ಯಾದಗಿರಿ ಪಿಎಸ್ಐ ಸಾವು ಪ್ರಕರಣ: ಕಡುಬಡತನದಲ್ಲಿ ಬೆಳೆದು ಒಂದಲ್ಲಾ ಎಂಟು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದ ಪರಶುರಾಮ!

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ನಿವಾಸಿಯಾಗಿದ್ದ ಮೃತ ಪಿಎಸ್ಐ ಪರಶುರಾಮ್, ಒಂದಲ್ಲಾ, ಎರಡರಲ್ಲಾ, ಎಂಟು ಸರ್ಕಾರಿ ನೌಕರಿಗೆ ಆಯ್ಕೆಯಾಗುವ ಮೂಲಕ ಅನೇಕರಿಗೆ ಮಾದರಿಯಾಗಿದ್ದರು. ಆದ್ರೆ, ಪಿಎಸ್ಐ ಆಗಬೇಕು ಎಂದು ಕನಸು ಕಂಡಿದ್ದ ಅವರು, ಕೊನೆಗೂ 2017 ರಲ್ಲಿ ಪಿಎಸ್ಐ ಆಗಿ ಆಯ್ಕೆಯಾಗಿದ್ದರು.

ಯಾದಗಿರಿ ಪಿಎಸ್ಐ ಸಾವು ಪ್ರಕರಣ: ಕಡುಬಡತನದಲ್ಲಿ ಬೆಳೆದು ಒಂದಲ್ಲಾ ಎಂಟು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದ ಪರಶುರಾಮ!
ಮೃತ ಪಿಎಸ್ಐ ಪರಶುರಾಮ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 03, 2024 | 5:54 PM

ಕೊಪ್ಪಳ, ಆ.03: ಮೂಲತ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ನಿವಾಸಿಯಾಗಿದ್ದ ಪಿಎಸ್ಐ ಪರಶುರಾಮ(Parashuram), ಯಾದಗಿರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ, ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಕಡುಬಡತನದಲ್ಲಿ ಹುಟ್ಟಿದ್ದ ಪರಶುರಾಮ ಪಿಎಸ್ಐ ಆಗಿದ್ದೆ ಒಂದು ರೋಚಕ ಕಥೆ. ಬುದ್ದಿವಂತಿಕೆ ಮತ್ತು ಕಠೀಣ ಪರಿಶ್ರಮದಿಂದ ಸರ್ಕಾರಿ ನೌಕರಿ ಪಡೆಯುವುದು ಎಷ್ಟು ಸರಳ ಎನ್ನುವುದನ್ನು ಸಾಧಿಸಿ ತೋರಿಸಿದ್ದ.

ಬೆಂಗಳೂರಿನಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ

ಮೃತ ಪರಶುರಾಮ ಅವರ ಹೆತ್ತವರು ಗ್ರಾಮದಲ್ಲಿ ಕೃಷಿ ಮತ್ತು ಕೂಲಿ ಕೆಲಸ ಮಾಡುತ್ತಿದ್ದರು. ಕಡುಬಡತನದಲ್ಲಿ ಬೆಳದಿದ್ದ ಪರಶುರಾಮ, ಇಷ್ಟವಿಲ್ಲದಿದ್ದರು ಕೂಡ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿರುವ ಪಿಯು ಕಾಲೇಜಿನಲ್ಲಿ ಸೈನ್ಸ್ ಗೆ ಸೇರಿ, ನಾಲ್ಕು ವಿಷಯಗಳಲ್ಲಿ ಪೇಲಾಗಿದ್ದರು. ಪಿಯುಸಿ ಪೇಲಾದ ನಂತರ ಮಾನಸಿಕವಾಗಿ ನೊಂದಿದ್ದ ಅವರು, ಬೆಂಗಳೂರಿಗೆ ಬಂದು ಎರಡು ತಿಂಗಳ ಕಾಲ ಬೆಂಗಳೂರಿನಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿದ್ದರು. ಗಾಲ್ಪ್ ಮೈದಾನದಲ್ಲಿ ನೀರು ಬೀಡೋದು, ಬಾಲ್ ತರುವ ಕೆಲಸದಲ್ಲಿದ್ದರು.

ವಿಜ್ಞಾನ ವಿಭಾಗದಿಂದ ಕಲಾ ವಿಭಾಗಕ್ಕೆ

ಆದ್ರೆ, ತಾನು ಉನ್ನತ ಹುದ್ದೆ ಪಡಿಬೇಕು ಎಂದು ತಿಳಿದು ಮರಳಿ ಗ್ರಾಮಕ್ಕೆ ಬಂದಿದ್ದ ಅವರು, ವಿಜ್ಞಾನ ವಿಭಾಗದಿಂದ ಕಲಾ ವಿಭಾಗಕ್ಕೆ ಸೇರಿದರು. ಕಲಾ‌ ವಿಭಾಗದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದ ಪರಶುರಾಮ, ನಂತರ ಧಾರವಾಡ ಕೆಸಿಡಿ ಕಾಲೇಜಿನಲ್ಲಿ ಡಿಗ್ರಿ ಓದಿದರು. ಪದವಿ ಓದುತ್ತಿದ್ದಾಗಲೇ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದ ಅವರು, ಡಿಗ್ರಿ ಮುಗಿಯುತ್ತಲೇ ಜೈಲ್ ವಾರ್ಡನ್​ ಆಗಿ ಸರ್ಕಾರಿ ನೌಕರಿ ಪಡೆದಿದ್ದರು. ಐದು ವರ್ಷಗಳ ಕಾಲ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡನ್​ ಆಗಿ ಕೆಲಸ ನಿರ್ವಹಿಸಿದ್ದಾರೆ. ನಂತರ ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಒಂದು ವರ್ಷ ಎಫ್​ಡಿಎ ಆಗಿ ಕೆಲಸ ಮಾಡಿದರು.

ಇದನ್ನೂ ಓದಿ:ಯಾದಗಿರಿ ಪಿಎಸ್​ಐ ಅನುಮಾನಾಸ್ಪದ ಸಾವು ಪ್ರಕರಣ; ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಮಾಜಿ ಸಚಿವ ರಾಜುಗೌಡ ಆರೋಪ

ಒಂದಲ್ಲಾ ಎಂಟು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದ ಪರಶುರಾಮ

ಈ ಸಮಯದಲ್ಲಿ ಅವರಿಗೆ ಟ್ರಾಫಿಕ್ ಇನ್ಸ್ಪೆಕ್ಟರ್, ಪಿಡಿಓ ಸೇರಿದಂತೆ ಇನ್ನು ಅನೇಕ ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗಿದ್ದರು. ಆದ್ರೆ, ಪಿಎಸ್ಐ ಆಗಬೇಕು ಎಂದು ಕನಸು ಕಂಡಿದ್ದ ಪರಶುರಾಮ, ಕೆಲಸ ಮಾಡುತ್ತಿದ್ದಾಗಲೇ ಪಿಎಸ್ಐ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದರು. ಇತ್ತ ಮುಂಜಾನೆಯಿಂದ ಸಂಜೆವರೆಗೆ ಕೆಲಸ ನಿರ್ವಹಿಸುತ್ತಿದ್ದ ಪರಶುರಾಮ, ರಾತ್ರಿ ಪಿಎಸ್ಐ ಪರೀಕ್ಷೆಗೆ ಅಧ್ಯಯನ ಮಾಡುತ್ತಿದ್ದರು. ಹಗಲಿರುಳು ಕಠೀಣ ಪರಿಶ್ರಮದಿಂದ ಅಧ್ಯಯನ ಮಾಡಿದ್ದ ಅವರು, 2017 ರಲ್ಲಿ ಪಿಎಸ್ಐ ಆಗಿ ಆಯ್ಕೆಯಾಗಿದ್ದರು.

ಅನೇಕರಿಗೆ ಮಾದರಿಯಾಗಿದ್ದ ಪರಶುರಾಮ

ಒಂದಲ್ಲಾ, ಎರಡರಲ್ಲಾ ಎಂಟು ಸರ್ಕಾರಿ ನೌಕರಿಗೆ ಆಯ್ಕೆಯಾಗಿದ್ದ ಪರಶುರಾಮ, ಅನೇಕರಿಗೆ ಮಾದರಿಯಾಗಿದ್ದರು. ಅನೇಕ ಯುವಕರಿಗೆ ಓದಿನ ಬಗ್ಗೆ ಸದಾ ಪ್ರೇರಣೆಯನ್ನು ನೀಡುತ್ತಿದ್ದರು. ಇನ್ನು ಕೆಲಸ ನಿರ್ವಹಿಸುತ್ತಿದ್ದಾಗಲೇ ಬಾಹ್ಯ ಅಭ್ಯರ್ಥಿಯಾಗಿ ಕರ್ನಾಟಕ ಓಪನ್ ಯುನಿವರ್ಸಿಟಿಯಿಂದ ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಕೂಡ ಪಡೆದಿದ್ದರು. ಶಿಕ್ಷಣ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಗೆ ಬದಲಾಯಿಸುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿದ್ದ ಪರಶುರಾಮ, ಇಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Sat, 3 August 24

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್