ಡಿಕೆಶಿ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಮುಖಂಡ ದೇವರಾಜೇಗೌಡಗೆ ಸಂಕಷ್ಟ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಇದೀಗ ದೂರು ದಾಖಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ದೂರು ದಾಖಲಾಗಿದೆ. ಹಾಗಾದ್ರೆ, ದೂರಿನಲ್ಲಿ ಏನಿದೆ? ಎನ್ನುವ ವಿವರ ಇಲ್ಲಿದೆ.
ಬೆಂಗಳೂರು, (ಮೇ 10): ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಇದೀಗ ದೂರು ದಾಖಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೇವರಾಜೇಗೌಡ ಬ್ಲ್ಯಾಕ್ಮೇಲರ್ ಎಂದು ಈಗಾಗಲೇ ಕುಖ್ಯಾತಿಯಾಗಿದ್ದಾರೆ. ಏ.1ರಂದು ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು, ಬಹಿರಂಗ ಪೆನ್ಡ್ರೈವ್ ಕೇಸ್ ಇಟ್ಟುಕೊಂಡು ಸರ್ಕಾರದ ವಿರುದ್ಧ ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಆರೋಪಿಸುತ್ತಿದ್ದ ಈತನ ಹೀನ ಕೃತ್ಯ ಬಹಿರಂಗವಾಗಿದ್ದು, ತಕ್ಷಣ ಕಾನೂನು ಕ್ರಮಕೈಗೊಂಡು ಬಂಧಿಸಬೇಕು. ದೇವರಾಜೇಗೌಡ ನೈಜ ಚಿತ್ರಣ, ಹಿನ್ನೆಲೆ ಬಹಿರಂಗ ಪಡಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನಲ್ಲಿ ಏನಿದೆ?
- ದೇವರಾಜೇಗೌಡ ಬ್ಲಾಕ್ ಮೇಲರ್ ಎಂದು ಈಗಾಗಗಲೇ ಕುಖ್ಯಾತಿಗಳಿಸಿದ್ದಾನೆ.
- ಏಫ್ರಿಲ್ 1ನೇ ತಾರೀಕು ಹೊಳೆನರಸಿಪುರ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು ಬಹಿರಂಗವಾಗಿದೆ.
- ಈಗ ಅನಾವಶ್ಯಕವಾಗಿ ಪೇನ್ ಡ್ರೈವ್ ಕೇಸ್ ಇಟ್ಟುಕೊಂಡು ಸರ್ಕಾರದ ಮೇಲೆ ಆರೋಪ
- ಕಾಂಗ್ರೆಸ್ ನಾಯಕರ ವಿರುದ್ಧ ಆರೋಪಿಸುತ್ತಿದ್ದ ಈತಾನ ಹೀನಾ ಕೃತ್ಯ ಬಹಿರಂಗ
- ಅವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು
- ಅವನ ನೈಜ್ಯ ಚಿತ್ರಣ ಹಾಗೂ ಹಿನ್ನೆಲೆಯನ್ನು ಬಹಿರಂಗ ಪಡಿಸಲು ದೂರು
ಇದನ್ನೂ ಓದಿ: ನಮ್ಮ-ನಿಮ್ಮ ವಾಯ್ಸ್ ಪ್ಲೇಮಾಡಿ ರಾಜ್ಯದ ಜನರಿಗೆ ಕೇಳಿಸೋಣ: ಡಿಕೆಶಿಗೆ ದೇವರಾಜೇಗೌಡ ಸವಾಲ್
ದೂರು ನೀಡಿದ ಬಳಿಕ ಮನೋಹರ್ ಹೇಳಿಕೆ
ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ , ಮಹಿಳೆಯರಿಗೆ ನ್ಯಾಯ ಕೊಡಿಸುತ್ತೇನೆಂದು ಅವರೇ ದೌರ್ಜನ್ಯವೆಸಗಿದ್ದಾರೆ. ಕಾನೂನಾತ್ಮಕವಾಗಿ ಹೋರಾಟ ಮಾಡುವವರೇ ದೌರ್ಜನ್ಯವೆಸಗಿದ್ದಾರೆ. ಎಸ್ಐಟಿ ಸರಿಯಾಗಿ ನಡೆಸುತ್ತಿಲ್ಲವೆಂದು ದೇವರಾಜೇಗೌಡ ಹೇಳುತ್ತಿದ್ದಾರೆ/ ಸಂತ್ರಸ್ತೆ ದೂರು ನೀಡಿದ ನಂತರ ನಾಪತ್ತೆಯಾಗಿದ್ದಾರೆಂದು ಆರೋಪಿಸಿದ್ದಾರೆ. ಹೀಗಾಗಿ ದೇವರಾಜೇಗೌಡ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರು ದಾಖಲಿಸಿರುವುದಾಗಿ ಹೇಳಿದರು.
ಈ ಹಾಸನ ಪೆನ್ಡ್ರೈವ್ ಬಿಡುಗಡೆ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಇದೆ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರು ಆರೋಪಿಸಿದ್ದಾರೆ. ಪ್ರಜ್ವಲ್ ಮಾಜಿ ಕಾರು ಚಾಲನ ನನ್ನ ಬಳಿ ಪೆನ್ಡ್ರೈವ್ ಕೊಟ್ಟಿದ್ದ. ಆದ್ರೆ, ಅದನ್ನು ಹಾಗೇ ಇಟ್ಟಿದ್ದೆ. ಅಲ್ಲದೇ ನನ್ನ ಬಳಿ ಬರುವ ಮುಂಚೆ ಕಾಂಗ್ರೆಸ್ ನಾಯಕರಿಗೆ ಪೆನ್ಡ್ರೈವ್ ಕೊಟ್ಟಿರುವುದಾಗಿ ದೇವರಾಜ್ ಆರೋಪಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ