AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಸೆ ಕಾರ್ಮಿಕರಿಗೆ ಕಾಂಗ್ರೆಸ್ ನೆರವಿನ ಹಸ್ತ, ಉಚಿತ ಪ್ರಯಾಣಕ್ಕೆ 1 ಕೋಟಿ ನೆರವು

ಬೆಂಗಳೂರು: ತಮ್ಮ ತಮ್ಮ ಊರುಗಳಿಗೆ ತೆರಳಲು ವಲಸೆ ಕಾರ್ಮಿಕರ ಪರದಾಟ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ಸೇರಿದಂತೆ ಹಲವರು ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಆಲಿಸಿದ್ದಾರೆ. ಕೆಪಿಸಿಸಿಯಿಂದ ₹1 ಕೋಟಿ ನೆರವು: ಲಾಕ್​ಡೌನ್​ನಿಂದ ಕಾಸಿಲ್ಲದೆ ಪಾರದಾಡುತ್ತಿದ್ದ ಕಾರ್ಮಿಕರಿಗೆ ಊರುಗಳಿಗೆ ತೆರಳಲು ಕೆಎಸ್​​ಆರ್​ಟಿಸಿ ಸಂಸ್ಥೆಗೆ ಕಾಂಗ್ರೆಸ್ ನಿಯೋಗ 1 ಕೋಟಿ ರೂಪಾಯಿ ನೆರವು ನೀಡಿದೆ. ಇದೇ ವೇಳೆ ಮೆಜೆಸ್ಟಿಕ್​ನಲ್ಲಿ ಬಸ್ ಹತ್ತಿ […]

ವಲಸೆ ಕಾರ್ಮಿಕರಿಗೆ ಕಾಂಗ್ರೆಸ್ ನೆರವಿನ ಹಸ್ತ, ಉಚಿತ ಪ್ರಯಾಣಕ್ಕೆ 1 ಕೋಟಿ ನೆರವು
ಸಾಧು ಶ್ರೀನಾಥ್​
|

Updated on: May 03, 2020 | 1:00 PM

Share

ಬೆಂಗಳೂರು: ತಮ್ಮ ತಮ್ಮ ಊರುಗಳಿಗೆ ತೆರಳಲು ವಲಸೆ ಕಾರ್ಮಿಕರ ಪರದಾಟ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ಸೇರಿದಂತೆ ಹಲವರು ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಆಲಿಸಿದ್ದಾರೆ.

ಕೆಪಿಸಿಸಿಯಿಂದ ₹1 ಕೋಟಿ ನೆರವು: ಲಾಕ್​ಡೌನ್​ನಿಂದ ಕಾಸಿಲ್ಲದೆ ಪಾರದಾಡುತ್ತಿದ್ದ ಕಾರ್ಮಿಕರಿಗೆ ಊರುಗಳಿಗೆ ತೆರಳಲು ಕೆಎಸ್​​ಆರ್​ಟಿಸಿ ಸಂಸ್ಥೆಗೆ ಕಾಂಗ್ರೆಸ್ ನಿಯೋಗ 1 ಕೋಟಿ ರೂಪಾಯಿ ನೆರವು ನೀಡಿದೆ. ಇದೇ ವೇಳೆ ಮೆಜೆಸ್ಟಿಕ್​ನಲ್ಲಿ ಬಸ್ ಹತ್ತಿ ಪ್ರಯಾಣಿಕರ ಸಮಸ್ಯೆ ಆಲಿಸಿ, ಧೈರ್ಯ ತುಂಬಿದ್ದಾರೆ.

ಕಾಂಗ್ರೆಸ್​ ನಿರ್ಧಾರ ಮಾಡಿದ ನಂತರ ಉಚಿತ ಪ್ರಯಾಣ: ವಲಸೆ ಕಾರ್ಮಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ನಾವು ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದೇವೆ. ನಾವು ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದೆವು. ನಾವು ನಿರ್ಧಾರ ಮಾಡಿದ ನಂತರ ಕಾರ್ಮಿಕರು ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸರ್ಕಾರಕ್ಕೆ ಕಿವಿಯೂ ಇಲ್ಲ, ಕಣ್ಣೂ ಇಲ್ಲ: ಕಾರ್ಮಿಕರಿಗೆ ಊಟದ ವ್ಯವಸ್ಥೆಯನ್ನು ಮಾಡಿಸಿದ್ದೇವೆ. ಅದನ್ನು ಪರಿಶೀಲಿಸಲು ಇಲ್ಲಿಗೆ ಬಂದಿದ್ದೇವೆ. ರಾಜ್ಯ ಸರ್ಕಾರಕ್ಕೆ ಕಿವಿಯೂ ಇಲ್ಲ, ಕಣ್ಣೂ ಇಲ್ಲ. ಹೀಗಾಗಿ ಜನರ ಕಷ್ಟ ಆಲಿಸಲು ಯಾರೂ ಬರುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಸಾಮಾಜಿಕ ಅಂತರ ಮರೆತ ಕಾಂಗ್ರೆಸ್ ನಿಯೋಗ: ಇದೇ ವೇಳೆ ಬಸ್ ಪ್ರಯಾಣಿಕರ ಸೌಲಭ್ಯಗಳ ಬಗ್ಗೆ ಕಾಂಗ್ರೆಸ್​ ನಿಯೋಗ ತಪಾಸಣೆ ಮಾಡಿದೆ. ಇದೇ ವೇಳೆ ಮೆಜೆಸ್ಟಿಕ್​ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಕಾರ್ಮಿಕರ ಸಮಸ್ಯೆ ಕೇಳುವ ಬರದಲ್ಲಿ ಸಾಮಾಜಿಕ ‌ಅಂತರವನ್ನೇ ಕೈ ನಾಯಕರು ಮರೆತರು.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!