ಕೊಪ್ಪಳದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಮೂವರು ದುರ್ಮರಣ

ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇತ್ತೀಚೆಗೆ ಅಷ್ಟೇ ಕುಷ್ಟಗಿ ಸಮೀಪ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.

ಕೊಪ್ಪಳದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಮೂವರು ದುರ್ಮರಣ
ಕಂಟೈನರ್​ಗೆ ಕಾರು ಡಿಕ್ಕಿ
Follow us
ರಮೇಶ್ ಬಿ. ಜವಳಗೇರಾ
|

Updated on:Jun 13, 2023 | 1:48 PM

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿಕ ಕಲಕೇರಿ ಬಳಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದ ಘಟನೆ ಮಾಸುವ ಮುನ್ನವೇ ಮತ್ತೊಂದು ಅಪಘಾತ (Accident) ನಡೆದಿದೆ. ಕಂಟೈನರ್​ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ (Koppal) ಜಿಲ್ಲೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮುದ್ದೇಬಿಹಾಳ ಮೂಲದ ಗೌರಮ್ಮ ಹನುಮಗೌಡ ಕನ್ನೂರು(60). ಪ್ರವೀಣ್ ಕುಮಾರ್(27), ಸುರೇಶ್ ಈರಸಂಗಪ್ಪ(43) ಮೃತ ದುರ್ವೈವಿಗಳು. ಕುಷ್ಟಗಿ ಠಾಣೆ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ದೇಹಗಳನ್ನ ಕುಷ್ಟಗಿ ತಾಲೂಕು ಆಸ್ಪತ್ರೆಗರ ರವಾನಿಸಿದ್ದಾರೆ.

ಇದನ್ನೂ ಓದಿ: Koppal News: ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಜನ ದುರ್ಮರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಇನ್ನು ಈ ಅಪಘಾತಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಪ್ರತಿಕ್ರಿಯಿಸಿದ್ದು, ಮದುವೆ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ದಾವಣೆಗೆರೆಯಿಂದ ಮದುವೆ ಮಗಿಸಿಕೊಂಡು ಮುದ್ದೇಬಿಹಾಳಕ್ಕೆ ತೆರಳುತ್ತಿದ್ದರು. ಈ ವೇಳೆ ಕುಷ್ಟಗಿ ಬಳಿ ಎನ್ ಹೆಚ್ ೫೦ ನಲ್ಲಿ ಆ್ಯಕ್ಸಿಡೆಂಟ್ ಆಗಿದೆ. ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ನಾಯಿ ಅಡ್ಡ ಬಂದಿದ್ದರಿಂದ ಲಾರಿ ಸ್ಲೋ ಆಗಿತ್ತು. ಈ ವೇಳೆ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಗುದ್ದಿದೆ. ಹೀಗಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮಯೊಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸುತ್ತೇವೆ ಎಂದು ಮಾಹಿತಿ ನೀಡಿದರು.

ಮೇ ಅಂತ್ಯದಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಕಾರು ನಡುವೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಅವಘಡದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಸಿಎಂ ಸಿದ್ದರಾಮಯ್ಯನವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಘೋಷಿಸಿದ್ದರು. ಈ ದುರ್ಘಟನೆ ಮಾಸುವ ಮುನ್ನವೇ ಕುಷ್ಟಗಿ ತಾಲೂಕಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.

Published On - 12:27 pm, Tue, 13 June 23