಾಟೀಲ್ ಕಿಡಿ

ಅಧಿವೇಶನ ಮುಗಿದ ಬಳಿದ ಸಂವಿಧಾನ ಹಾಗೂ ಕಾನೂನು ಪಂಡಿತರ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗೆದು ಕೊಳ್ಳುವುದಾಗಿ ಹೇಳಿದ್ದರು.‌ ಹಾಲುಮತ ಸಮಾಜವನ್ನ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ವಿಚಾರ ಕೇಂದ್ರಕ್ಕೆ ಶಿಪಾರಸ್ಸು ಮಾಡಿದ್ದಾರೆ. ಅದೇ ರೀತಿ‌ ಬೇರೆ ಸಮಾಜದ ಬೇಡಿಕೆಗಳ ಬಗ್ಗೆ ಸಿಎಂ ಗಮನ ಹರಿಸಲಿ. ಪ್ರತ್ಯೇಕ‌ ಲಿಂಗಾಯತ ಧರ್ಮ ಹೋರಾಟ ನಡೆಯುತ್ತಿದೆ. ನಾನು‌ ಮಾತ್ರ ಈಗ ಪಂಚಮಸಾಲಿ‌‌ ಮೀಸಲಾತಿಯಲ್ಲಿ ಬಿಜಿ‌ ಇರುವೆ.

ರಾಜ್ಯದ ಎಲ್ಲ ಲಿಂಗಾಯತರನ್ನ ಓಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂಬುದು‌ ನಮ್ಮ ಬೇಡಿಕೆ. ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ಬಗ್ಗೆ ನಾನು‌ ಈಗ ಹೇಳಲಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.