AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ.15ರಿಂದ ತುಂಗಭದ್ರಾ ಎಡ ದಂಡೆ ಕಾಲುವೆಗೆ ನೀರು ಸ್ಥಗಿತ ಸಾಧ್ಯತೆ: ಭತ್ತದ ಬೆಳೆಗಾರರಲ್ಲಿ ತೀವ್ರ ಆತಂಕ

ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದೆ. ಇದರ ಪರಿಣಾಮವಾಗಿ ನವೆಂಬರ್ 15ರಿಂದ ಎಡ ದಂಡೆ ಕಾಲುವೆಗೆ ನೀರು ಸ್ಥಗಿತಗೊಳಿಸುವ ಸಾಧ್ಯತೆ ಎದುರಾಗಿದೆ. ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಭತ್ತದ ಬೆಳೆಗಾರರಲ್ಲಿ ಇದರಿಂದ ಆತಂಕ ಹೆಚ್ಚಾಗಿದೆ. ನೀರಿಲ್ಲದೆ ಭತ್ತದ ಬೆಳೆ ಕೈತಪ್ಪಿಹೋಗುವ ಆತಂಕ ರೈತರದ್ದಾಗಿದೆ.

ನ.15ರಿಂದ ತುಂಗಭದ್ರಾ ಎಡ ದಂಡೆ ಕಾಲುವೆಗೆ ನೀರು ಸ್ಥಗಿತ ಸಾಧ್ಯತೆ: ಭತ್ತದ ಬೆಳೆಗಾರರಲ್ಲಿ ತೀವ್ರ ಆತಂಕ
ತುಂಗಭದ್ರಾ ಡ್ಯಾಂ
ಗಣಪತಿ ಶರ್ಮಾ
|

Updated on: Nov 12, 2026 | 11:49 AM

Share

ಮುಖ್ಯಾಂಶಗಳು

  • ನವೆಂಬರ್ 15ರಿಂದ ಕಾಲುವೆ ನೀರು ಸ್ಥಗಿತ ಸಾಧ್ಯತೆ
  • 62 ಸಾವಿರ ಹೆಕ್ಟೇರ್ ಭತ್ತದ ಬೆಳೆ ಆತಂಕದಲ್ಲಿ
  • ಜಲಾಶಯದಲ್ಲಿ 33.019 ಟಿಎಂಸಿ ನೀರು ಮಾತ್ರ ಬಾಕಿ

ಕೊಪ್ಪಳ, ನವೆಂಬರ್ 12: ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ನವೆಂಬರ್ 15ರಿಂದ ತುಂಗಭದ್ರಾ ಎಡ ದಂಡೆ ಕಾಲುವೆಗೆ ನೀರು ಬಿಡುವುದನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಈ ಬೆಳವಣಿಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಸಾವಿರಾರು ಭತ್ತದ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಗೆ ನಿರಂತರವಾಗಿ ಸುಮಾರು 120 ದಿನಗಳ ಕಾಲ ನೀರಿನ ಅಗತ್ಯವಿರುತ್ತದೆ. ಆದರೆ ಜಲಾಶಯದಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿರುವ ಕಾರಣ, ತುಂಗಭದ್ರಾ ನೀರಾವರಿ ಸಮಾಲೋಚನಾ ಸಮಿತಿ (ಐಸಿಸಿ) ಈ ಹಿಂದೆ ಮೊದಲ ಹಂತದಲ್ಲಿ 90 ದಿನ ಹಾಗೂ ಹೆಚ್ಚುವರಿಯಾಗಿ 10 ದಿನಗಳ ಕಾಲ ನೀರು ಹರಿಸಲು ನಿರ್ಧರಿಸಿತ್ತು. ಅದರಂತೆ ನವೆಂಬರ್ 20ರವರೆಗೆ ಕಾಲುವೆಗಳಿಗೆ ನೀರು ಬಿಡುವ ಯೋಜನೆ ಇತ್ತು.

ಆದರೆ ಜಲಾಶಯದ ನೀರಿನ ಮಟ್ಟ ವೇಗವಾಗಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಗದಿತ ದಿನಾಂಕಕ್ಕಿಂತ ಐದು ದಿನ ಮೊದಲೇ, ಅಂದರೆ ನವೆಂಬರ್ 15ರಿಂದಲೇ ಕಾಲುವೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ತುಂಗಭದ್ರಾ ಜಲಾಶಯದಲ್ಲಿ ತೀವ್ರ ನೀರಿನ ಕೊರತೆ

ಜಲಾಶಯದಲ್ಲಿ ತೀವ್ರ ನೀರಿನ ಕೊರತೆ ಉಂಟಾಗಿರುವುದರಿಂದ ನವೆಂಬರ್ 15ರಿಂದ ಕಾಲುವೆಗಳಿಗೆ ನೀರು ಪೂರೈಕೆ ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತುಂಗಭದ್ರಾ ಪ್ರಾಜೆಕ್ಟ್ ಸರ್ಕಲ್ ಸುಪರಿಂಟೆಂಡೆಂಟ್ ಎಂಜಿನಿಯರ್ ಎಸ್.ಬಿ. ಮಲ್ಲಿಗೇವಾಡ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಬುಧವಾರದ ವೇಳೆಗೆ ತುಂಗಭದ್ರಾ ಜಲಾಶಯದಲ್ಲಿ 33.019 ಟಿಎಂಸಿ ಅಡಿ ನೀರು ಸಂಗ್ರಹವಿತ್ತು. ಪ್ರಸ್ತುತ ವಿವಿಧ ಕಾಲುವೆಗಳಿಗೆ ಸುಮಾರು 9,234 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಜಲಾಶಯದಲ್ಲಿ 77.144 ಟಿಎಂಸಿ ಅಡಿ ನೀರು ಸಂಗ್ರಹವಿತ್ತು ಎಂದು ತಿಳಿದುಬಂದಿದೆ.

ಕೊಪ್ಪಳ: 62 ಸಾವಿರ ಹೆಕ್ಟೇರ್‌ನಲ್ಲಿ ಬೆಳೆದ ಭತ್ತಕ್ಕೆ ನೀರಿನ ಆತಂಕ

ಕೊಪ್ಪಳ ಜಿಲ್ಲೆಯ ಗಂಗಾವತಿ, ಕನಕಗಿರಿ, ಕೊಪ್ಪಳ ಹಾಗೂ ಕಾರಟಗಿ ತಾಲೂಕುಗಳಲ್ಲಿ ಸುಮಾರು 62,000 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆಯಲಾಗಿದೆ. ಜಲಾಶಯದ ಸಮೀಪವಿರುವ ಜಮೀನುಗಳು ಹಾಗೂ ಖಾಸಗಿ ಪಂಪ್‌ಸೆಟ್ ಸೌಲಭ್ಯ ಹೊಂದಿರುವ ರೈತರು ಸುಮಾರು 15 ದಿನಗಳ ಕಾಲ ಬೆಳೆಯನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ಸಂಪೂರ್ಣವಾಗಿ ಕಾಲುವೆ ನೀರನ್ನೇ ಅವಲಂಬಿಸಿರುವ ರೈತರಿಗೆ ಪರ್ಯಾಯ ವ್ಯವಸ್ಥೆ ಕಡಿಮೆಯಿದೆ. ನವೆಂಬರ್ 15ರಿಂದ ನೀರು ಸ್ಥಗಿತಗೊಂಡರೆ ನಿಂತಿರುವ ಭತ್ತದ ಬೆಳೆಗೆ ತೀವ್ರ ಹೊಡೆತ ಬೀಳುವ ಆತಂಕ ವ್ಯಕ್ತವಾಗಿದೆ.

ಗಣನೀಯವಾಗಿ ಕುಸಿದ ಒಳಹರಿವು

ಈ ವರ್ಷ ಮಳೆ ಕೊರತೆಯಿಂದ ತುಂಗಭದ್ರಾ ಜಲಾಶಯದ ಒಳಹರಿವು ಗಣನೀಯವಾಗಿ ಕುಸಿದಿದೆ. ಸೆಪ್ಟೆಂಬರ್ 8ರಂದು 1,351 ಕ್ಯೂಸೆಕ್ ಒಳಹರಿವು ದಾಖಲಾಗಿದ್ದರೆ, ಮರುದಿನ ಅದು 915 ಕ್ಯೂಸೆಕ್‌ಗೆ ಇಳಿದಿತ್ತು. ನವೆಂಬರ್ 10ರಂದು ಕೇವಲ 70 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರೀಕ್ಷಿತ ಮಳೆಯಾಗದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದೆ ಎಂದು ತಿಳಿದುಬಂದಿದೆ. ಮುಂದಿನ ಜೂನ್‌ವರೆಗೆ ಕುಡಿಯುವ ನೀರಿನ ಅಗತ್ಯಕ್ಕೂ ಲಭ್ಯ ನೀರಿಗೆ ಆದ್ಯತೆ ನೀಡಬೇಕಿರುವುದರಿಂದ ನೀರಿನ ನಿರ್ವಹಣೆ ಮತ್ತಷ್ಟು ಸವಾಲಾಗಿದೆ. ಮುಂದಿನ ದಿನಗಳಲ್ಲಿ ಮಳೆಯಾದರೆ ಪರಿಸ್ಥಿತಿ ಸುಧಾರಿಸುವ ನಿರೀಕ್ಷೆಯಿದೆ.

ಆಂಧ್ರಪ್ರದೇಶದಿಂದ 4 ಟಿಎಂಸಿ ನೀರಿಗೆ ಮನವಿ

ಲಭ್ಯವಿರುವ ನೀರನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣದೊಂದಿಗೂ ಹಂಚಿಕೊಳ್ಳಬೇಕಿರುವುದರಿಂದ ಕರ್ನಾಟಕಕ್ಕೆ ನೀರಾವರಿಗಾಗಿ ದೊರೆಯುವ ನೀರಿನ ಪ್ರಮಾಣದ ಮೇಲೆ ಒತ್ತಡ ಹೆಚ್ಚಾಗಿದೆ. ಈ ನಡುವೆ ತುಂಗಭದ್ರಾ ಐಸಿಸಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಆಂಧ್ರಪ್ರದೇಶದ ಪಾಲಿನ ನೀರಿನಿಂದ 4 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡುವಂತೆ ಅಲ್ಲಿನ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಆಂಧ್ರಪ್ರದೇಶದಿಂದ ಸಕಾರಾತ್ಮಕ ಸ್ಪಂದನೆ ದೊರೆತರೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ರೈತರಿಗೆ ಸ್ವಲ್ಪ ಮಟ್ಟಿನ ಪರಿಹಾರ ದೊರೆಯುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್