ಸ್ಥಳೀಯ ಸಂಸ್ಥೆಗಳ ಸದಸ್ಯರನ್ನು ಕೊವಿಡ್ ವಾರಿಯರ್ಗಳೆಂದು ಪರಿಗಣಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ
ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್ ಸದಸ್ಯರುಗಳನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಬೇಕು. ಮತ್ತು ಕೊವಿಡ್ ಮೊದಲ ಡೋಸ್ ಲಸಿಕೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಬೆಂಗಳೂರು: ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್ ಸದಸ್ಯರುಗಳನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಬೇಕು. ಮತ್ತು ಕೊವಿಡ್ ಮೊದಲ ಡೋಸ್ ಲಸಿಕೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಕೆಲ ದಿನಗಳ ಮುನ್ನ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೊವಿಡ್ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. 5 ವರ್ಷ ಜೈಲು, 1 ಲಕ್ಷ ರೂಪಾಯಿ ದಂಡ ವಿಧಿಸುತ್ತೇವೆ. ಯಾರೂ ಸಹ ವಾರಿಯರ್ಸ್ ಮೇಲೆ ಹಲ್ಲೆ ಮಾಡಬಾರದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮೇ 24 ರಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದರು.
ಕೆಲ ತಜ್ಞ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಇನ್ಮುಂದೆ ವೈದ್ಯರ ಕೆಲಸದ ಪಾಳಿಯನ್ನು ನಮಗೆ ಕಳುಹಿಸಿಕೊಡಬೇಕು. ನಾನು ಭೇಟಿ ನೀಡಿದ್ದ 12 ಜಿಲ್ಲೆಗಳಲ್ಲಿ ಚಿಕಿತ್ಸೆಗೆ ವೈದ್ಯರು ಹಿಂದೇಟು ಹಾಕಿರುವ ಕುರಿತು ದೂರುಗಳು ಕೇಳಿಬಂದಿದೆ. ಕಿರಿಯ ವೈದ್ಯರಿಂದ ಕೆಲಸ ಮಾಡಿಸಿ ಹಿರಿಯ ವೈದ್ಯರು ಗೈರು ಹಾಜರಾಗುತ್ತಿದ್ದಾರೆ ಎಂದು ಡಾ.ಕೆ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದರು.
ಇದನ್ನೂ ಓದಿ: ಕಾಂಗ್ರೆಸ್ನ ಕೆಲ ಬುದ್ಧಿಜೀವಿಗಳು ಬೆಡ್ ಬ್ಲಾಕಿಂಗ್ ಹಗರಣದ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ: ಸಂಸದ ತೇಜಸ್ವಿ ಸೂರ್ಯ