Koppal: ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ; ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಶಾಲೆಯ 24 ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಖರ್ಚಿನಲ್ಲಿ ವಿಮಾನ ಪ್ರವಾಸ ಆಯೋಜಿಸಿದ್ದಾರೆ. 4ರಿಂದ 8ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗಿದ್ದು, ಎರಡು ದಿನಗಳ ಈ ಶೈಕ್ಷಣಿಕ ಪ್ರವಾಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ, ಡಿಸೆಂಬರ್ 27: ಬಹದ್ದೂರಬಂಡಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ಜಿಂದಾಲ್ ಏರ್ಪೋರ್ಟ್ನಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಬಿಸಿಯೂಟ ಅಡುಗೆ ತಯಾರಕರು ಸೇರಿ ಒಟ್ಟು 40 ಜನರು ವಿಮಾನ ಪ್ರಯಾಣ ಮಾಡಿದ್ದಾರೆ. ವಿಶೇಷ ವಿಮಾನಕ್ಕೆ 3.50 ಲಕ್ಷ ರೂಪಾಯಿ ವೆಚ್ಚವನ್ನು ಬೀರಪ್ಪ ಭರಿಸಿದ್ದಾರೆ. ಊಟ ವಸತಿ ಸೇರಿ ಎರಡು ದಿನಗಳ ಪ್ರವಾಸದ ವೆಚ್ಚ ಸುಮಾರು 5 ಲಕ್ಷ ರೂ. ಆಗಲಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 26, 2025 04:20 PM
