ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್ ಅಳವಡಿಕೆಗೆ ಚಿಂತನೆ, ಪರಿಶೀಲನೆ ಆರಂಭ

ಏಳು ದಶಕಗಳ ಹಳೆಯಾದದ ತುಂಗಭದ್ರಾ ಜಲಾಶಯದ ಗೇಟ್‌ಗಳನ್ನು ಬದಲಿಸಲು ಸರ್ಕಾರ ನಿರ್ಧರಿಸಿದೆ. ಗೇಟ್ ಬದಲಾವಣೆ ಬಗ್ಗೆ ಟಿಬಿ ಡ್ಯಾಂ ಬೋರ್ಡ್ ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ಆರಂಭಿಸಿದೆ. ಹೊಸ ಗೇಟ್ ಅಳವಡಿಕೆಗೆ ಪರಿಶೀಲನೆ ಆರಂಭವಾಗಿದೆ.

ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್ ಅಳವಡಿಕೆಗೆ ಚಿಂತನೆ, ಪರಿಶೀಲನೆ ಆರಂಭ
ತುಂಗಭದ್ರಾ ಜಲಾಶಯ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Nov 06, 2024 | 9:48 AM

ಕೊಪ್ಪಳ, ನವೆಂಬರ್​ 06: ತುಂಗಭದ್ರಾ ಜಲಾಶಯ (Tungabhadra Dam), ರಾಜ್ಯದ ಹಳೆಯ ಜಲಾಶಯಗಳಲ್ಲೊಂದು. ಈ ಜಲಾಶಯದ ಕ್ರಸ್ಟ್ ಗೇಟ್ (Crust Gate) ಕೊಚ್ಚಿಕೊಂಡು ಹೋಗಿದ್ದು ದೊಡ್ಡ ಸುದ್ದಿಯಾಗಿತ್ತು. ಜೊತೆಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಇಂತಹದೊಂದು ಘಟನೆ ನಡೆದಿದೆ ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಯಾವುದೇ ಜಲಾಶಯದ ಗೇಟ್​ಗಳನ್ನು ಐವತ್ತು ವರ್ಷದ ನಂತರ ಬದಲಾವಣೆ ಮಾಡಬೇಕು. ಆದರೆ ತುಂಗಭದ್ರಾ ಜಲಾಶಯದ ಗೇಟ್ ಬದಲಾವಣೆ ಮಾಡಿಲ್ಲ. ಕೆಟ್ಟ ಮೇಲೆ ಬುದ್ದಿ ಬಂತು ಅನ್ನುವ ಹಾಗೆ ಟಿಬಿ ಡ್ಯಾಂ ಬೋರ್ಡ್, ಹೊಸ ಗೇಟ್ ಅಳವಡಿಕೆಗೆ ಪರಿಶೀಲನೆ ಆರಂಭಿಸಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ ಬಳಿಯಿ ಇರುವ ತುಂಗಭದ್ರಾ ಜಲಾಶಯ, ಕರ್ನಾಟಕದ ನಾಲ್ಕು ಜಿಲ್ಲೆಗಳು, ನೆರೆಯ ತೆಲಂಗಾಣ, ಆಂದ್ರಪ್ರದೇಶದ ಲಕ್ಷಾಂತರ ಜನರ ಜೀವನಾಡಿಯಾಗಿದೆ. ಜನರಿಗೆ ಕುಡಿಯುವ ನೀರು ಮತ್ತು ಕೃಷಿಗೆ ತುಂಗಭದ್ರಾ ಆಧಾರವಾಗಿದೆ. ಆದರೆ, 2024 ರ ಆಗಸ್ಟ್ 10 ರಂದು ರಾತ್ರಿ ಸಮಯದಲ್ಲಿ ಡ್ಯಾಂನ 19ನೇ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿತ್ತು. ಹೀಗಾಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹೋಗಿತ್ತು. ಜೊತೆಗೆ ದೊಡ್ಡ ಮಟ್ಟದ ಆತಂಕವನ್ನೂ ಉಂಟುಮಾಡಿತ್ತು.

ಗೇಟ್ ಕೊಚ್ಚಿಕೊಂಡು ಹೋಗಲು ತುಂಗಭದ್ರಾ ಡ್ಯಾಂ ಬೋರ್ಡ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಯ್ತಾ ಎಂಬ ಪ್ರಶ್ನೆ ಉದ್ಬವಿಸಿತ್ತು. ಇದಕ್ಕೆ ಕಾರಣ, ಯಾವುದೇ ಜಲಾಶಯದ ಕ್ರಸ್ಟಗೇಟ್ ಗಳು, ಚೈನ್ ಲಿಂಕ್​ಗಳನ್ನು ಬದಲಾಯಿಸದೇ ಇರುವುದು. ತುಂಗಭದ್ರಾ ಜಲಾಶಯಕ್ಕೆ ಎಪ್ಪತ್ತು ವರ್ಷಗಳ ಹಿಂದೆ ಕ್ರಸ್ಟಗೇಟ್, ಚೈನ್ ಲಿಂಕ್​ಗಳನ್ನು ಅಳವಡಿಸಿದ್ದು, ಇಲ್ಲಿಯವರಗೆ ಒಮ್ಮೆಯೂ ಬದಲಾಯಿಸಿಲ್ಲ. ಬದಲಾವಣೆ ಮಾಡಬೇಕು ಅನ್ನೋ ತಜ್ಞರ ಸೂಚನೆಯನ್ನು ಕೂಡಾ ಡ್ಯಾಂ ನಿರ್ವಹಣೆ ಮಾಡುವ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಕ್ಕೆ ಇಂತಹದೊಂದು ಘಟನೆ ನಡೆಯಿತು ಅಂತ ತಜ್ಞರು ಹೇಳಿದ್ದರು.

ಗೇಟ್ ದುರಸ್ಥಿ ನಂತರ ರಾಜ್ಯ ಸರ್ಕಾರ ಕೂಡಾ ಗೇಟ್ ಬದಲಾವಣೆ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸುವುದಾಗಿ ಹೇಳಿತ್ತು. ಇದೀಗ ಕೆಟ್ಟಮೇಲೆ ಬುದ್ದಿ ಬಂತು ಅನ್ನುವ ಹಾಗೆ, ಗೇಟ್ ಬದಲಾವಣೆ ಬಗ್ಗೆ ಟಿಬಿ ಡ್ಯಾಂ ಬೋರ್ಡ್ ಗಂಭೀರವಾಗಿ ಪರಿಗಣಿಸಿದ್ದು. ಪರಿಶೀಲನೆ ಆರಂಭಿಸಿದೆ. ಈಗಾಗಲೇ ತಾಂತ್ರಿಕ ತಜ್ಞರ ತಂಡ ಒಮ್ಮೆ ಡ್ಯಾಂಗೆ ಬೇಟಿ ನೀಡಿ ಪರಿಶೀಲನೆ ಮಾಡಿದ್ದು, ಇದೀಗ ಡ್ಯಾಂ ಕಾರ್ಯದರ್ಶಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಡ್ಯಾಂಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೇಲಿಂದ ಮೇಲೆ ಜಲಾಶಯಕ್ಕೆ ಆಗಮಿಸುತ್ತಿರೋ ಟಿಬಿ ಡ್ಯಾಂ ಬೋರ್ಡ್​ನ ಅಧಿಕಾರಿಗಳು, ಜಲಾಶಯದ 33 ಗೇಟ್ ಗಳನ್ನು ಯಾವಾಗ ಬದಲಾವಣೆ ಮಾಡಬೇಕು, ಗೇಟ್​ಗಳನ್ನು ಎಲ್ಲಿ ತಯಾರು ಮಾಡಿಸಬೇಕು, ಹೊಸ ಮಾದರಿ ಗೇಟ್​ಗಳು ಯಾವ ರೀತಿ ಇರಬೇಕು ಅನ್ನೋ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸದ್ಯ ಜಲಾಶಯ ತುಂಬಿದ್ದರಿಂದ, ಬರುವ ಬೇಸಿಗೆ ಸಮಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುವುದರಿಂದ, ಆಗ ಗೇಟ್​ಗಳ ಬದಲಾವಣೆಗೆ ಪ್ಲ್ಯಾನ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಭರ್ತಿ ಮಾಡಲು ಅಧಿಕಾರಿಗಳ ಹಿಂದೇಟು: ಭರ್ತಿಯಾಗಿದ್ದಾಗಲೇ ಕೊಚ್ಚಿಹೋಗಿತ್ತು ಕ್ರೆಸ್ಟ್​ಗೇಟ್

ತುಂಗಭದ್ರಾ ಜಲಾಶಯದ ನಿರ್ಮಾಣ ಕಾರ್ಯ 1949 ರಲ್ಲಿ ಆರಂಭವಾಗಿತ್ತು. 1954 ರಲ್ಲಿ ಡ್ಯಾಂ ಲೋಕಾರ್ಪಣೆಗೊಂಡಿದೆ. ಅಂದರೇ, ತುಂಗಭದ್ರಾ ಜಲಾಶಯ ನಿರ್ಮಾಣವಾಗಿ ಬರೋಬ್ಬರಿ 70 ವರ್ಷವಾಗಿದೆ. ಅದರ ಆಯಸ್ಸುನ್ನು ನೋಡಿದಾಗ, ಡ್ಯಾಂಗೆ ಇರೋದು ಕೇವಲ ಮೂವತ್ತು ವರ್ಷ ಆಯಸ್ಸು ಮಾತ್ರ. ಮೂವತ್ತು ವರ್ಷದ ನಂತರ ಡ್ಯಾಂನ್ನು ನಿಷ್ಕ್ರೀಯಗೊಳಿಸಿ ಹೊಸದನ್ನು ನಿರ್ಮಾಣ ಮಾಡಬೇಕಾಗುತ್ತದೆ. ಈ ಬಗ್ಗೆ ಮೂರು ಸರ್ಕಾರಗಳು ನಿರ್ಧಾರ ಕೈಗೊಳ್ಳಬೇಕು ಎಂದು ಅಣೆಕಟ್ಟು ಕ್ರಸ್ಟ್‌ ಗೇಟ್ಸ್‌ ತಜ್ಞ ಕನ್ನಯ್ಯ ನಾಯ್ಡು ಕೂಡ ಹೇಳಿದ್ದರು. ಹೀಗಾಗಿ ಪರ್ಯಾಯ ಜಲಾಶಯ ನಿರ್ಮಾಣದ ಸಾಧಕ-ಬಾಧಕಗಳ ಬಗ್ಗೆ ಕೂಡ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಸದ್ಯ ಜಲಾಶಯಕ್ಕೆ ಅಧಿಕಾರಿಗಳ ತಂಡ ಬೇಟಿ ನೀಡಿ ಪರಿಶೀಲನೆ ಆರಂಭಿಸಿದೆ. ಆದರೆ, ಇನ್ನಾದರೂ ನಿರ್ಲಕ್ಷ್ಯ ವಹಿಸದೆ, ಬೇಸಿಗೆ ಸಮಯದಲ್ಲಿ ಹೊಸ ಗೇಟ್​ಗಳ ಅಳವಡಿಕೆ ಕಾರ್ಯ ಆರಂಭಿಸಲು ಬೇಕಾದ ಸಿದ್ದತೆಯನ್ನು ಈಗನಿಂದಲೇ ಆರಂಭಿಸಬೇಕಿದೆ. 33 ಗೇಟ್ ಗಳ ಅಳವಡಿಕೆಗೆ ಸಾಕಷ್ಟು ಸಮಯ ಬೇಕಾಗುತ್ತದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:48 am, Wed, 6 November 24

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ