ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದಿಲ್ಲ: ಶಾಸಕ ಬಸವರಾಜ ರಾಯರೆಡ್ಡಿ

ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದಿಲ್ಲ. ಹಣದ ಬದಲಾಗಿ ನಮ್ಮ ಕ್ಷೇತ್ರದ ಕೆಲಸಗಳನ್ನು ಮಾಡಿಸಿಕೊಳ್ಳುತ್ತೇನೆ ಎಂದು ಕೊಪ್ಪಳದ ತಳಕಲ್ ಬಳಿ ಇರುವ ಇಂಜಿನಿಯರಿಂಗ್ ಕಾಲೇಜು ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದಿಲ್ಲ: ಶಾಸಕ ಬಸವರಾಜ ರಾಯರೆಡ್ಡಿ
ಶಾಸಕ ಬಸವರಾಜ ರಾಯರೆಡ್ಡಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 04, 2023 | 8:54 PM

ಕೊಪ್ಪಳ, ಸೆಪ್ಟೆಂಬರ್​​ 4: ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತ ಬಂದಿದ್ದ ಶಾಸಕ ಬಸವರಾಜ ರಾಯರೆಡ್ಡಿ (Basavaraj Rayareddy) ಇದೀಗ ಮತ್ತೆ ಅಸಮಾಧಾನ ಹೊರಹಾಕಿದ್ದು, ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದಿಲ್ಲ. ಬದಲಾಗಿ ನಮ್ಮ ಕ್ಷೇತ್ರದ ಕೆಲಸಗಳನ್ನು ನಾವೇ ಮಾಡಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಕೊಪ್ಪಳದ ತಳಕಲ್ ಬಳಿ ಇರುವ ಇಂಜಿನಿಯರಿಂಗ್ ಕಾಲೇಜು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಟಾಪ್ 10ರಲ್ಲಿ ಇರಬೇಕು. ಅದು ನನ್ನ ಆಸೆಯಾಗಿತ್ತು, ಆದರೆ ಹಿಂದಿನ ಸರ್ಕಾರ ಏನೂ ಮಾಡಿಲ್ಲ. ಹೀಗಾಗಿ ಇಬ್ಬರು ಸಚಿವರನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದೇನೆ. ಇಬ್ಬರು ನನ್ನ ಒಳ್ಳೆಯ ಸ್ನೇಹಿತರು ಹಾಗೂ ಸಹೋದರರಿದ್ದಂತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಚಿವರಷ್ಟೇ ಅಲ್ಲ; ಈಗ ಅಧಿಕಾರಿಗಳೂ ಕ್ಯಾರೇ ಅಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಮತ್ತೆ ಪತ್ರ ಬರೆದ ಶಾಸಕ ಬಸವರಾಜ ರಾಯರೆಡ್ಡಿ

ನಮಗೆ ಯಾವುದೇ ಅನುದಾನ ಬೇಕಾಗಿಲ್ಲ. ಇಲ್ಲಿಗೆ ಸಿಬ್ಬಂದಿ ಕೊರತೆಯಿದೆ ಅದನ್ನ ನೀವು ಮಾಡಿಕೊಡಬೇಕು ಅಂತ ಮನವಿ ಮಾಡಿದ್ದಾರೆ. ಇಬ್ಬರು ಸಚಿವರು ನಮ್ಮ ಇಂಜಿನಿಯರಿಂಗ್ ಕಾಲೇಜು, ಕೌಶಲ್ಯಾಭಿವೃದಿ ಕೇಂದ್ರಕ್ಕೆ ಅನೂಕುಲ ಮಾಡಿಕೊಡುತ್ತಾರೆ. ಅದಕ್ಕಾಗಿ ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರು ಬಂದಿದ್ದಾರೆ ಎಂದರು.

ಅನುದಾನ ಕೇಳೋದಿಲ್ಲ ಎನ್ನುತ್ತಲ್ಲೇ ವೇದಿಕೆ ಮೇಲೆ ಉನ್ನತ ಶಿಕ್ಷಣ ಇಲಾಖೆಯಿಂದ 18 ಕೋಟಿ ರೂ. ಅನುನಾದ ಮಂಜೂರು ಮಾಡಿಸಿಕೊಂಡ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಮಾಹಿತಿ ನೀಡಿದ್ದಾರೆ. ಉನ್ನತ ಶಿಕ್ಷಣ ಸಚಿವರ ಸುಧಾಕರ್ ಸಮ್ಮುಖದಲ್ಲಿ ಅನುದಾನದ ಮಾಹಿತಿ ನೀಡಿದ್ದು, ಇಂಜಿನಿಯರಿಂಗ್ ಕಾಲೇಜು ಮೂಲಭೂತ ಸೌಕರ್ಯಕ್ಕೆ ಅನುದಾನ ಬಳಕೆ ಮಾಡಲಾಗಿದೆ ಎಂರು ತಿಳಿಸಿದ್ದಾರೆ.

ಕಳೆದ ವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ಬಸವರಾಜ ರಾಯರೆಡ್ಡಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಪತ್ರ ಬರೆದಿದ್ದರು. ಈ ಮೂಲಕ ಒಂದೇ‌ ತಿಂಗಳಿನಲ್ಲಿ ಸಿಎಂಗೆ ಎರಡು ಪತ್ರ ಬರೆದಿದ್ದಾರೆ. ಆ ಮೂಲಕ ತಮ್ಮದೇ ಸರ್ಕಾರದ ಆಡಳಿತದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಇದೇ ವಿಷಯವಾಗಿ ಸಿಎಂ ಸಿದ್ದರಾಮಯ್ಯ ಕೂಡ ಪತ್ರ ಬರೆಯುವ ಬದಲು ಖುದ್ದು ಭೇಟಿ ಮಾಡಬಹುದಿತ್ತು ಎಂದು ತರಾಟೆ ತೆಗೆದುಕೊಂಡಿದ್ದರು.

ಕಾಂಗ್ರೆಸ್‌ನ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ‌ ಅವಕಾಶ ಸಿಕ್ಕಾಗಲೆಲ್ಲ ಪಕ್ಷದ ವಿರುದ್ದ ಕಿಡಿಕಾರಿದ್ದಾರೆ. ಸರ್ಕಾರ ರಚನೆ ಬಳಿಕ ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತ ತಮ್ಮದೇ ನಾಯಕರ ವಿರುದ್ದ ಗುಡುಗಿದ್ದರು. ಇನ್ನೇನು ಎಲ್ಲವೂ ತಣ್ಣಗಾಯಿತು ಎನ್ನೋವಷ್ಟರಲ್ಲಿ ಮತ್ತೆ ಸ್ವಪಕ್ಷದವರ ವಿರುದ್ದವೇ ಕಿಡಿಕಾರಿದ್ದರು. ಇನ್ನು ಇತ್ತೀಚೆಗೆ ಕೊಪ್ಪಳದಲ್ಲಿ ತಮ್ಮ ಆಪ್ತರಿಗೆ ಔತಣಕೂಟ ಏರ್ಪಡಿಸಿ ಸಂಚಲನಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಸಿಎಂಗೆ ಬರೆದ ಪತ್ರದ ಹಿಂದಿನ ಕಾರಣವನ್ನು ರಿವೀಲ್​ ಮಾಡಿದ ಶಾಸಕ ಬಸವರಾಜ ರಾಯರೆಡ್ಡಿ

ಔತಣಕೂಟಕ್ಕೂ, ರಾಜಕೀಯಕ್ಕೂ ಸಂಬಂಧವಿಲ್ಲ ಎನ್ನುತ್ತಲೇ, ಸ್ವಪಕ್ಷೀಯರ ವಿರುದ್ದವೇ ಮತ್ತೆ ಗುಡುಗಿದ್ದರು. ತಮ್ಮ ನೂತನ ಸರ್ಕಾರದ ವಿರುದ್ದ ಮಾಡಲಾಗಿದ್ದ ಕಮೀಷನ್ ಆರೋಪಕ್ಕೆ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ ರಾಯರೆಡ್ಡಿ, ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ರಾಜ್ಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಅಷ್ಟೇ ಅಲ್ಲದೇ ಖುದ್ದು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಕಾಳಜಿ ವಹಿಸಿ ಭ್ರಷ್ಟಾಚಾರ ಹಾಗೂ ಕಮೀಷನ್ ದಂಧೆಗೆ ಕಡಿವಾಣ ಹಾಕಬೇಕು ಎಂದಿದ್ದರು. ಸುಮ್ನೆ ವಿಪಕ್ಷದವರ ಮೇಲೆ ನಾವು ಆರೋಪ ಮಾಡೋದು ನಮ್ಮ ಮೇಲೆ ಅವರು ಆರೋಪ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಿ ಎಲ್ಲರೂ ಜೊತೆಗೂಡಿ ಕಮೀಷನ್ ವಿಚಾರವಕ್ಕೆ ಕಡಿವಾಣ ಹಾಕಬೇಕು ಅಂತ ಸ್ವಪಕ್ಷದ ಸರ್ಕಾರಕ್ಕೆ ಸಲಹೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:25 pm, Mon, 4 September 23

Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ಇಬ್ಬಗೆ ನೀತಿ ತೋರುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಅಶೋಕ
ಇಬ್ಬಗೆ ನೀತಿ ತೋರುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಅಶೋಕ