AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಸಾಲಬಾಧೆಗೆ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಪ್ರಶಾಂತನಗರದ‌ ಮನೆ ಒಂದರಲ್ಲಿ ಭೀಕರ ಘಟನೆಯೊಂದು ನಡೆದಿದೆ. ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಸ್ಥಳಕ್ಕೆ ಗಂಗಾವತಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕೊಪ್ಪಳ: ಸಾಲಬಾಧೆಗೆ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಮೃತರುImage Credit source: tv9 kannada
ಶಿವಕುಮಾರ್ ಪತ್ತಾರ್
| Edited By: |

Updated on: Jul 04, 2026 | 3:08 PM

Share

ಮುಖ್ಯಾಂಶಗಳು

  • ಗಂಗಾವತಿಯಲ್ಲೊಂದು ಘೋರ ದುರಂತ
  • ಒಂದೇ ಕುಟುಂಬದ ಮೂವರು ಆತ್ಮಹತ್ಯೆ
  • ಗಂಗಾವತಿ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ​​​​​

ಕೊಪ್ಪಳ, ಜುಲೈ 04: ನೇಣುಬಿಗಿದುಕೊಂಡು ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಗಂಗಾವತಿಯ ಪ್ರಶಾಂತನಗರದ‌ ಮನೆಯಲ್ಲಿ ನಡೆದಿದೆ. ಪತಿ ಪ್ರಕಾಶ್(54), ಪತ್ನಿ ಪ್ರಭಾ(46) ಮತ್ತು ಮಗ ಶಶಾಂಕ್(21) ಮೃತರು. ಸದ್ಯ ಸ್ಥಳಕ್ಕೆ ಗಂಗಾವತಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಗೆ ನಡೆಸಿದ್ದಾರೆ.

ಆತ್ಮಹತ್ಯೆಗೆ ಕಾರಣವೇನು?

ಪ್ರಕಾಶ್ ರಾಯ್ಕರ್​ ಜ್ಯುವೆಲರಿ ಶಾಪ್ ನಡೆಸುತ್ತಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ ಸಾಲಬಾಧೆಯೇ ಈ ದುಡುಕಿನ ನಿರ್ಧಾರಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಎಂಟಿಸಿ ಬಸ್​ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು

ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನಲ್ಲಿ ಮಾರತ್​ಹಳ್ಳಿ-ಕಾಡು ಬೀಸನಹಳ್ಳಿ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಆಂಧ್ರಪ್ರದೇಶ ಮೂಲದ ನಾಗಾರ್ಜುನ(29) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. ಬ್ರೇಕ್ ಹಾಕಿದಾಗ ಹಿಂಬದಿಯಿಂದ ಬೈಕ್​ಗೆ ಬಸ್​​ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಸ್ಥಳಕ್ಕೆ ಹೆಚ್​​ಎಸ್​ಆರ್​ ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವು

ಮತ್ತೊಂದು ಪ್ರಕಣದಲ್ಲಿ ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ಹೊರವಲಯದ ರಾಣಿಕ್ರಾಸ್ ಬಳಿ ನಡೆದಿದೆ. ಆಂಧ್ರದ ಕದಿರಿ ಮೂಲದ ಸೂರ್ಯನಾರಾಯಣರೆಡ್ಡಿ(50) ಮೃತ ವ್ಯಕ್ತಿ.

ಇದನ್ನೂ ಓದಿ: K.R Circle Bus accident: ಕೆ. ಆರ್ ಸರ್ಕಲ್ ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!

ಹೆದ್ದಾರಿ ದಾಟುತ್ತಿದ್ದ ವೇಳೆ ಸೂರ್ಯನಾರಾಯಣರೆಡ್ಡಿಗೆ ಲಾರಿ ಗುದ್ದಿದೆ. ಲಾರಿ ಡಿಕ್ಕಿಯ ರಭಸಕ್ಕೆ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಟ್ಟಿದ್ದಾರೆ. ಇನ್ನು ಅಪಘಾತದ ನಂತರ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
Video: ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು!
Video: ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು!
ಇಂದು ಈ ರಾಶಿಯವರಿಗೆ ಸಾಲದಿಂದ ಮುಕ್ತಿ
ಇಂದು ಈ ರಾಶಿಯವರಿಗೆ ಸಾಲದಿಂದ ಮುಕ್ತಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!