ಕಾಂಗ್ರೆಸ್ ಅವಧಿಯಲ್ಲಿ ಏನು ಹಾಳಾಯ್ತು ಎಂದು ಹೇಳಲಿ: ಸಿಎಂಗೆ ಡಿಕೆಶಿ ಸವಾಲು

ಕಾಂಗ್ರೆಸ್ ಅವಧಿಯಲ್ಲಿ ಒತ್ತುವರಿಯಾಗಿದ್ದರೆ ತೆರವು ಮಾಡಲಿ, ಬಿಜೆಪಿಯವರು ಆ ಕೆಲಸ ಮಾಡಲಾಗದೇ ಮಾತನಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ಅವಧಿಯಲ್ಲಿ ಏನು ಹಾಳಾಯ್ತು ಎಂದು ಹೇಳಲಿ: ಸಿಎಂಗೆ ಡಿಕೆಶಿ ಸವಾಲು
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: Rakesh Nayak Manchi

Updated on:Sep 06, 2022 | 1:30 PM

ಬೆಂಗಳೂರು: ನಗರದಲ್ಲಿ ಮಳೆ ಅವಾಂತರ ಕಾಂಗ್ರೆಸ್ ಕಾಲದ ಒತ್ತುವರಿಯೇ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅವಧಿಯಲ್ಲಿ ಒತ್ತುವರಿಯಾಗಿದ್ದರೆ ತೆರವು ಮಾಡಲಿ, ಬಿಜೆಪಿಯವರು ಆ ಕೆಲಸ ಮಾಡಲಾಗದೇ ಮಾತನಾಡುತ್ತಾರೆ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ, ಶೂರನೂ ಅಲ್ಲ, ಕಾಂಗ್ರೆಸ್ ಅವಧಿಯಲ್ಲಿ ಏನು ಹಾಳಾಯ್ತು ಎಂದು ಹೇಳಲಿ ಎಂದು ಹೇಳಿದರು.

ನಗರದಲ್ಲಿ ಹೇಳಿಕೆ ನೀಡಿದ ಶಿವಕುಮಾರ್, ಅಧಿಕಾರಿಗಳ ಭ್ರಷ್ಟಾಚಾರದಿಂದ ಹಾಳಾಗಿದೆ ಎಂಬೂದನ್ನು ಗಮನದಲ್ಲಿಟ್ಟುಕೊಳ್ಳಲಿ. ಭ್ರಷ್ಟಾಚಾರದಿಂದ ಹಾಳಾಗಿದೆ ಅಂತಾ ಮುಖ್ಯಮಂತ್ರಿಯವರು ಗಮನದಲ್ಲಿಟ್ಟುಕೊಳ್ಳಲಿ, ರಾಜ್ಯದ ಜನರು ನಿಮಗೆ ಅವಕಾಶ ಕೊಟ್ಟಿದ್ದಾರೆ ಕೆಲಸ ಮಾಡಿ. ಕೆಲಸ ಮಾಡಲು ಆಗಲ್ಲ ಅಂದರೆ ಚುನಾವಣೆಗೆ ಹೋಗೋಣ ಬನ್ನಿ ಎಂದುಸವಾಲು ಹಾಕಿದರು.

ಕಾಂಗ್ರೆಸ್ ಅವಧಿಯಲ್ಲಿ ಒತ್ತುವರಿಯಾಗಿದ್ದರೆ ಒಂದು ನಿಮಿಷ ತಡಮಾಡದೇ ಹಗರಣಗಳನ್ನು ಬಯಲಿಗೆಳೆಯಿರಿ, ಹಗರಣಗಳನ್ನು ಬಯಲಿಗೆಳೆದು ನಮ್ಮನ್ನು ಗಲ್ಲಿಗೆ ಹಾಕಿ. ಇಂಧನ ಇಲಾಖೆಯಲ್ಲಿನ ಹಗರಣಗಳನ್ನೂ ಬಯಲಿಗೆಳೆಯಲಿ. ನನ್ನೊಬ್ಬನ ಮೇಲೆ ಆದಾಯ ಮೀರಿದ ಆಸ್ತಿ ಕೇಸ್ ಹಾಕಿದ್ದಾರೆ. ಅವರು (ಬಿಜೆಪಿ) ಆದಾಯ ಮೀರಿ ಆಸ್ತಿ ಮಾಡಿಲ್ಲವೇ? ಈ ಡಿಕೆ ಶಿವಕುಮಾರ್ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವ ಮಗ ಅಲ್ಲ ಎಂದು ಸವಾಲು ಹಾಕಿದರು.

ಕಾಂಗ್ರೆಸ್​ಗೆ ಹೇಗೆ ಪಾಠ ಕಲಿಸಬೇಕು ಅಂತ ಗೊತ್ತಿದೆ

ಡಿ.ಕೆ.ಶಿವಕುಮಾರ್ ಅವರ ಸವಾಲಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ದೇಶದಲ್ಲಿ ಕಾಂಗ್ರೆಸ್ ಮುಳುಗತ್ತಿದೆ. ಮಳೆ ನಿಂತರ ನಾವು ಕಾಂಗ್ರೆಸ್​ಗೆ ಪಾಠ ಕಲಿಸುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಅವಧಿಯ ಹಗರಣಗಳನ್ನು ಬಯಲಿಗೆಳೆದು ತನಿಖೆ ಮಾಡಲಿ, ಬಿಜೆಪಿ ಬೆದರಿಕೆಗೆ ನಾನು ಹೆದರುವ ಮಗ ಅಲ್ಲ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ರವಿಕುಮಾರ್, ಡಿ.ಕೆ. ಶಿವಕುಮಾರ್ ಇಂಥದ್ದಕ್ಕೆಲ್ಲ ಹೆದರಲ್ಲ, ಅವರು ಯಾವುದಕ್ಕೂ ಹೆದರಲ್ಲ, ಕಾಂಗ್ರೆಸ್​ನವರಿಗೆ ಹೇಗೆ ಪಾಠ ಕಲಿಸಬೇಕು ಅಂತ ನಮಗೆ ಗೊತ್ತಿದೆ. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಷ್ಟೂ ಬಿಜೆಪಿಗೆ ಲಾಭ, ಅವರು ಹೆಚ್ಚು ಹೆಚ್ಚು ರಾಜ್ಯಕ್ಕೆ ಬರಲಿ, ರಾಹುಲ್ ಗಾಂಧಿ‌ ಐರನ್ ಲೆಗ್ ಎಂದು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Tue, 6 September 22

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ