AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಆಯ್ತು, ಈಗ ಕೊಪ್ಪಳದಲ್ಲಿ ಕಲುಷಿತ ನೀರು ಕುಡಿದು ವೃದ್ಧೆ ಸಾವು; ಮಂದಿ ಅಸ್ವಸ್ಥ

Contaminated Water: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಹೊನ್ನಮ್ಮ ಶಿವಪ್ಪ (65) ಎಂದು ಗುರುತಿಸಲಾಗಿದೆ. ಇನ್ನು 10 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.

ರಾಯಚೂರು ಆಯ್ತು, ಈಗ ಕೊಪ್ಪಳದಲ್ಲಿ ಕಲುಷಿತ ನೀರು ಕುಡಿದು ವೃದ್ಧೆ ಸಾವು; ಮಂದಿ ಅಸ್ವಸ್ಥ
ಕಲುಷಿತ ನೀರು ಕುಡಿದು ಹೊನ್ನಮ್ಮ ಶಿವಪ್ಪ ಎಂಬ ವೃದ್ಧೆ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on: Jun 06, 2023 | 9:11 AM

Share

ಕೊಪ್ಪಳ: ರಾಯಚೂರಿನಲ್ಲಿ ಕಲುಷಿತ ನೀರು(Raichur Contaminated Water) ಸೇವಿಸಿ ಬಾಲಕ ಸಾವನ್ನಪ್ಪಿದ ದುರ್ಘಟನೆ ಮಾಸುವ ಮುನ್ನವೇ ಈಗ ಕೊಪ್ಪಳದಲ್ಲೂ(Koppal) ದುರ್ಘಟನೆಯೊಂದು ಸಂಭವಿಸಿದೆ. ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು(Contaminated Water) ಸೇವಿಸಿ ಓರ್ವ ವೃದ್ಧೆ ಮೃತಪಟ್ಟಿದ್ದು(Death) 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.

ಸೋಮವಾರ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಹೊನ್ನಮ್ಮ ಶಿವಪ್ಪ (65) ಎಂದು ಗುರುತಿಸಲಾಗಿದೆ. ಇನ್ನು 10 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಚಿಕಿತ್ಸೆ ಮುಂದುವರೆದಿದೆ. ಅಸ್ವಸ್ಥರೆಲ್ಲರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಕೆಲವರು ಇಂದು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದೇವದುರ್ಗ ಕಲುಷಿತ ನೀರು ಪ್ರಕರಣ: ನಿಗದಿತ ಅಂಶಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಫ್ಲೋರೈಡ್ ಇರೋದು ಪತ್ತೆ

ಗ್ರಾಮದಲ್ಲಿ ಸುಮಾರು ಮೂರು ದಿನಗಳಿಂದ ವಾಂತಿ- ಬೇದಿಯಿಂದ ಜನರು ಬಳಲುತ್ತಿದ್ದರು. ಕನಕಗಿರಿ ಸರ್ಕಾರಿ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗೆ ಜನ ದಾಖಲಾಗಿದ್ದು ಗ್ರಾಮಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಗ್ರಾಮ ಪಂಚಾಯತ್ ಕಲುಷಿತ ನೀರು ಪೂರೈಕೆ ಮಾಡುತ್ತಿದೆ ಎಂದಿದ್ದಾರೆ. ಇನ್ನು ವೃದ್ಧೆ ಸಾವು ಬಳಿಕ ದಿನದಿಂದ ದಿನಕ್ಕೆ ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಿದೆ. ಮೂರು ದಿನಗಳ ಹಿಂದೆ ವೃದ್ಧೆ ಮೃತಪಟ್ಟಿದ್ದು ಅಸ್ವಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಗಮನಕ್ಕೆ ತರದೇ ಗ್ರಾಮ ಪಂಚಾಯತ್ ನಿರ್ಲಕ್ಷ್ಯ ವಹಿಸಿದೆ. ಈಗಾಗಲೇ ರಾಯಚೂರಿನಲ್ಲಿ ಈ ರೀತಿಯ ಘಟನೆ ನಡೆದು ಜನರ ಜೀವನದ ಜೊತೆ ಚಲ್ಲಾಟವಾಡಿದರೂ ಅಧಿಕಾರಿಗಳು ಮಾತ್ರ ಇನ್ನೂ ಎಚ್ಚೆತ್ತಿಲ್ಲ.

ಜಿಲ್ಲಾಡಳಿತದ ಅಧಿಕಾರಿಗಳ್ಯಾರೂ ಗ್ರಾಮಕ್ಕೆ ಬಂದು ಪರಿಶೀಲನೆ ಮಾಡಿಲ್ಲ. ಜೊತೆಗೆ, ಗ್ರಾಮಕ್ಕೆ ಶುದ್ಧ ಕುಡಿಯುವ ಪೂರೈಕೆಗೂ ವ್ಯವಸ್ಥೆ ಮಾಡಿಲ್ಲ. ಇನ್ನು ಅಸ್ವಸ್ಥಗೊಂಡವರ ಪ್ರಕರಣ ಹೆಚ್ಚಾಗುತ್ತಿದ್ದಂತೆ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು, ಸರ್ಕಾರಿ ಆಸ್ಪತ್ರೆಗಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತಿದೆ. ಇನ್ನು ಅಸ್ವಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಪ್ರಕರಣ ತೀವ್ರ ಸ್ವರೂಪ ಬೆಳಕಿಗೆ ಬಂದಿದೆ. ಆದರೂ, ಆರೋಗ್ಯ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್