ಕೊಪ್ಪಳ ಗವಿಮಠದಿಂದ ಸಮಾಜಮುಖಿ ಕಾರ್ಯ; 200 ಬೆಡ್​ಗಳ ಕೊವಿಡ್ ಕೇರ್ ಸೆಂಟರ್ ಆರಂಭ

ಕೊಪ್ಪಳ ಗವಿಮಠದಿಂದ ಮತ್ತೊಂದು ಸಮಾಜಮುಖಿ ಕಾರ್ಯ ಮಾಡಲಾಗಿದ್ದು, ಜನರಿಂದ ಪ್ರಶಂಸೆ ವ್ಯಕ್ತವಾಗಿದೆ. ಪೂಜೆ ನೆರವರಿಸುವ ಮೂಲಕ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗಿದೆ.

ಕೊಪ್ಪಳ ಗವಿಮಠದಿಂದ ಸಮಾಜಮುಖಿ ಕಾರ್ಯ; 200 ಬೆಡ್​ಗಳ ಕೊವಿಡ್ ಕೇರ್ ಸೆಂಟರ್ ಆರಂಭ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 21, 2021 | 10:14 AM

ಕೊಪ್ಪಳ: ಇಲ್ಲಿನ ಗವಿಮಠದಲ್ಲಿ ಮತ್ತೊಂದು ಕೊವಿಡ್​ ಕೇರ್ ಸೆಂಟರ್ ಆರಂಭಿಸಲಾಗಿದೆ. ಗವಿಮಠದ ಲೇಡಿಸ್ ಹಾಸ್ಟೆಲ್​ನಲ್ಲಿ 200 ಹಾಸಿಗೆಯ ಕೊವಿಡ್ ಸೆಂಟರ್ ಆರಂಭಿಸಲಾಗಿದೆ. ಈಗಾಗಲೇ ಮಠದ ವೃದ್ಧಾಶ್ರಮದಲ್ಲಿ ಕೊವಿಡ್​ ಸೆಂಟರ್ ಪ್ರಾರಂಭಿಸಲಾಗಿತ್ತು. 100 ಬೆಡ್​ಗಳ ಕೊವಿಡ್ ಕೇರ್ ಸೆಂಟರ್ ಆರಂಭವಾಗಿತ್ತು. ಇದೀಗ 200 ಬೆಡ್​​ಗಳ ಕೊವಿಡ್ ಕೇರ್ ಸೆಂಟರ್ ಶುರು ಮಾಡಲಾಗಿದೆ.

ಕೊಪ್ಪಳ ಗವಿಮಠದಿಂದ ಮತ್ತೊಂದು ಸಮಾಜಮುಖಿ ಕಾರ್ಯ ಮಾಡಲಾಗಿದ್ದು, ಜನರಿಂದ ಪ್ರಶಂಸೆ ವ್ಯಕ್ತವಾಗಿದೆ. ಪೂಜೆ ನೆರವರಿಸುವ ಮೂಲಕ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗಿದೆ. ಹೋಂ ಐಸೋಲೇಶನ್​ನಲ್ಲಿ ಇರುವವರು ಕೊವಿಡ್ ಆರೈಕೆ ಕೇಂದ್ರದಲ್ಲಿ ದಾಖಲಾಗಲು ಅವಕಾಶ ನೀಡಲಾಗಿದೆ. 5 ದಿನಗಳ ಕಾಲ ಕೊವಿಡ್ ಆರೈಕೆ ಕೇಂದ್ರದಲ್ಲಿರಲು ಅವಕಾಶ ನೀಡಲಾಗಿದೆ. ಕೊವಿಡ್ ಕೇರ್ ಸೆಂಟರ್ ಉದ್ಘಾಟನೆಯಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಹಾಲಪ್ಪ ಆಚಾರ್ ಭಾಗಿಯಾಗಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ವಿವರ ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ. ರಾಜ್ಯದಲ್ಲಿ ಇಂದು 30,309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ 8,676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖ ಹೊಂದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಇಂದು ಕೊವಿಡ್​ನಿಂದ ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಯನ್ನು ಮೀರಿಸಿದಂತಾಗಿದೆ.

ರಾಜ್ಯದಲ್ಲಿಂದು ಒಂದೇ ದಿನ ಕೊರೊನಾಗೆ 525 ಜನರ ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ 298 ಜನರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊವಿಡ್ ಸೋಂಕಿನ ಸಂಖ್ಯೆ ಇಳಿಮುಖವಾಗುತ್ತಿದೆ. ಕರ್ನಾಟಕದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಣೆಯಾದ ನಂತರ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ಇತರ ಜಿಲ್ಲೆಗಳ ಜನರು ತಮ್ಮ ಸ್ವಂತ ಊರಿಗೆ ತೆರಳಿದ ಕಾರಣ ಬೆಂಗಳೂರಿನಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಿಂಗಾಪುರದಲ್ಲಿ ಪತ್ತೆಯಾದ ಕೊರೊನಾ ವೈರಾಣು ಭಾರತದಲ್ಲಿ ಮೂರನೇ ಅಲೆಗೆ ಕಾರಣವಾಗಬಹುದು: ಅರವಿಂದ್ ಕೇಜ್ರಿವಾಲ್

1 ತಿಂಗಳು ಲಾಕ್​ಡೌನ್ ವಿಸ್ತರಿಸಿ, ಇಲ್ಲದಿದ್ದರೆ ದೊಡ್ಡ ಅನಾಹುತವೇ ಆಗಲಿದೆ; ಎಚ್ ಡಿ ಕುಮಾರಸ್ವಾಮಿ

Published On - 8:50 pm, Tue, 18 May 21