ಮದ್ಯಪಾನ ಮಾಡಿ ರೈಲ್ವೆ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, 3 ಯುವಕರು ಸ್ಥಳದಲ್ಲೇ ಸಾವು

ರೈಲ್ವೆ ಹಳಿ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದವರ ಮೇಲೆ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಂಗಾವತಿ ನಗರದ ಹೊರವಲಯದಲ್ಲಿ ನಡೆದಿದೆ. ಈ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದ್ಯಪಾನ ಮಾಡಿ ರೈಲ್ವೆ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, 3 ಯುವಕರು ಸ್ಥಳದಲ್ಲೇ ಸಾವು
ಮೃತ ಯುವಕರು
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Jul 20, 2024 | 10:00 AM

ಕೊಪ್ಪಳ, ಜುಲೈ 19: ರೈಲ್ವೆ ಹಳಿ (Railway Track) ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದವರ ಮೇಲೆ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಂಗಾವತಿ (Gangavati) ನಗರದ ಹೊರವಲಯದಲ್ಲಿ ನಡೆದಿದೆ. ಕಳೆದ ರಾತ್ರಿ 9:30ಕ್ಕೆ ಹುಬ್ಬಳ್ಳಿ-ಸಿಂದನೂರು ಎಕ್ಸಪ್ರೆಸ್ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಗಾವತಿ ನಗರದ ನಿವಾಸಿಗಳಾದ ಮೌನೇಶ್ ಪತ್ತಾರ (23), ಸುನೀಲ್ (23), ವೆಂಕಟ್ ಭೀಮನಾಯ್ಕ (20) ಮೃತ ಯುವಕರು.

ಮೂವರು ಯುವಕರು ಕಳೆದ ರಾತ್ರಿ ರೈಲ್ವೆ ಹಳಿ ಬಳಿಯೇ ಪಾರ್ಟಿ ಮಾಡಿ, ನಂತರ ಹಳಿ ಮೇಲೇ ಮಲಗಿದ್ದರು ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ಪ್ರೇಯಸಿ ಮೇಲೆ ಅತ್ಯಾಚಾರ: ಪೊಲೀಸ್ ಠಾಣೆ​ ಎದುರು ಯುವತಿ ಧರಣಿ

ಅಪಘಾತದಲ್ಲಿ ಎಎಸ್​ಐ ಸಾವು

ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್​​ಐ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಒಣಬಳ್ಳಾರಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಮುನಿರಾಬಾದ್ ಪೊಲೀಸ್​​​​​ ಠಾಣೆ ಎಎಸ್ಐ​ ರಾಮಣ್ಣ (55) ಮೃತ ದುರ್ದೈವಿ. ಎಎಸ್ಐ ರಾಮಣ್ಣ ಹೆದ್ದಾರಿ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯದಲ್ಲಿದ್ದ ಎಎಸ್​ಐ ರಾಮಣ್ಣ ಮೃತಪಟ್ಟಿದ್ದಾರೆ. ಮುನಿರಾಬಾದ್​​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 am, Fri, 19 July 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ