AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಬ್ಯಾಡ್ ನ್ಯೂಸ್: ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಪೂರೈಕೆ ಸ್ಥಗಿತ

ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಕೊಪ್ಪಳದ ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವುದನ್ನು ಅಧಿಕಾರಿಗಳು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಮುಂಗಾರು ಬೆಳೆಯನ್ನು ನಂಬಿದ್ದ ನಾಲ್ಕು ಜಿಲ್ಲೆಗಳ ಲಕ್ಷಾಂತರ ರೈತರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಈ ವರ್ಷ ಈವರೆಗೆ ವಾಡಿಕೆಗಿಂತ ಶೇ 42 ರಷ್ಟು ಮುಂಗಾರು ಮಳೆ ಕೊರತೆ ದಾಖಲಾಗಿದೆ.

ರೈತರಿಗೆ ಬ್ಯಾಡ್ ನ್ಯೂಸ್: ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಪೂರೈಕೆ ಸ್ಥಗಿತ
ತುಂಗಭದ್ರಾ ಜಲಾಶಯದಲ್ಲಿ ನೀರು ಕನಿಷ್ಠ ಮಟ್ಟಕ್ಕೆ ಕುಸಿದಿರುವುದುImage Credit source: tv9
ಶಿವಕುಮಾರ್ ಪತ್ತಾರ್
| Edited By: |

Updated on: Jul 03, 2026 | 9:24 AM

Share

ಮುಖ್ಯಾಂಶಗಳು

  • ಮುಂಗಾರು ಮಳೆ ಕೈಕೊಟ್ಟಿದ್ದಕ್ಕೆ ಕಾಲುವೆಗಳಿಗೆ ನೀರು ಸ್ಥಗಿತ
  • ಟಿಬಿ ಡ್ಯಾಂನಲ್ಲಿ ಕೇವಲ 9 ಟಿಎಂಸಿ ಸಂಗ್ರಹ
  • ನಾಲ್ಕು ಜಿಲ್ಲೆಗಳ ಲಕ್ಷಾಂತರ ರೈತರಿಗೆ ಸಂಕಷ್ಟ

ಕೊಪ್ಪಳ, ಜುಲೈ 3: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಇಡೀ ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ (TB Dam) ಕಾಲುವೆಗಳಿಗೆ ನೀರು ಹರಿಸುವುದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಸಮೀಪವಿರುವ ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಒಳಹರಿವು ಇಲ್ಲದೇ ಇರುವುದರಿಂದ ಮುಂಗಾರು ಬೆಳೆಗೆ ನೀರು ಕೊಡಲು ಸಾಧ್ಯವೇ ಇಲ್ಲ ಎಂದು ನೀರಾವರಿ ವಲಯದ ಅಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಕಾಲುವೆಗಳ ನೀರನ್ನು ಬಂದ್ ಮಾಡಲಾಗಿದ್ದು, ಇದು ಅಚ್ಚುಕಟ್ಟು ಪ್ರದೇಶದ ರೈತರ ನಿದ್ದೆಗೆಡಿಸಿದೆ.

ಟಿಬಿ ಡ್ಯಾಂನಲ್ಲಿ ಹತ್ತು ವರ್ಷಗಳಲ್ಲೇ ಅತ್ಯಂತ ಕನಿಷ್ಠ ನೀರಿನ ಮಟ್ಟ

ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರು ಮಾತ್ರ ಸಂಗ್ರಹವಿದ್ದು, ಇದು ಕಳೆದ 10 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟದ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ ಬರೋಬ್ಬರಿ 75 ಟಿಎಂಸಿ ನೀರಿತ್ತು. ಆದರೆ ಕಳೆದ ವರ್ಷ ಡ್ಯಾಂನ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದ ಕಾರಣದಿಂದಾಗಿ ರೈತರಿಗೆ ಹಿಂಗಾರು ಬೆಳೆಗೆ ನೀರು ಕೊಡಲು ಸಾಧ್ಯವಾಗಿರಲಿಲ್ಲ. ಈಗ ಈ ಬಾರಿ ಮುಂಗಾರು ಮಳೆಯೇ ಇಲ್ಲದ ಕಾರಣ ಜೂನ್ ತಿಂಗಳಲ್ಲಿ ಡ್ಯಾಂಗೆ ಯಾವುದೇ ಒಳಹರಿವು ಬಂದಿಲ್ಲ. ಪರಿಣಾಮವಾಗಿ ಮುಂಗಾರು ಬೆಳೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ.

ನಾಲ್ಕು ಜಿಲ್ಲೆಗಳ ರೈತರು ಕಂಗಾಲು

ತುಂಗಭದ್ರಾ ಜಲಾಶಯದ ನೀರನ್ನೇ ನಂಬಿ ಕೃಷಿ ಚಟುವಟಿಕೆ ಆರಂಭಿಸಲು ಸಜ್ಜಾಗಿದ್ದ ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳ ಲಕ್ಷಾಂತರ ರೈತರು ಸರ್ಕಾರದ ಈ ನಿರ್ಧಾರದಿಂದ ಕಂಗಾಲಾಗಿದ್ದಾರೆ. ಈಗಾಗಲೇ ಕೃಷಿ ಇಲಾಖೆಯು ರೈತರು ಜಲಾಶಯದ ನೀರನ್ನು ಮಾತ್ರ ನಂಬಿ ಹೆಚ್ಚಿನ ನೀರು ಬೇಡುವ ಬೆಳೆಗಳ ಬಿತ್ತನೆ ಮಾಡಬೇಡಿ ಎಂದು ಎಚ್ಚರಿಸಿದೆ. ಒಂದು ವೇಳೆ ಜುಲೈ ತಿಂಗಳಿನಲ್ಲಾದರೂ ಮಳೆ ಚೇತರಿಸಿಕೊಳ್ಳದಿದ್ದರೆ ಈ ನಾಲ್ಕು ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ನಾಶವಾಗಿ ರೈತರು ತೀವ್ರ ಸಾಲದ ಸುಳಿಗೆ ಸಿಲುಕುವ ಭೀತಿ ಎದುರಾಗಿದೆ.

ಇದನ್ನೂ ಓದಿ: ಭೀಕರ ಬರದ ಛಾಯೆ: ಜಿಲ್ಲೆಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸಲು ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಸಿಎಂ ಡಿಕೆ ಶಿವಕುಮಾರ್ ಸಹ ಗುರುವಾರದ ಸಚಿವ ಸಂಪುಟ ಸಭೆಯ ಬಳಿಕ ರೈತರಿಗೆ ಕಿವಿ ಮಾತು ಹೇಳಿದ್ದಾರೆ. ರೈತರು ಕೇವಲ ಜಲಾಶಯದ ನೀರನ್ನು ನಂಬಿ ಬಿತ್ತನೆ ಮಾಡಬೇಡಿ ಎಂದು ಸಿಎಂ ಸಲಹೆ ನೀಡಿದ್ದಾರೆ.

ಐದು ದಶಕದಲ್ಲೇ 4ನೇ ಬಾರಿ ಜೂನ್​ನಲ್ಲಿ ಅತ್ಯಂತ ಕಡಿಮೆ ಮಳೆ

ಹವಾಮಾನ ಇಲಾಖೆ ಹಾಗೂ ಪ್ರಮುಖ ವರದಿಗಳ ಪ್ರಕಾರ, ಕರ್ನಾಟಕದಲ್ಲಿ ಈ ವರ್ಷ ಜೂನ್ ತಿಂಗಳಿನಲ್ಲಿ ದಾಖಲೆಯ ಶೇ 42 ರಷ್ಟು ಮುಂಗಾರು ಮಳೆಯ ಕೊರತೆ ಎದುರಾಗಿದೆ. ಕಳೆದ ಐದು ದಶಕಗಳಲ್ಲೇ ಇದು ಜೂನ್ ತಿಂಗಳ ನಾಲ್ಕನೇ ಅತ್ಯಂತ ಕನಿಷ್ಠ ಮಳೆಯ ಅವಧಿಯಾಗಿದೆ. ಸಾಮಾನ್ಯವಾಗಿ ಜೂನ್‌ನಲ್ಲಿ ರಾಜ್ಯಕ್ಕೆ 199 ಮಿಮೀ ಮಳೆಯಾಗಬೇಕಿತ್ತು, ಆದರೆ ಈ ಬಾರಿ ಕೇವಲ 116 ಮಿಮೀ ಮಳೆಯಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಕೊರತೆ ಕ್ರಮವಾಗಿ ಶೇ 52 ಮತ್ತು ಶೇ 49 ರಷ್ಟಿದ್ದು, ಇದು ಜಲಾಶಯಗಳ ನೀರಿನ ಸಂಗ್ರಹದ ಮೇಲೆ ಭೀಕರ ಪರಿಣಾಮ ಬೀರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು