ಬೇಸಿಗೆ ಆರಂಭಕ್ಕೂ ಮುನ್ನ ಬತ್ತುವ ಹಂತದಲ್ಲಿ ತುಂಗಭದ್ರಾ ಜಲಾಶಯ! ನಾಲ್ಕು ಜಿಲ್ಲೆಗಳಿಗೆ ಸಂಕಷ್ಟ

ಕಲ್ಯಾಣ ಕರ್ನಾಟಕದ ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳು ಬರಗಾಲದಿಂದ ತತ್ತರಿಸಿದ್ದು, ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ಇದನ್ನು ನಿವಾರಿಸಲು ನಾಲ್ಕು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಪ್ರಮುಖ ಮೂಲ ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿರುವ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವ ಬಗ್ಗೆ ಸಭೆ ಕರೆಯಲಾಗಿತ್ತು. ಆದರೆ, ಈ ಜಲಾಶಯವೇ ಬತ್ತುವ ಹಂತಕ್ಕೆ ತಲುಪಿದೆ.

ಬೇಸಿಗೆ ಆರಂಭಕ್ಕೂ ಮುನ್ನ ಬತ್ತುವ ಹಂತದಲ್ಲಿ ತುಂಗಭದ್ರಾ ಜಲಾಶಯ! ನಾಲ್ಕು ಜಿಲ್ಲೆಗಳಿಗೆ ಸಂಕಷ್ಟ
ಬೇಸಿಗೆ ಆರಂಭಕ್ಕೂ ಮುನ್ನ ಬತ್ತುವ ಹಂತದಲ್ಲಿ ತುಂಗಭದ್ರಾ ಜಲಾಶಯ! ನಾಲ್ಕು ಜಿಲ್ಲೆಗಳಿಗೆ ಸಂಕಷ್ಟ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Rakesh Nayak Manchi

Updated on:Feb 25, 2024 | 7:50 AM

ಕೊಪ್ಪಳ, ಫೆ.25: ಕಲ್ಯಾಣ ಕರ್ನಾಟಕದ ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳು ಬರಗಾಲದಿಂದ ತತ್ತರಿಸಿದ್ದು, ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ಇದನ್ನು ನಿವಾರಿಸಲು ನಾಲ್ಕು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಪ್ರಮುಖ ಮೂಲ ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿರುವ ತುಂಗಭದ್ರಾ ಜಲಾಶಯದಿಂದ (Tungabhadra Reservoir) ನೀರು ಹರಿಸುವ ಬಗ್ಗೆ ಸಭೆ ಕರೆಯಲಾಗಿತ್ತು. ಆದರೆ, ಈ ತುಂಗಾಭದ್ರಾ ಜಲಾಶಯವು ಬೇಸಿಗೆ ಮುನ್ನವೇ ಬತ್ತುವ ಹಂತಕ್ಕೆ ತಲುಪಿದ್ದು, ಇದನ್ನು ನಂಬಿಕೊಂಡಿರುವ ನಾಲ್ಕೂ ಜಿಲ್ಲೆಗಳ ಜನರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ಡ್ಯಾಂ ನಿರ್ಮಿಸಲಾಗಿದೆ. ದಶಕಗಳ ಹಿಂದೆಯೇ ನಿರ್ಮಾಣವಾಗಿರುವ ಈ ಡ್ಯಾಂ, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಮತ್ತು ಕೃಷಿಗೆ ಪ್ರಮುಖ ಆಧಾರವಾಗಿದೆ. ಅನೇಕ ಕಾರ್ಖಾನೆಗಳಿಗೆ ಕೂಡಾ ಇದೇ ನೀರನ್ನು ಬಳಸಲಾಗುತ್ತಿದೆ. ಕಳೆದ ಮೂರ್ನಾಲ್ಕು ವರ್ಷ ತುಂಬಿ ಹರಿದಿದ್ದ ತುಂಗಭದ್ರಾ ನದಿ, ಈ ಬಾರಿ ಬರಗಾಲದ ಹೊಡೆತಕ್ಕೆ ಸಿಲುಕಿದೆ. ಇದರ ಪರಿಣಾಮ, ಈಗಾಗಲೇ ತುಂಗಭದ್ರಾ ನದಿ ಬರಿದಾಗಿದ್ದು, ಖಾಲಿ ಖಾಲಿಯಾಗಿದೆ.

ಇನ್ನೊಂದಡೆ ಡ್ಯಾಂ ಕೂಡಾ ಬೇಸಿಗೆ ಆರಂಭಕ್ಕೂ ಮುನ್ನವೇ ಖಾಲಿಯಾಗುವ ಹಂತಕ್ಕೆ ಬಂದಿದೆ. ಇದು ನಾಲ್ಕು ಜಿಲ್ಲೆಯ ಜನರು ಕಂಗಾಲಾಗುವಂತೆ ಮಾಡಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಬಿಸಿಲನಾಡು ಅಂತ ಕರೆಸಿಕೊಳ್ಳುವ ಪ್ರದೇಶ. ಬೇಸಿಗೆಯಲ್ಲಿ ಈ ಬಾಗದಲ್ಲಿ ಎಷ್ಟು ನೀರು ಇದ್ದರೂ ಕಡಿಮೆ. ಆದರೆ ಇದೇ ಬಾಗದಲ್ಲಿ ಇದೀಗ ಬೇಸಿಗೆ ಆರಂಭಕ್ಕೂ ಮುನ್ನವೇ ಜಲ ತತ್ವಾರ ಆರಂಭವಾಗಿದೆ.

ಭಾಗಶಃ ಬತ್ತಿದ ತುಂಗಾಭದ್ರಾ ಜಲಾಶಯ

ಇದರ ನಡುವೆ ಡ್ಯಾಂ ಖಾಲಿಯಾಗುತ್ತಿರುವದು ಜನರ ಆತಂಕವನ್ನು ಹೆಚ್ಚಿಸಿದೆ. ಇನ್ನು 105.79 ಟಿಎಂಸಿ ನೀರು ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಸದ್ಯ ಇರುವುದು ಕೇವಲ 9.11 ಟಿಎಂಸಿ ನೀರು ಮಾತ್ರ. ಇದೇ ಸಮಯದಲ್ಲಿ ಕಳೆದ ವರ್ಷ ಡ್ಯಾಂ ನಲ್ಲಿ 34.22 ಟಿಎಂಸಿ ನೀರು ಇತ್ತು. ಆದರೆ ಈ ಬಾರಿ ಬರಗಾಲದಿಂದ ಡ್ಯಾಂ ಒಮ್ಮೆಯೂ ಸಂಪೂರ್ಣವಾಗಿ ತುಂಬಿಲ್ಲ. ಡ್ಯಾಂ ನೀರು ಖಾಲಿಯಾಗುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ: ಬರಗಾಲದ ಪರಿಣಾಮ: ತುಂಗಭದ್ರಾ ನದಿ ಖಾಲಿ, ಹುಲಿಗೆಮ್ಮ ದೇವಸ್ಥಾನಕ್ಕೆ ಬಂದ ಭಕ್ತರಿಂದ ಸ್ನಾನಕ್ಕಾಗಿ ಪರದಾಟ!

ಕಳೆದ ಅನೇಕ ದಿನಗಳಿಂದ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಇರುವ ನೀರನ್ನು ಇದೀಗ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲು ಮುಂದಾಗಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ತುಂಗಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾಗಿರುವ ಶಿವರಾಜ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ 121 ನೇ ತುರ್ತು ಸಲಹಾ ಸಮಿತಿ ಸಭೆಯನ್ನು ಎರಡು ದಿನದ ಹಿಂದೆ ನಡೆಸಲಾಗಿದೆ.

ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ, ಯಾವ ಜಿಲ್ಲೆಗೆ ಯಾವ ಕಾಲುವೆ ಮೂಲಕ ಎಷ್ಟು ನೀರು ಹರಿಸಬೇಕು. ಕುಡಿಯುವ ನೀರಿಗೆ ಎಷ್ಟು, ಕೃಷಿಗೆ ಎಷ್ಟು ನೀರು ಹರಿಸಬೇಕು ಅನ್ನೋ ಬಗ್ಗೆ ಚರ್ಚೆ ನಡೆಸಲಾಗಿದೆ. ಸಬೆಯಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ನೀರಾವರಿ ಸಲಹಾ ಸಮಿತಿಯ ನಿರ್ಣಯಗಳು

ತುಂಗಭದ್ರಾ ಎಡದಂಡೆಯ ಮುಖ್ಯ ಕಾಲುವೆ ಮೂಲಕ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಿಗೆ ಗಣೇಕಲ ಜಲಾಶಯ ಹಾಗೂ ಇತರೆ ಕೆರೆ ಕಟ್ಟೆಗಳನ್ನು ತುಂಬಿಸಿಕೊಳ್ಳಲು ನೀರು ಬಿಡಲು ನಿರ್ಣಯ ಕೈಗೊಳ್ಳಲಾಗಿದೆ. 5.3.24 ರಿಂದ 16.3.24 ರ ವರಗೆ ಪ್ರತಿ ದಿನ 1200 ಕ್ಯೂಸೆಕ್​ನಂತೆ ಕುಡಿಯುವ ನೀರು ಹರಿಸಲು ನಿರ್ಧರಿಸಲಾಗಿದೆ.

ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ ಮೂಲಕ, ಬಳ್ಳಾರಿ ಜಿಲ್ಲೆಗೆ ಹಾಗೂ ಇತರೆ ಗ್ರಾಮೀಣ ಕುಡಿಯುವ ನೀರು ಯೋಜನೆಗಳಿಗೆ 10.3.24 ರಿಂದ 23.3.24 ರವವರಗೆ ಪ್ರತಿ ದಿನ ನೂರು ಕ್ಯೋಸೆಕ್ ನಂತೆ ನೀರು ಹರಿಸಲು ನಿರ್ಧಾರ. ಇನ್ನು ಹೆಚ್ಚಿನ ಅಗತ್ಯ ಬಿದ್ದರೆ, 21.3.24 ರಿಂದ 31.3.24 ರವರಗೆ ಪ್ರತಿ ದಿನ ನೂರು ಕ್ಯೂಸೆಕ್ ನಂತೆ ಕುಡಿಯುವ ನೀರು ಮತ್ತು ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸಲು ನಿರ್ಣಯಿಸಯಾಗಿದೆ.

ಇನ್ನು ರಾಯ ಮತ್ತು ಬಸವಣ್ಣ ಕಾಲುವೆಗಳಿಗೆ, ವಿಜಯನಗರ ಜಿಲ್ಲೆಗೆ ಹಂಚಿಕೆಯಾದ 0.260 ಟಿಎಂಸಿ ನೀರಿನಲ್ಲಿ 1.3.24 ರಿಂದ 30.5.24 ರವರಗೆ 100 ಕ್ಯೂಸೆಕ್ ನಂತ ದಿನಬಂದಿ ಆಧಾರದ ಮೇಲೆ ಕುಡಿಯುವ ನೀರನ್ನು ಹರಿಸಬಹುದಾಗಿದೆ ಅಂತ ನಿರ್ಣಯಿಸಲಾಗಿದೆ.

ಬೇಸಿಗೆ ಆರಂಭಕ್ಕೂ ಮುನ್ನವೇ ಡ್ಯಾಂ ಖಾಲಿಯಾಗುತ್ತಿರುವುದು ನಾಲ್ಕು ಜಿಲ್ಲೆಯ ಜನರ ಎದೆಬಡಿತ ಹೆಚ್ಚಾಗುವಂತೆ ಮಾಡಿದೆ. ಹೀಗಾಗಿ ಇರುವ ನೀರಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 am, Sun, 25 February 24

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್