ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಮಹಿಳೆ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸಗಿದ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಲಾಗಿದೆ. ಪ್ರಕರಣ ಸಂಬಂಧ ವೈರಲ್ ಆಗುತ್ತಿರುವ ಕೆಲವು ವಿಡಿಯೋಗಳ ಬಗ್ಗೆ ಎಸ್​ಪಿ ಸ್ಪಷ್ಟನೆ ನೀಡಿದ್ದಾರೆ.

ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್
ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಸಂಬಂಧ 16 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ (ಸಾಂದರ್ಭಿಕ ಚಿತ್ರ)
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi

Updated on: Aug 14, 2023 | 7:48 PM

ಕೊಪ್ಪಳ, ಆಗಸ್ಟ್ 14: ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಮಹಿಳೆ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸಗಿದ ಆರೋಪ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ 16 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ನಡುವೆ ಪ್ರಕರಣ ಸಂಬಂಧ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಶ್ರೀನಿವಾಸ್ ಸತ್ಯನಾರಯಣ್, ರಾಧಾ ಶ್ರೀನಿವಾಸ್, ಪ್ರದೀಪ್ ಶ್ರೀನಿವಾಸ್, ಸುದೀಪ್ ಶ್ರೀನಿವಾಸ್ ಹಾಗೂ ಗೋಪಾಲ್ ರಾವ್ ಪುಲ್ಲಯ್ಯ ಕೊಠಾರಿ, ರಾಮರಾವ್ ವೆಂಕಟನಾರಯಣ್ ಸೇರಿದಂತೆ 16 ಜನರ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಜಮೀನು ವಿಚಾರವಾಗಿ ಎರಡೂ ಒಂದೇ ಕುಟುಂಬದ ಮಧ್ಯೆ ಏಳು ವರ್ಷಗಳಿಂದ ವಿವಾದವಿತ್ತು. ಜುಲೈ 27 ರಂದು ಜಮೀನಿಗೆ ಹೋದಾಗ ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಿ ಮಹಿಳೆ ‌ದೂರು ನೀಡಿದ್ದಾರೆ. ನಮ್ಮ ಪಾಲಿಗೆ ಬಂದಿದ್ದ ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಭಾವ ಹಾಗೂ ಸಂಬಂಧಿಕರೇ ಅತ್ಯಾಚಾರ ಮಾಡಿದ್ದು, ಪತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿನ್ನು ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ರೆ ಗಲ್ಲು ಶಿಕ್ಷೆ, ಗುಂಪುಗೂಡಿ ಹತ್ಯೆ ಮಾಡಿದ್ರೆ 7 ವರ್ಷ ಜೈಲು

ಮಹಿಳೆ ನೀಡಿದ ದೂರಿನ ಅನ್ವಯ ಪೊಲೀಸರು, ಕಲಂ 143, 147, 376 (D), 148, 354, 504, 506 ಅಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಪ್ರಕರಣದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಈ ಸಂಬಂಧ ಎಸ್​​ಪಿ ಸ್ಪಷ್ಟನೆ ನೀಡಿದ್ದಾರೆ.

ವೈರಲ್ ವಿಡಿಯೋಗಳ ಬಗ್ಗೆ ಅನುಮಾನ

ವೈರಲ್ ಆದ ವಿಡಿಯೋಗಳು ಹಳೆಯದ್ದು ಎಂಬ ಅನುಮಾನವಿದೆ. ಅದು ಸಂಪೂರ್ಣ ಸತ್ಯವಾದುದಲ್ಲ. ಈ ನಿಟ್ಟಿನಲ್ಲಿ ತನೀಖೆ ಮಾಡುತ್ತಿದ್ದೇವೆ ಎಂದು ಎಸ್​ಪಿ ಯಶೋಧಾ ವಂಟಗೋಡಿ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನೀಖೆ ಮಾಡುತ್ತಿದ್ದೇವೆ. ಆ ವಿಡಿಯೋ ಸತ್ಯಾಸತ್ಯತೆ ಪರೀಶಿಲನೆ ಮಾಡುತ್ತಿದ್ದೇವೆ. ಘಟನೆಯ ರಿಯಾಲಿಟಿ ಚೆಕ್ ಮಾಡದೇ ಕ್ರಮ ಕೈಗೊಳ್ಳಲು ಸಾದ್ಯವಿಲ್ಲ ಎಂದರು.

ಸಂಪೂರ್ಣ ಪ್ರಕರಣದ ಬಗ್ಗೆ ನನಗೆ ಗೊತ್ತಿದೆ. 15-20 ವರ್ಷಗಳಿಂದ ಅವರ ಮಧ್ಯೆ ಕೌಟುಂಬಿಕ ಕಲಹವಿದೆ. ಬೇರೆ ಬೇರೆ ಕಾರಣವಿಟ್ಟುಕೊಂಡು ಪ್ರಕರಣವನ್ನ ತಿರುಗಿಸುತ್ತಿದ್ದಾರೆ. ಘಟನೆ ದೃಢಪಡುವವರೆಗೂ ಯಾರನ್ನೂ ಬಂಧಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ