ಮುಂದಿನ ಸಿಎಂ ಚರ್ಚೆ: ಭವಿಷ್ಯದ ನಾಯಕತ್ವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬಾರದು -ಕೆಪಿಸಿಸಿ ತಾಕೀತು
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಬಗ್ಗೆ ಹೇಳಿಕೆ ವಿಚಾರವಾಗಿ ಭವಿಷ್ಯದ ನಾಯಕತ್ವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬಾರದು. ಪಕ್ಷದಲ್ಲಿ ಒಗ್ಗಟ್ಟು ದೃಷ್ಟಿಯಿಂದ ಹೇಳಿಕೆ ನೀಡದಂತೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಆಗಿದೆ. ಮುಂದಿನ ಸಿಎಂ ಬಗ್ಗೆ ಪಕ್ಷದ ಶಾಸಕರಿಂದ ಹೇಳಿಕೆಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಇದನ್ನ ಗಂಭೀರವಾಗಿ ಪರಿಗಣಿಸಿದ್ದ ಶಿಸ್ತು ಪಾಲನಾ ಸಮಿತಿ ನ.5ರಂದು ಸಭೆ ನಡೆಸಿತ್ತು. ಸಭೆಯಲ್ಲಿ ಕೈಗೊಂಡ ತೀರ್ಮಾನದ ಬಗ್ಗೆ ಇದೀಗ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ನಾಯಕತ್ವ ಕುರಿತು […]

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಬಗ್ಗೆ ಹೇಳಿಕೆ ವಿಚಾರವಾಗಿ ಭವಿಷ್ಯದ ನಾಯಕತ್ವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬಾರದು. ಪಕ್ಷದಲ್ಲಿ ಒಗ್ಗಟ್ಟು ದೃಷ್ಟಿಯಿಂದ ಹೇಳಿಕೆ ನೀಡದಂತೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಆಗಿದೆ.
ಮುಂದಿನ ಸಿಎಂ ಬಗ್ಗೆ ಪಕ್ಷದ ಶಾಸಕರಿಂದ ಹೇಳಿಕೆಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಇದನ್ನ ಗಂಭೀರವಾಗಿ ಪರಿಗಣಿಸಿದ್ದ ಶಿಸ್ತು ಪಾಲನಾ ಸಮಿತಿ ನ.5ರಂದು ಸಭೆ ನಡೆಸಿತ್ತು. ಸಭೆಯಲ್ಲಿ ಕೈಗೊಂಡ ತೀರ್ಮಾನದ ಬಗ್ಗೆ ಇದೀಗ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ನಾಯಕತ್ವ ಕುರಿತು ಪಕ್ಷದಲ್ಲಿ ಮುಖಂಡರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನು ಶಿಸ್ತು ಪಾಲನಾ ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಸೂಕ್ತ ಸಮಯದಲ್ಲಿ ಸಮಿತಿಯು ಚರ್ಚೆ ನಡೆಸಲಿದೆ. ಪಕ್ಷದ ಒಗ್ಗಟ್ಟಿನ ದೃಷ್ಟಿಯಿಂದ ಮುಂದೆ ಹೇಳಿಕೆ ನೀಡಬಾರದು. ಕಾಂಗ್ರೆಸ್ ಪಕ್ಷವನ್ನ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸಮಿತಿ ಅಭಿಪ್ರಾಯ ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಹಾಗೂ ಸಮಿತಿ ಸಂಚಾಲಕ ನಿವೇದಿತ್ ಆಳ್ವಾರಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಲಾಗಿದೆ.



