ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಚಂಬಲ್ ಕಣಿವೆಯ ಡಕಾಯಿತರಿಗೆ ಹೋಲಿಸಿದ ಕಾಂಗ್ರೆಸ್
ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ ದಿನೇ ಸ್ಪಷ್ಟವಾಗುತ್ತಿದೆ. ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೆ ಬೆಂಬಲಿಗರು ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ಬೆಂಗಳೂರು: ರಾಜ್ಯ ರಾಜಕೀಯವನ್ನು ಕಳೆದ ಕೆಲ ದಿನಗಳಿಂದ ಆವರಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಕಾಂಗ್ರೆಸ್ ಸರಣಿ ಟ್ವೀಟ್ ಮಾಡುವ ಮೂಲಕ ಚಾಟಿ ಬೀಸಿದೆ. ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ ದಿನೇ ಸ್ಪಷ್ಟವಾಗುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದ್ದು, ಶಾಸಕ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರನ್ನು ಚಂಬಲ್ ಡಕಾಯಿತರಿಗೆ ಹೋಲಿಸಿದೆ. ರಮೇಶ್ ಜಾರಕಿಹೊಳಿ ಅವರನ್ನು ತಕ್ಷಣವೇ ಬಂಧಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.
ರಾಜ್ಯದ ಕಾನೂನು ಸುವ್ಯವಸ್ಥೆಯ ವೈಫಲ್ಯ, ಪೊಲೀಸರ ಕಳಪೆ ಕಾರ್ಯಕ್ಷಮತೆ ಈ ಸಿಡಿ ಪ್ರಕರಣದಲ್ಲಿ ಬಯಲಾಗಿದೆ. ದೂರು ದಾಖಲಾಗಿದ್ದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದೆ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಶೋಷಣೆಗೆ ಒಳಪಟ್ಟ ಸಾಮಾನ್ಯ ಹೆಣ್ಣು ಮಗಳನ್ನು ಪತ್ತೆಹಚ್ಚಿ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಸರ್ಕಾರದ ಮೇಲೆ ಹರಿಹಾಯ್ದಿದೆ.
ಹಿಂದೆಲ್ಲ ಆರೋಪಿಗಳನ್ನ ಹಿಡಿಯಲು ಪೊಲೀಸರ ತಂಡ ರಚನೆಯಾಗುತ್ತಿತ್ತು ಆದರೆ ಅತ್ಯಾಚಾರ ಆರೋಪಿಯ ರಕ್ಷಣೆಗಾಗಿಯೇ SIT ಎನ್ನುವ ಪೊಲೀಸರ ತಂಡ ಸೃಷ್ಟಿಯಾಗಿದ್ದು ಈ ದೇಶದ ಇತಿಹಾಸದಲ್ಲಿ ಇದೇ ಮೊದಲೇನೋ!@BJP4Karnataka ಆಡಳಿತದಲ್ಲಿ ಅತ್ಯಾಚಾರಿಯೊಬ್ಬನನ್ನು ರಕ್ಷಣೆ ಮಾಡುವ ಕಳಂಕ ಕರ್ನಾಟಕಕ್ಕೆ ಅಂಟಿಕೊಂಡಿದೆ.#ArrestRapistRamesh
— Karnataka Congress (@INCKarnataka) March 28, 2021
ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ ದಿನೇ ಸ್ಪಷ್ಟವಾಗುತ್ತಿದೆ. ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ರಮೇಶ್ ಜಾರಕಿಹೊಳೆ ಬೆಂಬಲಿಗರು ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ ದಿನೇ ಸ್ಪಷ್ಟವಾಗುತ್ತಿದೆ
ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ವರ್ತಿಸುತ್ತಿದೆ ರಮೇಶ್ ಜಾರಕಿಹೊಳಿಯ ಗೂಂಡಾಪಡೆ@BSBommai ಅವರೇ ನೀವು ಅತ್ಯಾಚಾರಿಯ ಈ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ?#ArrestRapistRamesh
— Karnataka Congress (@INCKarnataka) March 28, 2021
ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡ ಪೋಕರಿಗಳಿಗೆ ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ರಮೇಶ್ ಜಾರಕಿಹೊಳಿಯವರೇ.@BSBommai @BSYBJP ಅವರೇ ಆರೋಪಿಯನ್ನು ಬಂಧಿಸದೇ ಕಲ್ಲೆಸೆದು, ದಾಂಧಲೆ ಎಬ್ಬಿಸುವ ಭಯೋತ್ಪಾದಕ ಕೃತ್ಯವೆಸಗಲು ಕಳಿಸಿದ್ದೀರಾ?#ArrestRapistRamesh
— Karnataka Congress (@INCKarnataka) March 28, 2021
ವಿರೋಧ ಪಕ್ಷದ ಅಧ್ಯಕ್ಷರಾದವರನ್ನೇ ಈ ಮಟ್ಟಿಗೆ ಬೆದರಿಸಲು ಯತ್ನಿಸುವ ರಮೇಶ್ ಜಾರಕಿಹೊಳಿ, ಸಂತ್ರಸ್ತ ಯುವತಿಗೆ ಆಕೆಯ ಕುಟುಂಬಕ್ಕೆ ಇನ್ನೆಷ್ಟು ಬೆದರಿಕೆಯೊಡ್ಡಿರಬಹುದು. ದೂರುದಾರ ಯುವತಿಗೆ ಜೀವ ಬೆದರಿಕೆ ಇರುವುದು ಈ ಘಟನೆಗಳಿಂದ ಸ್ಪಷ್ಟವಾಗಿದೆ. ಈಗಲಾದರೂ ಆರೋಪಿಯನ್ನು ಬಂಧಿಸದಿರುವುದು ಪೊಲೀಸ್ ವ್ಯವಸ್ಥೆಯ ನಿರ್ಲಜ್ಜತನಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ವಿರೋಧ ಪಕ್ಷದ ಅಧ್ಯಕ್ಷರಾದವರನ್ನೇ ಈ ಮಟ್ಟಿಗೆ ಬೆದರಿಸಲು ಯತ್ನಿಸುವ ರಮೇಶ್ ಜಾರಕಿಹೊಳಿ ಸಂತ್ರಸ್ತ ಯುವತಿಗೆ ಆಕೆಯ ಕುಟುಂಬಕ್ಕೆ ಇನ್ನೆಷ್ಟು ಬೆದರಿಕೆಯೊಡ್ಡಿರಬಹುದು.
ದೂರುದಾರೆ ಯುವತಿಗೆ ಜೀವ ಬೆದರಿಕೆ ಇರುವುದು ಈ ಘಟನೆಗಳಿಂದ ಸ್ಪಷ್ಟವಾಗಿದೆ.
ಇಷ್ಟಿದ್ದರೂ ಆರೋಪಿಯನ್ನು ಬಂಧಿಸದಿರುವುದು ಪೊಲೀಸ್ ವ್ಯವಸ್ಥೆಯ ನಿರ್ಲಜ್ಜತನಕ್ಕೆ ಸಾಕ್ಷಿ.
— Karnataka Congress (@INCKarnataka) March 28, 2021
ವಿರೋಧ ಪಕ್ಷದ ಅಧ್ಯಕ್ಷರಾದವರಿಗೇ ಸೂಕ್ತ ರಕ್ಷಣೆ ನೀಡಲಾಗದ ಈ ಸರ್ಕಾರ ಸಂತ್ರಸ್ತ ಹೆಣ್ಣುಮಗಳಿಗೆ ರಕ್ಷಣೆ ನೀಡುತ್ತದೆಯೇ? #ArrestRapistRamesh
— Karnataka Congress (@INCKarnataka) March 28, 2021
ಇದನ್ನೂ ಓದಿ: ನನ್ನನ್ನು ಸ್ವಾಗತಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರಿಗೆ ಅಭಿನಂದನೆಗಳು: ಡಿ.ಕೆ. ಶಿವಕುಮಾರ್ ಟಾಂಗ್
ಸುದ್ದಿ ವಿಶ್ಲೇಷಣೆ: ಮಂತ್ರಿಗಿರಿ ಇಲ್ಲದ ಜಾರಕಿಹೊಳಿ ಕುಟುಂಬದಿಂದ ಬಿಜೆಪಿ ಸರಕಾರ ಕೆಡವಲು ಸಾಧ್ಯವೇ?
Published On - 5:26 pm, Sun, 28 March 21