ಭೋವಿ ನಿಗಮದ ಅವ್ಯವಹಾರದಲ್ಲಿ ಹೆಸರು ಪ್ರಸ್ತಾಪ: ಆರೋಪ ಹಿಂಪಡೆಯುವಂತೆ ಸಿಎಂಗೆ ಕೋಟ ಶ್ರೀನಿವಾಸ ಪತ್ರ
ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಕೋಟ ಶ್ರೀನಿವಾಸ ಪೂಜಾರಿ ಮಂತ್ರಿಯಾಗಿದ್ದಾಗ ಭೋವಿ ನಿಗಮದಲ್ಲಿ 87 ಕೋಟಿ ರೂ. ಹಗರಣ ನಡೆದಿತ್ತು ಎಂದು ನಿನ್ನೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಹೀಗಾಗಿ ಈ ಬಗ್ಗೆ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಶ್ರೀನಿವಾಸ ಪೂಜಾರಿ, ಆರೋಪವನ್ನು ಹಿಂಪಡೆಯಬೇಕು ಎಂದಿದ್ದಾರೆ.
ಬೆಂಗಳೂರು, ಜುಲೈ 20: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸಿಎಂ (Siddaramaiah) ಉತ್ತರದ ವೇಳೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಹೆಸರು ಉಲ್ಲೇಖಿಸಿದ್ದರು. ಹೀಗಾಗಿ ಸದನದಲ್ಲಿ ನಿನ್ನೆ ಮಾಡಿದ ಆರೋಪವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಬೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರನ್ನು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಅವರು, ಅವ್ಯವಹಾರ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು.
ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿನ 21 ಹಗರಣ ಪಟ್ಟಿ ಬಿಚ್ಚಿಟ್ಟ ಸಿದ್ದರಾಮಯ್ಯ: ಯಾವುವು? ಇಲ್ಲಿದೆ ನೋಡಿ
ಒಂದು ವೇಳೆ ಸಿಬಿಐ ತನಿಖೆಗೆ ಒಪ್ಪಿಸಲು ವಿಳಂಬ ಮಾಡಿದರೆ ವಿಧಾನಸೌಧದಲ್ಲಿ ಗಾಂಧಿ ಪ್ರತಿಮೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಕೋಟ ಸಚಿವರಾಗಿದ್ದ ಅವಧಿಯಲ್ಲಿ ಹಗರಣ ಎಂದು ನಿನ್ನೆ ಸದನದಲ್ಲಿ ಅವರ ವಿರುದ್ಧ ಆರೋಪಿಸಿದ್ದರು.
ಬಿಜೆಪಿ ಕಾಲದಲ್ಲಿ 21 ಹಗರಣ ಆಗಿದೆ: ಸಿದ್ದರಾಮಯ್ಯ
ನಿನ್ನೆ ಸದನದಲ್ಲಿ ವಿಪಕ್ಷಗಳ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಹಗರಣಗಳ ಪಟ್ಟಿ ಬಿಚ್ಚಿಟ್ಟಿದ್ದರು. ಬಿಜೆಪಿ ಅವಧಿಯಲ್ಲಿ 21 ಹಗರಣ ನಡೆದಿದೆ ಎಂದು ಹೇಳಿದ್ದರು. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 42.16 ಕೋಟಿ ರೂ. ಎಪಿಎಂಸಿ ಹಗರಣವಾಗಿದೆ. ಈ ವೇಳೆ ಬಸವರಾಜ ಬೊಮ್ಮಾಯಿ ಮಂತ್ರಿಯಾಗಿದ್ದರು. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಕೋಟ ಶ್ರೀನಿವಾಸ ಪೂಜಾರಿ ಮಂತ್ರಿಯಾಗಿದ್ದಾಗ ಭೋವಿ ನಿಗಮದಲ್ಲಿ 87 ಕೋಟಿ ರೂ. ಹಗರಣ ನಡೆದಿತ್ತು ಎಂದು ಹೇಳಿದ್ದರು.
ಇದನ್ನೂ ಓದಿ: ಕರಾವಳಿಯಲ್ಲಿ ಮುಂದುವರೆದ ಮಳೆ: ನಾಳೆ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಇದಕ್ಕೆ ಕೌಂಟರ್ ಕೊಟ್ಟಿರುವ ವಿಪಕ್ಷ ನಾಯಕ ಆರ್.ಅಶೋಕ್, ನಾವು ನಿಮ್ಮ 70 ಹಗರಣ ದಾಖಲೆ ಸಮೇತ ಪ್ರಿಂಟ್ ಮಾಡಿದ್ದೇವೆ ಅಂದಿದ್ದಾರೆ. ನಾನು ಹಗರಣದಲ್ಲಿ ಭಾಗಿಯಾಗಿಲ್ಲ, ಅಧಿಕಾರಿಗಳು ಭಾಗಿ ಅಂತಾ ಸಿಎಂ ಹೇಳಿದ್ದಾರೆ. ಹಾಗಾದ್ರೆ ಅಧಿಕಾರಿಗಳೇ ಆಡಳಿತ ನಡೆಸ್ತಿದ್ಧಾರೆ ಅಂತಾ ಸಿಎಂ ಒಪ್ಪಿಕೊಂಡಂತೆ ಆಯ್ತು ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.