ಅಸ್ಪೃಶ್ಯತೆಗೆ ಕಡಿವಾಣ ಹಾಕುವುದು ನಮ್ಮ ಗುರಿ: ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ
Kota Srinivas Poojary: ಆರ್ಥಿಕ ಕಾರಣದಿಂದ ಹಣ ಬಿಡುಗಡೆಗೆ ಸಮಸ್ಯೆ ಆಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜನಗಣತಿ ಮಾಡಿಸಿದ್ರು. ಹಿಂದುಳಿದವರ ಪರ ಸಿದ್ದರಾಮಯ್ಯರವರು ಧ್ವನಿ ಎತ್ತಿದ್ರು. ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬೆಂಗಳೂರು: ಸಮಾಜಕಲ್ಯಾಣ ಇಲಾಖೆಯಲ್ಲಿ 1.20 ಕೋಟಿ ಕುಟುಂಬ ಇದೆ. ಇವರಿಗೆ ಶೌಚಾಲಯ, ಹಕ್ಕು ಪತ್ರ, ಶಿಕ್ಷಣ ಸೇರಿದಂತೆ, ಮೂಲ ಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ನಮ್ಮ ಗುರಿ. ಅಸ್ಪೃಶ್ಯತೆಗೆ ಕಡಿವಾಣ ಹಾಕುವುದು ಕೂಡ ನನ್ನ ಗುರಿ ಎಂದು ಸಮಾಜ ಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಕಚೇರಿಗೆ ಶ್ರೀನಿವಾಸ ಪೂಜಾರಿ ಭೇಟಿ ನೀಡಿದ್ದಾರೆ.
ಆರ್ಥಿಕ ಕಾರಣದಿಂದ ಹಣ ಬಿಡುಗಡೆಗೆ ಸಮಸ್ಯೆ ಆಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜನಗಣತಿ ಮಾಡಿಸಿದ್ರು. ಹಿಂದುಳಿದವರ ಪರ ಸಿದ್ದರಾಮಯ್ಯರವರು ಧ್ವನಿ ಎತ್ತಿದ್ರು. ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ಅವರ ಅವಧಿಯಲ್ಲಿ ಅದನ್ನು ಏಕೆ ರಿಲೀಸ್ ಮಾಡಿಲ್ಲವೆಂದು ಗೊತ್ತಿಲ್ಲ. ಆಯೋಗದ ಅಧ್ಯಕ್ಷ ಹೆಚ್ಚಿನ ಸಮಯ ಬೇಕೆಂದು ಕೇಳಿದ್ದಾರೆ. ವರದಿ ಕೊಟ್ಟ ಬಳಿಕ ಸಂಪುಟ ಸಭೆಯಲ್ಲಿ ಚರ್ಚೆ ಮಾಡ್ತೇವೆ ಎಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಹತ್ತು ವರ್ಷಗಳಿಗೆ ಒಮ್ಮೆ ಜಾತಿವಾರು ಜನಗಣತಿ ನಡೆಸಬೇಕು ಪ್ರತಿ ಹತ್ತು ವರ್ಷಗಳಿಗೆ ಒಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಹತ್ತು ದಿನಗಳ ಚಿಕಿತ್ಸೆ ಪಡೆದು ಮರಳಿದ ಅವರು, ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, 90 ವರ್ಷಗಳ ಹಿಂದಿನ ಜಾತಿ ಜನಗಣತಿ ವರದಿ ಇಟ್ಟುಕೊಂಡು ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದರು.
ಸ್ವಾತಂತ್ರ್ಯ ನಂತರ ಎಲ್ಲಾ ಜಾತಿ, ವರ್ಗಗಳಿಗೂ ಸೂಕ್ತ ಅವಕಾಶಗಳು ಸಿಗುತ್ತಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿಸಿ ಜಾತಿ ಜನಗಣತಿ ಮಾಡಿಸಲಾಗಿತ್ತು. ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರೂ ಪ್ರಧಾನಿ ಮೋದಿ ಅವರ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿದ್ದಾರೆ. ಹೀಗಾಗಿ ಪ್ರತಿ ಹತ್ತು ವರ್ಷಕ್ಕೊಮ್ಮೆ ಸೆನ್ಸನ್ ನಡೆಯುವ ರೀತಿಯಲ್ಲೇ ಜಾತಿಗಣತಿ ನಡೆದರೆ ಒಳ್ಳೆಯದು. ಜಾತಿ ಜನಗಣತಿ ಅನುಷ್ಠಾನದ ಬಗ್ಗೆ ವಿಧಾನಸಭೆ ಅಧಿವೇಶನದಲ್ಲೂ ಹೋರಾಟ ಮಾಡುತ್ತೇವೆ. ಧ್ವನಿ ಎತ್ತುತ್ತೇವೆ ಎಂದು ಅವರು ತಿಳಿಸಿದ್ದರು.
ಇದನ್ನೂ ಓದಿ: ಜಾತಿ ಗಣತಿ ವರದಿ ಬಿಡುಗಡೆಗೆ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ
ಇದನ್ನೂ ಓದಿ: 10 ವರ್ಷಗಳಿಗೊಮ್ಮೆ ಜಾತಿ ಗಣತಿ ನಡೆಸಿ: ಪ್ರಕೃತಿ ಚಿಕಿತ್ಸೆ ಪಡೆದು ಮರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ
Published On - 6:55 pm, Tue, 7 September 21