AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET UG 2026: ಕುರಿ ಕಾಯುತ್ತಲೇ ನೀಟ್‌ನಲ್ಲಿ ಅಪ್ರತಿಮ ಸಾಧನೆ; ದೇಶಕ್ಕೇ 694ನೇ ರ‍್ಯಾಂಕ್ ಪಡೆದ ಕೊಪ್ಪಳದ ಹಳ್ಳಿ ಹೈದ!

ಬಡತನ ಮತ್ತು ಸೌಲಭ್ಯಗಳ ಕೊರತೆಯ ನಡುವೆಯೂ ಕೊಪ್ಪಳ ಜಿಲ್ಲೆಯ ಯುವಕನೊಬ್ಬ ನೀಟ್ (NEET) ಪರೀಕ್ಷೆಯಲ್ಲಿ ದೇಶಕ್ಕೇ ಎಸ್ ಟಿ ಕೆಟಗೇರಿಯಲ್ಲಿ 694ನೇ ರ್ಯಾಂಕ್ ಪಡೆದಿದ್ದಾನೆ. ಗಂಗಾವತಿಯ ವಿದ್ಯಾನಿಕೇತನ ಕಾಲೇಜಿನಲ್ಲಿ ಪಿಯುಸಿ ಮುಗಿಸಿ, ರಜೆಯ ದಿನಗಳಲ್ಲಿ ಹಗಲಲ್ಲಿ ಕುರಿ ಕಾಯುತ್ತಾ, ಸಗಣಿ ಬಳಿಯುತ್ತಾ ಕಡು ಬಡತನದಲ್ಲೇ ಓದಿದ ಈ ಹಳ್ಳಿ ಹೈದ ಪುಟ್ಟರಾಜು ಇಡೀ ಜಿಲ್ಲೆ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾನೆ. ಈತನ ಕಠಿಣ ಪರಿಶ್ರಮ, ಛಲ ಮತ್ತು ಯಶಸ್ಸು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ.

NEET UG 2026: ಕುರಿ ಕಾಯುತ್ತಲೇ ನೀಟ್‌ನಲ್ಲಿ ಅಪ್ರತಿಮ ಸಾಧನೆ; ದೇಶಕ್ಕೇ 694ನೇ ರ‍್ಯಾಂಕ್ ಪಡೆದ ಕೊಪ್ಪಳದ ಹಳ್ಳಿ ಹೈದ!
ಪುಟ್ಟರಾಜ್ ಭೀಮನೂರ
ಶಿವಕುಮಾರ್ ಪತ್ತಾರ್
| Edited By: |

Updated on:Jul 18, 2026 | 1:43 PM

Share

ಕೊಪ್ಪಳ: ಕಠಿಣ ಪರಿಶ್ರಮ ಮತ್ತು ಛಲವೊಂದಿದ್ದರೆ ಎಂತಹ ಬಡತನವೂ ಸಾಧನೆಗೆ ಅಡ್ಡಿಯಾಗಲ್ಲ ಎಂಬುದನ್ನು ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಭಾನ್ವಿತ ಯುವಕನೊಬ್ಬ ಸಾಬೀತುಪಡಿಸಿದ್ದಾನೆ. ಹಗಲಲ್ಲಿ ಕುರಿ ಕಾಯುತ್ತಾ, ಸಗಣಿ ಬಳಿಯುತ್ತಾ ಕಡು ಬಡತನದಲ್ಲೇ ಓದಿದ ಈ ಹಳ್ಳಿ ಹೈದ ಪುಟ್ಟರಾಜ್ ಭೀಮನೂರ ನೀಟ್ (NEET) ಪರೀಕ್ಷೆಯಲ್ಲಿ ದೇಶಕ್ಕೇ ಅದ್ಭುತ ರ್ಯಾಂಕ್ ಪಡೆಯುವ ಮೂಲಕ ಇಡೀ ಜಿಲ್ಲೆ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾನೆ.

ಕೊಪ್ಪಳ ತಾಲೂಕಿನ ನಿವಾಸಿಯಾದ ಪುಟ್ಟರಾಜ್ ಭೀಮನೂರ ಅತ್ಯಂತ ಬಡ ಕುಟುಂಬದಲ್ಲಿ ಜನಿಸಿದವನು. ಇವರ ತಂದೆ ತಾಯಿ ಇಂದಿಗೂ ದಿನಗೂಲಿಗಾಗಿ ಕೃಷಿ ಕೆಲಸವನ್ನೇ ನೆಚ್ಚಿಕೊಂಡಿದ್ದಾರೆ. ಸ್ವಂತ ಸೂರಿಲ್ಲದೆ ಊರು ಬಿಟ್ಟು ತೋಟದ ಮನೆಯೊಂದರಲ್ಲಿ ವಾಸಿಸುತ್ತಿದ್ದಾರೆ. ಬಡತನದ ಬೇಗೆಯ ನಡುವೆಯೂ ಮಗನ ಓದಿಗೆ ಪೋಷಕರು ಶಕ್ತಿ ಮೀರಿ ಪ್ರೋತ್ಸಾಹ ನೀಡಿದ್ದು, ಇದೀಗಾ ಮಗನ ಸಾಧನೆಯಿಂದ ಈ ಪುಟ್ಟ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ

ರಜೆಯಲ್ಲಿ ಕುರಿ ಕಾಯುತ್ತಲೇ ಸಾಗುತ್ತಿತ್ತು ಅಧ್ಯಯನ:

ಗಂಗಾವತಿಯ ವಿದ್ಯಾನಿಕೇತನ ಪಿಯು ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಮುಗಿಸಿದ್ದ ಪುಟ್ಟರಾಜುಗೆ ವೈದ್ಯೆಯಾಗಬೇಕೆಂಬ ಬಲವಾದ ಕನಸಿತ್ತು. ಕಾಲೇಜಿಗೆ ರಜೆ ಸಿಕ್ಕಾಗಲೆಲ್ಲಾ ಮನೆಗೆ ಬಂದು ಸುಮ್ಮನೆ ಕುಳಿತುಕೊಳ್ಳದೆ, ಪೋಷಕರಿಗೆ ಆಸರೆಯಾಗಲು ಕುರಿ ಕಾಯುವ ಮತ್ತು ಸಗಣಿ ಬಳಿಯುವ ಕೆಲಸ ಮಾಡುತ್ತಿದ್ದನು. ಕುರಿ ಮೇಯಿಸಲು ಹೋದಾಗಲೂ ಕೈಯಲ್ಲಿ ಪುಸ್ತಕ ಹಿಡಿದು ಓದುತ್ತಿದ್ದ ಈತನ ದೃಢ ಸಂಕಲ್ಪವೇ ಇಂದು ಈತನನ್ನು ಯಶಸ್ಸಿನ ಶಿಖರಕ್ಕೇರಿಸಿದೆ.

ಒಂದು ವರ್ಷದ ತಪಸ್ಸಿಗೆ ಸಿಕ್ಕಿತು ಪ್ರತಿಫಲ:

ಪಿಯುಸಿ ಮುಗಿದ ಬಳಿಕ ಡಾಕ್ಟರ್ ಆಗುವ ಹಂಬಲದಿಂದ ಪುಟ್ಟರಾಜ್ ಒಂದು ವರ್ಷ ಕಾಲ ‘ಲಾಂಗ್ ಟರ್ಮ್’ (Long Term Coaching) ಕೋಚಿಂಗ್ ಪಡೆದು ಕಠಿಣ ಅಭ್ಯಾಸ ನಡೆಸಿದ್ದನು. ದಿನದ ಬಹುಪಾಲು ಸಮಯವನ್ನು ಓದಿಗಾಗಿಯೇ ಮೀಸಲಿಟ್ಟ ಈತನ ಶ್ರಮ ವ್ಯರ್ಥವಾಗಲಿಲ್ಲ. ಇದೀಗ ಪ್ರಕಟಗೊಂಡಿರುವ ನೀಟ್ ಫಲಿತಾಂಶದಲ್ಲಿ ಪುಟ್ಟರಾಜ್ ಎಸ್‌ಟಿ (ST) ಕೆಟಗೇರಿಯಲ್ಲಿ ದೇಶಕ್ಕೇ 694ನೇ ರ್ಯಾಂಕ್ ಪಡೆಯುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾನೆ.

ಕುರಿ ಕಾಯುವ ಹುಡುಗ ಈಗ ದೇಶ ಮೆಚ್ಚುವ ರ್ಯಾಂಕ್ ಗಳಿಸಿ, ಡಾಕ್ಟರ್ ಆಗ ಹೊರಟಿರುವುದು ಇಡೀ ಕೊಪ್ಪಳ ಜಿಲ್ಲೆಗೆ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ದೊಡ್ಡ ಪ್ರೇರಣೆಯಾಗಿದೆ. ಸೌಲಭ್ಯಗಳ ಕೊರತೆಯ ನಡುವೆಯೂ ಕೇವಲ ಸ್ವಪ್ರಯತ್ನ ಮತ್ತು ನಿರಂತರ ಅಭ್ಯಾಸದಿಂದ ಪುಟ್ಟರಾಜ್ ಈ ಮೈಲಿಗಲ್ಲು ತಲುಪಿದ್ದಾನೆ. ವೈದ್ಯನಾಗಿ ಸಮಾಜದ ಸೇವೆ ಮಾಡಬೇಕೆಂಬ ಈ ಹಳ್ಳಿ ಹೈದನ ಕನಸು ನನಸಾಗುತ್ತಿರುವುದು ನಿಜಕ್ಕೂ ಶ್ಲಾಘನೀಯ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Sat, 18 July 26

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್