AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಡಿ ಸಂಗಣ್ಣ ಮುನಿಸು ಶಮನ; ಕೊಪ್ಪಳ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿಯಲು ಒಪ್ಪಿಗೆ

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸು ಕಾಣುತ್ತಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಇದರಿಂದಾಗಿ ಅಸಮಾಧಾನಗೊಂಡಿರುವ ಸಂಗಣ್ಣ ಅವರು ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿದ್ದರು. ಇವರ ಮುನಿಸು ಶಮನಕ್ಕೆ ರಾಜ್ಯ ನಾಯಕರು ಕಸರತ್ತು ನಡೆಸಿದ್ದರು. ಇಂದು ಯಡಿಯೂರಪ್ಪ ಅವರ ನಿವಾಸಕ್ಕೆ ಕರಡಿ ಸಂಗಣ್ಣ ಭೇಟಿ ನೀಡಿದ ವೇಳೆ ನಡೆದ ಸಂಧಾನ ಮಾತುಕತೆ ಯಶ್ವಿಯಾಗಿದೆ.

ಕರಡಿ ಸಂಗಣ್ಣ ಮುನಿಸು ಶಮನ; ಕೊಪ್ಪಳ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿಯಲು ಒಪ್ಪಿಗೆ
ಯಡಿಯೂರಪ್ಪ, ವಿಜಯೇಂದ್ರ ಸಂಧಾನ ಸಭೆ ಯಶಸ್ವಿ; ಕರಡಿ ಸಂಗಣ್ಣ ಮುನಿಸು ಶಮನ
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on:Mar 30, 2024 | 8:43 PM

Share

ಬೆಂಗಳೂರು, ಮಾ.30: ಕೊಪ್ಪಳ (Koppal) ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಕರಡಿ ಸಂಗಣ್ಣ (Karadi Sanganna) ಅವರ ಕನಸಿಗೆ ಬಿಜೆಪಿ ಹೈಕಮಾಂಡ್ ತನ್ನೀರೆರಚಿತ್ತು. ಇದರಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಅವರನ್ನು ಮನವೊಲಿಸಲು ರಾಜ್ಯ ನಾಯಕರು ತೀವ್ರ ಕಸರತ್ತು ನಡೆಸಿದ್ದರು. ಇಂದು ಬಿಎಸ್ ಯಡಿಯೂರಪ್ಪ (BS Yediyurappa) ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಕರಡಿ ಸಂಗಣ್ಣ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ಇಂದು ಕರಡಿ ಸಂಗಣ್ಣ ಮತ್ತು ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟೂರ್ ಅವರನ್ನು ಯಡಿಯೂರಪ್ಪ ನಿವಾಸಕ್ಕೆ ಕರೆದೊಯ್ದಿದ್ದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾತುಕತೆ ನಡೆಸಿ ಕರಡಿ ಸಂಗಣ್ಣ ಅವರನ್ನು ಸಮಾಧಾನಗೊಳಿಸುವಲ್ಲಿ ಯಶಸ್ವಿಯಾದರು.

ಸಂಧಾನ ಮಾತುಕತೆ ವೇಳೆ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಮತ್ತು ಮಾಜಿ ಶಾಸಕ ಬಸವರಾಜ ದಡೇಸೂಗೂರು ಕೂಡಾ ಉಪಸ್ಥಿತರಿದ್ದರು. ಮಾತುಕತೆ ವೇಳೆ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟೂರ್ ಪರ ಪ್ರಚಾರ ನಡೆಸುವಂತೆ ಮನವಿ ಮಾಡಲಾಯಿತು. ಅದರಂತೆ, ಸೋಮವಾರ ಕುಷ್ಠಗಿಯಲ್ಲಿ ನಡೆಯುವ ಪಕ್ಷದ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸಂಗಣ್ಣ ಕರಡಿ ಅವರು ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ರೇಣುಕಾಚಾರ್ಯ ಮತ್ತು ಇತರ ಅತೃಪ್ತರೊಂದಿಗೆ ಯಡಿಯೂರಪ್ಪ ಚರ್ಚೆ, ಅಸಮಾಧಾನ ಶಮನಕ್ಕೆ ಕಸರತ್ತು!

ಟಿಕೆಟ್ ಕೈತಪ್ಪಿದ ಕೋಪಕ್ಕೆ ಬಿಜೆಪಿ ಹೈಕಮಾಂಡ್​ಗೆ ಸೆಡ್ಡು ಹೊಡೆದಿದ್ದ ಕರಡಿ ಸಂಗಣ್ಣ ಅವರು ಕೊಪ್ಪಳದಲ್ಲಿ ಸ್ವಾಭಿಮಾನದ ಹೆಸರಲ್ಲಿ ಬೆಂಬಲಿಗರ ಸಮಾವೇಶ ಆಯೋಜಿಸಿದ್ದರು. ಇದನ್ನು ವಿಫಲಗೊಳಿಸಲು ಬಿಜೆಪಿ ನಾಯಕರು ತಂತ್ರಗಾರಿ ಮಾಡಿದ್ದರು. ಸಭೆಗೆ ಹೋಗದಂತೆ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳಿಗೆ ಮೌಖಿಕ ಸಂದೇಶ ನೀಡಿದ್ದರು.

ಅಲ್ಲದೆ, ಕರಡಿ ಸಂಗಣ್ಣ ಅವರನ್ನು ಮನವೊಲಿಸಲು ಬಿಜೆಪಿ ನಾಯಕರು ಕಸರತ್ತು ನಡೆಸಿದ್ದರು. ವಿಧಾನಸಭೆಯಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿರುವ ಜಿಲ್ಲೆಯ ಶಾಸಕ ದೊಡ್ಡನಗೌಡ ಪಾಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀಳ್ ಗುಳಗಣ್ಣವರ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಕರಡಿ ಸಂಗಣ್ಣ ಮನೆಗೆ ಭೇಟಿ ನೀಡಿ, ಸಂಗಣ್ಣ ಜೊತೆ ಮಾತುಕತೆ ನಡೆಸಿದ್ದರು. ಯಾವುದೇ ಕಾರಣಕ್ಕೂ ಕೂಡ ಪಕ್ಷ ಬಿಡುವ ನಿರ್ಧಾರ ಮಾಡಬೇಡಿ, ಸುದ್ದಿಗೋಷ್ಟಿ ಮಾಡಬೇಡಿ, ಪಕ್ಷದಲ್ಲಿಯೇ ಇರಿ, ಪಕ್ಷ ನಿಮ್ಮ ಸೇವೆಯನ್ನು ಗುರುತಿಸುತ್ತದೆ ಎಂದು ಹೇಳಿ ಮನವೊಲಿಸುವ ಯತ್ನ ನಡೆಸಿದ್ದರು.

ಜೊತೆಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಕೂಡ ಮಾತನಾಡಿದ್ದರು. ಸದ್ಯ, ಸಂಸದ ಕರಡಿ ಸಂಗಣ್ಣ ಅವರನ್ನು ಮನವೊಲಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಬಂಡಾಯದ ಭೀತಿ ಎದುರಿಸುತ್ತಿದ್ದ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟೂರ್ ಅವರು ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 pm, Sat, 30 March 24

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್