ಯಾದಗಿರಿ ಪಿಎಸ್ಐ ಪರಶುರಾಮ ಕುಟುಂಬಕ್ಕೆ 50 ಲಕ್ಷ ರೂ.: ಪರಮೇಶ್ವರ್​ ಘೋಷಣೆ

ಯಾದಗಿರಿ ಸೈಬರ್​ ಕ್ರೈಂ ಪೊಲೀಸ್​ ಠಾಣೆ ಪಿಎಸ್​ಐ ಪರಶುರಾಮ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಬುಧವಾರ ಮೃತ ಪರಶುರಾಮ ಅವರ ಮನೆಗೆ ಗೃಹ ಸಚಿವ ಜಿ. ಪರಮೇಶ್ವರ್​ ಭೇಟಿ ನೀಡಿದ್ದಾರೆ. ಪಿಎಸ್​ಐ ಪರಶುರಾಮ ಅವರ ಕುಟುಂಬಕ್ಕೆ 50 ಲಕ್ಷ ರೂ. ನೀಡುವುದಾಗಿ ಜಿ ಪರಮೇಶ್ವರ್​ ಘೋಷಣೆ ಮಾಡಿದ್ದಾರೆ.

ಯಾದಗಿರಿ ಪಿಎಸ್ಐ ಪರಶುರಾಮ ಕುಟುಂಬಕ್ಕೆ 50 ಲಕ್ಷ ರೂ.: ಪರಮೇಶ್ವರ್​ ಘೋಷಣೆ
ಜಿ ಪರಮೇಶ್ವರ್​​, ಪಿಎಸ್​ಐ ಪರಶುರಾಮ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Aug 07, 2024 | 2:15 PM

ಕೊಪ್ಪಳ, ಆಗಸ್ಟ್​​​ 07: ಯಾದಗಿರಿ ಪಿಎಸ್​ಐ ಪರಶುರಾಮ (Yadgiri PSI Parashuram) ಅನುಮಾನಾಸ್ಪದ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ. ರಾಯಚೂರು ಕೃಷಿ ವಿವಿ ಅಥವಾ ಜೆಸ್ಕಾಂನಲ್ಲಿ ಕೆಲಸ ಕೊಡುವಂತೆ ಕೇಳಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaih) ಅವರ ಜೊತೆ ಮಾತನಾಡುತ್ತೇನೆ. ಗೃಹ ಇಲಾಖೆ ಹಾಗೂ ಸರ್ಕಾರದಿಂದ 50 ಲಕ್ಷ ಹಣ ನೀಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwara) ಘೋಷಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು (ಆ.07) ಮೃತ ಪಿಎಸ್​ಐ ಪರಶುರಾಮ ಅವರ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಮತ್ತು ಅವರ ಪುತ್ರನ ಮೇಲೆ ಆರೋಪ ಮಾಡಿದ್ದಾರೆ. ತನಿಖೆಗೆ ಆದೇಶ ಮಾಡಿದ್ದೇನೆ. ಆರೋಪ ಕೇಳಿಬಂದ ದಿನವೇ ಸಿಐಡಿ ತನಿಖೆಗೆ ಪ್ರಕರಣವನ್ನು ನೀಡಿದ್ದೇವೆ. ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಯಾರು ಕೂಡ ಹಣ ತೆಗೆದುಕೊಂಡು ವರ್ಗಾವಣೆ ಮಾಡಲ್ಲ. ವರ್ಗಾವಣೆಗೆ ಎರಡು ವರ್ಷ ನಿಗದಿ ಮಾಡಿದ್ದೇವೆ ಎಂದು ತಿಳಿಸಿದರು.

ಸಿಬಿಐಗೆ ನೀಡುವ ಅರ್ಹತೆ ಈ ಪ್ರಕರಣದಲ್ಲಿ ಇಲ್ಲ

ನಾನು ವಿರೋಧ ಪಕ್ಷದವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲ್ಲ. ಸಿಬಿಐಗೆ ನೀಡುವ ಅರ್ಹತೆ ಈ ಪ್ರಕರಣದಲ್ಲಿ ಇಲ್ಲ. ಆದರೆ ಕುಟುಂಬಕ್ಕೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇವೆ. ಅವರಿಗೆ ನ್ಯಾಯ ಸಿಗದೆ ಇದ್ದರೆ ಮುಂದೆ ನೋಡೋಣ. ಪರಶುರಾಮ ಅವರು ಏಳು ತಿಂಗಳಲ್ಲೇ ಹೇಗೆ ವರ್ಗಾವಣೆಯಾದರು ಅಂತ ನನಗೆ ಗೊತ್ತಿಲ್ಲ. ಅವದಿಗೂ ಮೊದಲೇ ವರ್ಗಾವಣೆ ಬಗ್ಗೆ ಕೂಡ ಸಿಐಡಿ ತನಿಖೆಯಲ್ಲಿ ಹೊರಗೆ ಬರುತ್ತದೆ ಎಂದು ಹೇಳಿದರು.

ಎಫ್ಐಆರ್ ದಾಖಲಾಗಲು ವಿಳಂಬವಾಗಿಲ್ಲ. ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನಂತರ ಎಫ್​ಐಆರ್ ದಾಖಲಿಸಿದ್ದಾರೆ. ಪ್ರಾಥಮಿಕ ತನಿಖೆಯಾದ ನಂತರ ದೂರು ದಾಖಲಾಗುತ್ತದೆ. ನಂತರ ಆರೋಪಿಗಳನ್ನು ಬಂಧಿಸಲಾಗುತ್ತದೆ. ಆರ್​ ಅಶೋಕ್ ಅವರು ಗೃಹ ಸಚಿವರಾಗಿದ್ದರು. ಅವರು ಇದ್ದಾಗ ಸಿಐಡಿ ಚೆನ್ನಾಗಿತ್ತಾ? ಎಂದು ತಿರುಗೇಟು ನೀಡಿದರು.

ವರ್ಗಾವಣೆಗೆ ಹಣ ಪಡೆಯಾಲಾಗಿದೆ ಎಂದು ಕುಟುಂಬ ಆರೋಪ ಮಾಡಿದೆ. ಆದರೆ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಭ್ರಷ್ಟಾಚಾರ ನಿಲ್ಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ ಸಮಯಬೇಕು ಎಂದು ಹೇಳಿದರು.

ಇದನ್ನೂ ಓದಿ: ಯಾದಗಿರಿ ಪಿಎಸ್​ಐ ಪರಶುರಾಮ ಸಹಜ ಸಾವು ಎಂದ ಪರಮೇಶ್ವರ್​: ಎ1 ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ

ರಾಜ್ಯದಲ್ಲಿ ವರ್ಗಾವಣೆ ದಂಧೆ ಇದೆ ಎಂಬ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅದು ಅವರ ವ್ಯಯಕ್ತಿಕ ವಿಚಾರ. ನಾನು ಗಾಳಿಯಲ್ಲಿ ಗುಂಡು ಹೊಡೆಯಲ್ಲ. ವರ್ಗಾವಣೆಗೆ ಯಾರು ಹಣ ಪಡೆಯುತ್ತಾರೆ ಅಂತ ಅವರು ಹೆಸರು ಹೇಳಿದರೆ ಅದರ ಬಗ್ಗೆ ತನಿಖೆ ಮಾಡೋಣ ಎಂದರು.

ಮಾನ್ಯ ರಾಜಪಾಲರು ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಶೋಕಾಸ್ ನೀಡಿದ್ದೆ ತಪ್ಪು, ಅದನ್ನು ಹಿಂಪಡೆಯರಿ ಅಂತ ಸಂಪುಟದಲ್ಲಿ ಚರ್ಚಿಸಿ ಸಲಹೆ ನೀಡಿದ್ದೇವೆ. ಅವರು ಅದನ್ನು ಪಡೆಯಬಹುದು, ಇಲ್ಲವೇ ಬಿಡಬಹುದು. ನಾವು ನೀಡಿರುವ ಸಲಹೆಯನ್ನು ಅವರು ಹಾಗೆ ಇಟ್ಟುಕೊಂಡಿದ್ದಾರೆ. ರಾಜೀನಾಮೆ ನೀಡಲು ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ. ಪ್ರಾಸಿಕ್ಯೂಷನ್​ಗೆ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:14 pm, Wed, 7 August 24

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ