AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಇಂದು ಹಂಪಿ ಕನ್ನಡ ವಿವಿ ಒಳಗಡೆ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶ ನಿಷೇಧ

ಇಂದು ನಾನಾ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮನವಿ ಪತ್ರಗಳನ್ನು ನೀಡಲು ನೌಕರರ ಸಂಘ ತಿರ್ಮಾನಿಸಿದೆ. ಹೀಗಾಗಿ ಅನಾವಶ್ಯಕ ಗೊಂದಲ ಸೃಷ್ಟಿ ಮಾಡುವುದು ಬೇಡ ಎಂದು ವಿವಿಯ ಆಡಳಿತ ಮಂಡಳಿ ಈ ರೀತಿಯಾಗಿ ಪ್ರವೇಶ ನಿರ್ಬಂಧ ಆದೇಶ ಹೊರಡಿಸಿದೆ.

ವಿಜಯನಗರ: ಇಂದು ಹಂಪಿ ಕನ್ನಡ ವಿವಿ ಒಳಗಡೆ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶ ನಿಷೇಧ
ಕನ್ನಡ ವಿಶ್ವವಿದ್ಯಾಲಯ
TV9 Web
| Updated By: preethi shettigar|

Updated on:Dec 06, 2021 | 12:07 PM

Share

ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆ, ಇಂದು (ಡಿಸೆಂಬರ್ 6) ವಿಶ್ವವಿದ್ಯಾಲಯದ ಕಾರ್ಯಕಾರಿ (ಸಿಂಡಿಕೇಟ್) ಸಮಿತಿಯ ಸಭೆ ನಡೆಯಲಿದೆ. ಹೀಗಾಗಿ ಅನಧಿಕೃತ ವ್ಯಕ್ತಿಗಳಿಗೆ ಇಂದು ಹಂಪಿ ವಿಶ್ವವಿದ್ಯಾಲಯದ ಒಳಗಡೆ ಪ್ರವೇಶವಿಲ್ಲ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ವಿವಿಯ ಕುಲಸಚಿವ ಡಾ. ಸುಬ್ಬಣ್ಣ ರೈ ಅಧಿಕೃತವಾಗಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿವಿ ಆಡಳಿತ ಮಂಡಳಿಯ ನಡೆಗೆ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಇಂದು ನಾನಾ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮನವಿ ಪತ್ರಗಳನ್ನು ನೀಡಲು ನೌಕರರ ಸಂಘ ತಿರ್ಮಾನಿಸಿದೆ. ಹೀಗಾಗಿ ಅನಾವಶ್ಯಕ ಗೊಂದಲ ಸೃಷ್ಟಿ ಮಾಡುವುದು ಬೇಡ ಎಂದು ವಿವಿಯ ಆಡಳಿತ ಮಂಡಳಿ ಈ ರೀತಿಯಾಗಿ ಪ್ರವೇಶ ನಿರ್ಬಂಧ ಆದೇಶ ಹೊರಡಿಸಿದೆ.

ನೌಕರರ ವೇತನಕ್ಕಾಗಿ ಪ್ರಸ್ತಾವನೆ ಸದ್ಯ ವಿವಿ ಬಳಿ ಅನುದಾನ ಇಲ್ಲದ ಇರುವ ಕಾರಣ ಇದೇ ಮೊದಲ ಬಾರಿಗೆ ಕಳೆದ 15-20 ವರ್ಷಗಳಿಂದ ಕೆಲಸ ಮಾಡುತ್ತ ಬಂದಿರುವ 140ಕ್ಕೂ ಹೆಚ್ಚು ಕ್ರೂಢೀಕೃತ, ಗುತ್ತಿಗೆ ನೌಕರರಿಗೆ ಹತ್ತು ತಿಂಗಳಿಂದ ವೇತನ ನೀಡಿಲ್ಲ. ಗುತ್ತಿಗೆ ನೌಕರರ ವೇತನಕ್ಕಾಗಿ 6 ಕೋಟಿ ಪ್ರತ್ಯೇಕ ಅನುದಾನ ಬಿಡುಗಡೆ ಮಾಡುವಂತೆ ಸಹ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಆದರೆ ಇದುವರೆಗೆ ನಯಾಪೈಸೆ ಸರ್ಕಾರದಿಂದ ನೀಡಿಲ್ಲ. ಮೇಲಿಂದ ಮೇಲೆ ಪ್ರಸ್ತಾವನೆಗಳು ಕಳುಹಿಸಲಾಗುತ್ತಿದೆ ಹೊರತು ಸರ್ಕಾರದಿಂದ ಬಿಡಿಗಾಸು ಸಿಗುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಕನಿಷ್ಠ ವಿದ್ಯುತ್ ಬಿಲ್ ಕೂಡ ಪಾವತಿ ಮಾಡಲು ಅನುದಾನ ಇಲ್ಲದ ಪರಿಸ್ಥಿತಿ ವಿವಿಗೆ ನಿರ್ಮಾಣವಾಗಿದ್ದು, ಸುಮಾರು 60 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಬಿಲ್ ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಂಪಿ ಕನ್ನಡ ವಿವಿಗೆ ರಾಜ್ಯ ಸರ್ಕಾರ ಸಮರ್ಪಕ ಅನುದಾನ ಬಿಡುಗಡೆ ಮಾಡಬೇಕು ಅಂತಾ ಸಾಹಿತಿಗಳು ಒತ್ತಾಯಿಸುತ್ತಿದ್ದಾರೆ.

ಬೇರೆ ವಿಶ್ವವಿದ್ಯಾಲಯಗಳಲ್ಲಿ ಹೆಚ್ಚು ಕಾಲೇಜುಗಳಿರುವ ಕಾರಣ ವಿದ್ಯಾರ್ಥಿಗಳಿಂದ ನೀಡುವ ಶುಲ್ಕದಿಂದ ಖರ್ಚು ನಿಭಾಯಿಸುತ್ತವೆ. ಆದರೆ ಕನ್ನಡ ವಿವಿ ಸಂಶೋಧನಾ ಪ್ರಾಧಾನವಾಗಿರುವುದರಿಂದ ಸರ್ಕಾರದ ಅನುದಾನದ ಆಧಾರದ ಮೇಲೆ ನಿಂತಿದೆ.

ಇದನ್ನೂ ಓದಿ: ಕರ್ನಾಟಕದ 31ನೇ ಜಿಲ್ಲೆಯಾಗಿ ಉದಯಿಸಲಿದೆ ವಿಜಯನಗರ; ಹಂಪಿ ಪರಿಕಲ್ಪನೆಯಲ್ಲಿ ವೇದಿಕೆ ಸಿದ್ಧ

ತೆಲಂಗಾಣದ ಮಹೀಂದ್ರಾ ಯೂನಿವರ್ಸಿಟಿಯಲ್ಲಿ 30 ಮಂದಿಗೆ ಕೊರೊನಾ ಸೋಂಕು; ವಿಶ್ವವಿದ್ಯಾಲಯ ಲಾಕ್​, ಸೋಂಕಿತರು ಆಸ್ಪತ್ರೆಗೆ ದಾಖಲು

Published On - 12:05 pm, Mon, 6 December 21

VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್