AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ: ಕಾಂಗ್ರೆಸ್​​ ಸಿಎಂಗಳ ಎದುರೇ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

Tungabhadra Dam New Crest Gates Inauguration:ಕೊಪ್ಪಳದ ಮುನಿರಾಬಾದ್‌ನಲ್ಲಿ ನಡೆದ ತುಂಗಭದ್ರಾ ಜಲಾಶಯದ 33 ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ, ಕಾಂಗ್ರೆಸ್ ಸಿಎಂಗಳ ಸಮ್ಮುಖದಲ್ಲೇ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿ ನಿರ್ಧಾರಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಮೂರು ರಾಜ್ಯಗಳ ಸಿಎಂಗಳು ಭಾಗಿಯಾಗಿದ್ದು ವಿಶೇಷವಾಗಿತ್ತು.

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ: ಕಾಂಗ್ರೆಸ್​​ ಸಿಎಂಗಳ ಎದುರೇ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡುImage Credit source: Tv9 Kannada
ಶಿವಕುಮಾರ್ ಪತ್ತಾರ್
| Edited By: |

Updated on:Jun 25, 2026 | 4:13 PM

Share

ಮುಖ್ಯಾಂಶಗಳು

  • ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ
  • ಕಾಂಗ್ರೆಸ್​​ ಸಿಎಂಗಳ ಎದುರೇ ನರೇಂದ್ರ ಮೋದಿಯ ಗುಣಗಾನ
  • ಪ್ರಧಾನಿಗಳನ್ನು ಕೊಂಡಾಡಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಕೊಪ್ಪಳ, ಜೂನ್​​ 25: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ ಹಿನ್ನೆಲೆ ಕೊಪ್ಪಳ ತಾಲೂಕಿನ ಮುನಿರಾಬಾದ್​ನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ರೈತ ಬಾಂಧವರಿಗೆ ನಮಸ್ಕಾರ ಅಂತಾ ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್​​ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್​​ ಮತ್ತು ರೇವಂತ್​​ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ. ನದಿಗಳ ಜೋಡಣೆಯಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದ್ದು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಇದು ನಡೆಯುವ ವಿಶ್ವಾಸ ತನಗಿದೆ ಎಂದವರು ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಹೇಳಿದ್ದೇನು?

ನನಗೆ ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ ಎಂದ ನಾಯ್ಡು, ತುಂಗಭದ್ರಾ ತಾಯಿಗೆ ಶಿರಭಾಗಿ ನಮಸ್ಕಾರ ಮಾಡ್ತೀನಿ. ತುಂಗಾ ಪಾನಃ ಗಂಗಾ ಸ್ನಾನಃ ಎಂಬ ಮಾತಿದೆ. ತುಂಗಾ ನೀರು ಕುಡಿಯಲು ಶುದ್ಧ ಎಂದೇ ಪ್ರಸಿದ್ದಿ ಪಡೆದಿದೆ. ಕೊಚ್ಚಿ ಹೋಗಿದ್ದರಿಂದ ನೂತನ ಕ್ರಸ್ಟ್‌ ಗೇಟ್‌ ಲೋಕಾರ್ಪಣೆ ಆಗಿದೆ. ಕೊಚ್ಚಿ ಹೋಗಿದ್ದ ಒಂದು ಗೇಟ್‌ನ್ನು ಮಾತ್ರ ಹೊಸದಾಗಿ ಅಳವಡಿಸಿಲ್ಲ. ಬದಲಾಗಿ ಜಲಾಶಯದ ಎಲ್ಲಾ 33 ಗೇಟ್ ಹೊಸದಾಗಿ ಅಳವಡಿಸಲಾಗಿದೆ. ಕೇವಲ ಆರು ತಿಂಗಳಲ್ಲಿ ಈ ಕೆಲಸ ಮುಗಿದಿದ್ದಕ್ಕೆ ಹೆಮ್ಮೆ ಇದೆ. ಮೂವರು ಸಿಎಂಗಳು ಒಂದೇ ವೇದಿಕೆಯಲ್ಲಿ ಸೇರಿದ್ದು ಒಂದು ಇತಿಹಾಸ. ಹೊಸ ಕ್ರಸ್ಟ್‌ ಗೇಟ್‌ ಅಳವಡಿಕೆ ವಿಳಂಬವಾಗಿದ್ದರೆ ಭಾರಿ ಅಪಾಯ ಆಗುತ್ತಿತ್ತು. ಇದೀಗ ಆ ಅಪಾಯ ದೂರವಾಗಿದೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಬಹಳ ವೇಗವಾಗಿ ಮುನ್ನಡೆಯುತ್ತಿದೆ. ಸರಿಯಾದ ವ್ಯಕ್ತಿ, ಸರಿಯಾದ ಸ್ಥಳ ಮತ್ತು ಸರಿಯಾದ ಸಮಯ ಇದ್ದರೆ ಎಲ್ಲ ಸಾಧ್ಯವೆಂದು ಪ್ರತಿದಾರಿ ಬಾರಿ ನಾನು ಹೇಳುತ್ತೇನೆ.  ಅದು ನರೇಂದ್ರ ಮೋದಿ ಎಂದವರು ಹೇಳಿದ್ದಾರೆ.

ಇದನ್ನೂ ಓದಿ: ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ತುಂಗಭದ್ರಾ ಜಲಾಶಯದ ಹೊಸ ಗೇಟ್‌ಗಳ ಉದ್ಘಾಟನೆ

12 ಜನರಿಗೆ ಸನ್ಮಾನ

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್​​ ಗೇಟ್​​ಗಳನ್ನು ಯಶಸ್ವಿಯಾಗಿ ಅಳವಡಿಕೆ ಮಾಡಿದ ಕನ್ನಯ್ಯ ನಾಯ್ಡು ಸೇರಿದಂತೆ 12 ಜನರಿಗೆ ಕಾರ್ಯಕ್ರಮದ ವೇದಿಕೆಯಲ್ಲಿ ಸನ್ಮಾನ ನೆರವೇರಿಸಲಾಗಿದೆ. ಮೂರು ರಾಜ್ಯಗಳ ಸಿಎಂ ಹಾಗೂ ಕೇಂದ್ರ ಜಲಶಕ್ತಿ ಸಚಿವರು ಗೌರವ ಸಮರ್ಪಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಮೂರು ರಾಜ್ಯಗಳ ಸಿಎಂಗಳು ಭಾಗಿಯಾಗಿದ್ದು ವಿಶೇಷವಾಗಿತ್ತು. ಜೊತೆಗೆ ಕೇಂದ್ರ ಜಲಶಕ್ತಿ ಸಚಿವ ಸಿ. ಆರ್. ಪಾಟೀಲ್ ಸೇರಿ ಆಂಧ್ರ ಮತ್ತು ತೆಲಂಗಾಣ ಎರಡೂ ರಾಜ್ಯಗಳ ಜಲಸಂಪನ್ಮೂಲ ಸಚಿವರು ಕೂಡ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:06 pm, Thu, 25 June 26

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ