AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಭಾನಾಪೂರ ಬಳಿ ಭೀಕರ ಅಪಘಾತ, ನಾಲ್ವರು ಸಾವು

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಶೋಕ್ ಲೇಲ್ಯಾಂಡ್ ವಾಹನವೊಂದು ಡಿವೈಡರ್ ದಾಟಿಕೊಂಡು ಬಂದು ಓಮಿನಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಂತ್ರಾಲಯಕ್ಕೆ ಹೊರಟಿದ್ದ ಹಾವೇರಿ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಕೊಪ್ಪಳ: ಭಾನಾಪೂರ ಬಳಿ ಭೀಕರ ಅಪಘಾತ, ನಾಲ್ವರು ಸಾವು
ಸಾಂದರ್ಭಿಕ ಚಿತ್ರImage Credit source: TV9
ಶಿವಕುಮಾರ್ ಪತ್ತಾರ್
| Edited By: |

Updated on:Jun 27, 2026 | 8:44 AM

Share

ಮುಖ್ಯಾಂಶಗಳು

  • ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ
  • ಮೂವರು ಸ್ಥಳದಲ್ಲೇ ಸಾವು, 6 ಜನರಿಗೆ ಗಾಯ
  • ಮಂತ್ರಾಲಯಕ್ಕೆ ತೆರಳುತ್ತಿದ್ದವರ ದಾರುಣ ಸಾವು

ಕೊಪ್ಪಳ, ಜೂನ್ 27: ಕೊಪ್ಪಳ (Koppal) ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಪಕ್ಕದ ರಸ್ತೆಯಲ್ಲಿ ಚಲಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನವೊಂದು ನಿಯಂತ್ರಣ ತಪ್ಪಿ, ಏಕಾಏಕಿ ಡಿವೈಡರ್ ದಾಟಿ ಬಂದು ಎದುರಿನಿಂದ ಬರುತ್ತಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ತೀವ್ರತೆಗೆ ಓಮಿನಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಬಾಳೆಕಾಯಿ ಆಸ್ಪತ್ರೆಯಲ್ಲಿ ಸಾವು

ಅಪಘಾತದಲ್ಲಿ ಹಾವೇರಿ ಮೂಲದ ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25) ಹಾಗೂ ರಮೇಶ್ ಬಳ್ಳಾರಿ (45) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನು ಕಾರಿನಲ್ಲಿದ್ದ ಉಳಿದ ಆರು ಜನರಿಗೆ ತೀವ್ರ ಗಾಯಗಳಾಗಿದ್ದು, ಇವರಲ್ಲಿ ಇಬ್ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಈ ಪೈಕಿ, ಪ್ರವೀಣ್ ಬಾಳೆಕಾಯಿ(40) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 am, Sat, 27 June 26

Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್