AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು: ಇಂದು ನಡೆಯಬೇಕಿದ್ದ ಪರೀಕ್ಷೆಯೇ ರದ್ದಾಯ್ತು

Vijayanagar Srikrishna Devaraya University: ಕಾಲೇಜುಗಳ ಮುಖ್ಯಸ್ಥರು ಕೂಡ ಕೂಡಲೇ ಪ್ರಶ್ನೆ ಪತ್ರಿಕೆ ಬದಲಾವಣೆಯ ಎಡವಟ್ಟನ್ನು ವಿವಿ ಗಮನಕ್ಕೆ ತಂದಿದ್ದಾರೆ. ತತ್ಫರಿಣಾಮ ವಿಶ್ವವಿದ್ಯಾಲಯವು ಬಿಎ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಇದೀಗ ಇಂದು ರದ್ದಾಗಿರುವ ಪರೀಕ್ಷೆಗೆ ಮರು ದಿನಾಂಕ ನಗದಿಪಡಿಸಬೇಕಿದೆ.

ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು: ಇಂದು ನಡೆಯಬೇಕಿದ್ದ ಪರೀಕ್ಷೆಯೇ ರದ್ದಾಯ್ತು
ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು
ಸಂಜಯ್ಯಾ ಚಿಕ್ಕಮಠ
| Edited By: ಸಾಧು ಶ್ರೀನಾಥ್​|

Updated on: May 14, 2024 | 1:29 PM

Share

ಕೊಪ್ಪಳ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (Vijayanagar Srikrishna Devaraya University) ಪರೀಕ್ಷೆಯಲ್ಲಿ ಎಡವಟ್ಟು ಮಾಡಿದೆ. ವಿಶ್ವವಿದ್ಯಾಲಯವು ಪ್ರಶ್ನೆ ಪತ್ರಿಕೆಯನ್ನೇ ಅದಲು ಬದಲು ಮಾಡಿ, ಪರೀಕ್ಷೆ ನಡೆಸಿದ್ದು, ಕೊಪ್ಪಳ ಸೇರಿ ಹಲವೆಡೆ ಈ ಅವಾಂತರ ಜರುಗಿದೆ. ವಿವಿ ವ್ಯಾಪ್ತಿಯ 145 ಕಾಲೇಜುಗಳಲ್ಲಿ ಪ್ರಶ್ನೆ ಪತ್ರಿಕೆ ಅದಲು ಬದಲು ಆಗಿರುವುದು ಖಚಿತಪಡುತ್ತಿದ್ದಂತೆ, ಇಡೀ ಪರೀಕ್ಷೆಯನ್ನೇ ರದ್ದು (Cancell) ಮಾಡಲಾಗಿದೆ.

ಇಂದು ಮಂಗಳವಾರ ಬಿ ಎ ಪದವಿಯ ಮೂರನೇ ಸೆಮಿಸ್ಟರ್ ನ ಸಮಾಜಶಾಸ್ತ್ರ ಪರೀಕ್ಷೆ ನಡೆಯಬೇಕಿತ್ತು. ಮೂರನೇ ಸೆಮಿಸ್ಟರ್ ಬದಲಾಗಿ ಎರಡನೇ ಸೆಮಿಸ್ಟರ್ ನ ಪ್ರಶ್ನೆ ಪತ್ರಿಕೆ ನೀಡಿ ವಿಶ್ವವಿದ್ಯಾಲಯ ಅಚಾತುರ್ಯ ಮೆರೆದಿದೆ. ಮೂರನೇ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧರಾಗಿ ಬಂದಿದ್ದ ವಿದ್ಯಾರ್ಥಿಗಳು ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ನೋಡಿ ಗಾಬರಿಗೊಂಡಿದ್ದಾರೆ. ತಕ್ಷಣವೇ, ವಿಶ್ವವಿದ್ಯಾಲಯದ ಈ ಮಹಾ ಎಡವಟ್ಟನ್ನು ವಿದ್ಯಾರ್ಥಿಗಳು ಪ್ರಾಚಾರ್ಯರ ಗಮನಕ್ಕೆ ತಂದಿದ್ದಾರೆ.

Also Read: ರಾಜ್ಯದಲ್ಲಿ ಬಹುತೇಕ ಕಡೆ ಮಳೆ: ಆದರೆ ಬೆಳಗಾವಿ-ಬಳ್ಳಾರಿಯಲ್ಲಿ ಮುಂದುವರಿದ ಬರದ ಬರೆ, ಏನಿದೆ ಚಿತ್ರಣ

ಕಾಲೇಜುಗಳ ಮುಖ್ಯಸ್ಥರು ಕೂಡ ಕೂಡಲೇ ಪ್ರಶ್ನೆ ಪತ್ರಿಕೆ ಬದಲಾವಣೆಯ ಎಡವಟ್ಟನ್ನು ವಿವಿ ಗಮನಕ್ಕೆ ತಂದಿದ್ದಾರೆ. ತತ್ಫರಿಣಾಮ ವಿಶ್ವವಿದ್ಯಾಲಯವು ಬಿಎ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಇದೀಗ ಇಂದು ರದ್ದಾಗಿರುವ ಪರೀಕ್ಷೆಗೆ ಮರು ದಿನಾಂಕ ನಗದಿಪಡಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ