ಬೆಂಗಳೂರು: ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ, ಡಿಕೆಶಿ ಎಂಬ ಹೇಳಿಕೆಗಳನ್ನು ನೀಡುತ್ತಿದ್ದ ಶಾಸಕರ ಮೇಲೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಲು ನಿರ್ಧರಿಸಿದೆ. ಶಾಸಕರಾದ ಜಮೀರ್ ಅಹ್ಮದ್ ಖಾನ್, ಸೌಮ್ಯಾ ರೆಡ್ಡಿ ಹಾಗೂ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿಗೆ ನೋಟಿಸ್ ನೀಡಲಾಗುತ್ತೆ ಎಂದು ನಿನ್ನೆ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮುಂದಿನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಎಂದು ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ಸಿಎಂ ಅಭ್ಯರ್ಥಿ ಡಿಕೆ ಶಿವಕುಮಾರ್ ಎಂದು ಸೌಮ್ಯಾ ರೆಡ್ಡಿ ಹೇಳಿದ್ದರು. ಹಾಗೂ ದಿವಂಗತ ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ಕೊಟ್ರೆ ಕಾಂಗ್ರೆಸ್ ಅಭ್ಯರ್ಥಿ ಯಾರೇ ಆದರೂ ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆಗಳಿಂದ ಪಕ್ಷ ಸಂಘಟನೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಸ್ಪಷ್ಟನೆ ನೀಡಲು ಮೂವರಿಗೆ ನೋಟಿಸ್ ಕೊಡಲು ನಿರ್ಧರಿಸಲಾಗಿದೆ.