ಜೋರಾಗಿ ಗಾಳಿ ಬೀಸಿದ್ದರಿಂದ ಶಾಮಿಯಾನ ಹಾರಿಬಿದ್ದು ಮಹಿಳೆ ಸಾವು: ನಾಲ್ವರಿಗೆ ಗಾಯ
ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕಾಗಿ ಅಡುಗೆ ಮಾಡುವ ಜಾಗದಲ್ಲಿ ಹಾಕಿದ್ದ ಶಾಮಿಯಾನ ಜೋರಾಗಿ ಗಾಳಿ ಬೀಸಿದ್ದರಿಂದ ಬಿದ್ದು, ನಾಲ್ವರಿಗೆ ಗಾಯಗಳಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ: ಜೋರಾಗಿ ಗಾಳಿ ಬೀಸಿದ್ದರಿಂದ ಶಾಮಿಯಾನ ಹಾರಿಬಿದ್ದು ನಾಲ್ವರಿಗೆ ಗಾಯಗಳಾಗಿದ್ದು, ಮಹಿಳೆ(Woman) ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಮುಷ್ಟೂರು ಕ್ಯಾಂಪ್‌ನಲ್ಲಿ ನಡೆದಿದೆ. ಪ್ರಗತಿ ನಗರ ನಿವಾಸಿ ಅಂಜಿನಮ್ಮ(45) ಮೃತ ಮಹಿಳೆ. ಸದ್ಯ ನಾಲ್ವರು ಗಾಯಾಳುಗಳಿಗೆ ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕಾಗಿ ಶಾಮಿಯಾನ ಹಾಕಲಾಗಿತ್ತು. ಅಡುಗೆ ಮಾಡುವ ಜಾಗದಲ್ಲಿ ಹಾಕಿದ್ದ ಶಾಮಿಯಾನ ಅಡುಗೆ ತಯಾರಿಸುತ್ತಿದ್ದ ಮಹಿಳೆಯರ ಮೇಲೆ ಬಿದ್ದು, ಅವಘಡ ಸಂಭವಿಸಿದೆ. ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ವೃದ್ಧ ದಂಪತಿಗೆ ಗಂಭೀರ ಗಾಯ
ತುಮಕೂರು: ಲಾರಿ ಹಾಗೂ ಟಿವಿಎಸ್ ಬೈಕ್ ನಡುವೆ ಡಿಕ್ಕಿಯಾಗಿ ಸವಾರರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದಿದೆ. ದಂಪತಿಗಳು ತೆರಳುತ್ತಿದ್ದ ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ವೃದ್ಧ ದಂಪತಿ ಮಹಾಲಿಂಗಯ್ಯರಿಗೆ ಗಾಯಗಳಾಗಿದ್ದರೆ ಸುಜಾತರಿಗೆ ಕಾಲು ಮುರಿದಿದೆ. ಗಾಯಾಳುಗಳಿಗೆ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Tumakuru News: ಆ್ಯಕ್ಸೆಲ್ ಬ್ಲೇಡ್ ಕಟ್ ಆಗಿ ಆಟೋಗೆ ಗುದ್ದಿದ ಕ್ಯಾಂಟರ್: ತಾಯಿ-ಮಗಳು ದಾರುಣ ಸಾವು
ಬೈಕ್ಗೆ ಲಾರಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ
ಹಾಸನ: ಆ್ಯಕ್ವಿವ್ ಹೊಂಡಾ ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಗರದ ಸಂತೇಪೇಟೆ ಸರ್ಕಲ್‌ನಲ್ಲಿ ಘಟನೆ ನಡೆದಿದ್ದು, ಚಿಕ್ಕಡಲೂರು ಗ್ರಾಮದ ಅಭಿಲಾಷ್ (22) ಮೃತ ಯುವಕ. ದೊಡ್ಡಪುರ ಗ್ರಾಮದ ರಘು, ವರುಣ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಡಿಕ್ಕಿ ರಭಸಕ್ಕೆ ರಘು ಕಾಲು ತುಂಡಾಗಿದ್ದು, ವರುಣನ ತಲೆಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: Kodagu News: ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ
ಹಾಸನ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು. ಸ್ನೇಹಿತರೆಲ್ಲಾ ಬೈಕ್‌ನಲ್ಲಿ ಸಕಲೇಶಪುರಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಒಂದೇ ಬೈಕ್ ಮೇಲೆ ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.