ಜೈಲ್​ಗೆ ಬೇಲ್​ಗೆ ಹೆದರೋರು ನಾವಲ್ಲ, ನಮಗೆ ತೊಂದರೆ ಕೊಡ್ತಿರೋ ಪೊಲೀಸರ ಹೆಸರು ಗೊತ್ತಿದೆ: ಸರ್ಕಾರಕ್ಕೆ ಡಿಕೆಶಿ ಸವಾಲು

ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಡೆಯಲು ಸರ್ಕಾರ ವಾಮಮಾರ್ಗದ ಪ್ರಯತ್ನ ನಡೆಸುತ್ತಿದೆ. ಗೃಹ ಸಚಿವರು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಆರೋಪ ಮಾಡಿದರು.

ಜೈಲ್​ಗೆ ಬೇಲ್​ಗೆ ಹೆದರೋರು ನಾವಲ್ಲ, ನಮಗೆ ತೊಂದರೆ ಕೊಡ್ತಿರೋ ಪೊಲೀಸರ ಹೆಸರು ಗೊತ್ತಿದೆ: ಸರ್ಕಾರಕ್ಕೆ ಡಿಕೆಶಿ ಸವಾಲು
ಡಿಕೆ ಶಿವಕುಮಾರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 01, 2022 | 9:53 AM

ಬೆಂಗಳೂರು: ಮೇಕೆದಾಟು ನೀರಾವರಿ ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಡೆಯಲು ಸರ್ಕಾರ ವಾಮಮಾರ್ಗದ ಪ್ರಯತ್ನ ನಡೆಸುತ್ತಿದೆ. ಗೃಹ ಸಚಿವರು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ. ಇಂಥ ನಾಲಾಯಕ್ ಸಚಿವರನ್ನು ನಾನೆಂದೂ ಕಂಡಿರಲಿಲ್ಲ. ಅವರೇ ಸ್ವತಃ ಮುಂದೆ ನಿಂತು ಲೂಟಿ ಮಾಡಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shiavakumar) ಗಂಭೀರ ಆರೋಪ ಮಾಡಿದರು. ಶಿವಮೊಗ್ಗ ಪ್ರಕರಣವನ್ನು ಸರ್ಕಾರ ಸಮರ್ಪಕವಾಗಿ ನಿರ್ವಹಿಸಲಿಲ್ಲ. ಸರ್ಕಾರದ ಸಚಿವರೇ ಶಿವಮೊಗ್ಗದಲ್ಲಿ ದೊಂಬಿಗೆ ಕಾರಣವಾಗುವಂಥ ಹೇಳಿಕೆಗಳನ್ನು ನೀಡಿದರು ಎಂದು ದೂರಿದರು.

ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಶಿವರಾತ್ರಿ ಹಬ್ಬದ ಶುಭಾಶಯ ಕೋರಿದರು. ಶಿವರಾತ್ರಿ ಆಚರಣೆ ಸಂದರ್ಭದಲ್ಲಿ ನಾವು ಬೆಂಗಳೂರು ಜನತೆಗೆ ಹಾಗೂ ಕೃಷಿ ಭೂಮಿಗಳಿಗೆ ಕಾವೇರಿ ನೀರು ಒದಗಿಸಲೆಂದು ಜಲಾಶಯ ನಿರ್ಮಾಣಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಇದೀಗ ಬೆಂಗಳೂರು ನಗರಕ್ಕೆ ಕಾಲಿಟ್ಟಿದ್ದೇವೆ. ಪೊಲೀಸರು ಬೆಂಗಾವಲಾಗಿ ಕಾದುಕೊಂಡಿದ್ದಾರೆ. ಬಿಬಿಎಂಪಿ ಕಮಿಷನರ್ ಬ್ಯಾನರ್​ಗಳನ್ನ ತೆಗೆಸುತ್ತಿದ್ದಾರೆ. ನಮ್ಮ ಬ್ಯಾನರ್​ಗಳನ್ನು ತೆಗೆಸಿದರೆ ಯಡಿಯೂರಪ್ಪ ಹುಟ್ಟುಹಬ್ಬದ ಬ್ಯಾನರ್, ಶಿವರಾತ್ರಿ ಹಬ್ಬಕ್ಕೆ ಅಂತಾ ಕೆಲ ಶಾಸಕರು ಕಟ್ಟಿರುವ ಬ್ಯಾನರ್​ಗಳನ್ನು ತೆಗೆಯಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾದಯಾತ್ರೆ ಮಾಡಿದ ನಮ್ಮ ಮೇಲೆ ದುರದ್ದೇಶದಿಂದ ಪ್ರಕರಣಗಳನ್ನು ದಾಖಲಿಸಿದರು. ಆದರೆ ಯಡಿಯೂರಪ್ಪ ಹುಟ್ಟುಹಬ್ಬ, ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮ ಮಾಡಿದರೂ ಯಾವುದೇ ಪ್ರಕರಣಗಳು ದಾಖಲಾಗಲಿಲ್ಲ. ಕಮೀಷನರ್ ಗೌರವಗುಪ್ತ ಅವರು ತಮ್ಮ ಕಚೇರಿಯನ್ನು ಇನ್ನು ಮುಂದೆ ಬಿಜೆಪಿ ಕಚೇರಿ ಎಂದು ಮಾಡಿಕೊಳ್ಳಬೇಕು. ಬಿಜೆಪಿ ಅಣತಿಯಂತೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ಕೋವಿಡ್ ನಿಯಮಗಳನ್ನು ಹಿಂಪಡೆಯಲು ಸೂಚನೆ ನೀಡಿರುವ ಕುರಿತು ಪ್ರಸ್ತಾಪಿಸಿದ ಅವರು, ಅವರು ಎಲ್ಲಾ ಕಡೆ ತಮಗೆ ಬೇಕುಬೇಕಾದ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. 144ರ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿಯಾದರೂ ಕಾರ್ಯಕ್ರಮಗಳನ್ನು ನಿಲ್ಲಿಸುತ್ತಿಲ್ಲ. ಆದರೆ ನಮ್ಮ ಮೇಲೆ ಮಾತ್ರ ಪ್ರಕರಣಗಳನ್ನು ದಾಖಲು ಮಾಡುತ್ತಿದ್ದಾರೆ. ಬಿಜೆಪಿ ಹೇಳುತ್ತಿರುವ ಮಾತನ್ನು ಪೊಲೀಸರು ಚಾಚೂ ತಪ್ಪದೆ ಪಾಲಿಸುತ್ತಾ ನಮಗೆ ತೊಂದರೆ ಕೊಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ತಾರತಮ್ಯ ಧೋರಣೆಯಿಂದ ವರ್ತಿಸುತ್ತಿರುವ ಪೊಲೀಸರ ಹೆಸರುಗಳು ನಮಗೆ ನೆನಪಿದೆ. ಅಧಿಕಾರ ಎಂದಿಗೂ ಶಾಶ್ವತವಲ್ಲ. ಇಂಥವರ ಬಗ್ಗೆ ನಮ್ಮ ಕಾಲ ಬಂದಾಗ ನಾವೂ ಗಮನಕೊಡುತ್ತೇವೆ. ಕಾನೂನು ಎಲ್ಲರಿಗೂ ಒಂದೇ ಅಲ್ಲವೇ? ಕೋಮು ಗಲಭೆಯಲ್ಲಿ ಈಶ್ವರಪ್ಪ ಅವರ ಹೆಸರು ಕೇಳಿಬಂದಾಗ ಏನು ಕ್ರಮ ಜರುಗಿಸಿದಿರಿ ಎಂದು ಪ್ರಶ್ನಿಸಿದರು.

ಶಿವಮೊಗ್ಗದಲ್ಲಿ ಮೃತಪಟ್ಟ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಈಗಾಗಲೇ ಕಾಂಗ್ರೆಸ್ ಜಿಲ್ಲಾ ಘಟಕದ ನಾಯಕರು ಭೇಟಿ ನೀಡಿದ್ದಾರೆ. ಮೇಕೆದಾಟು ಮುಗಿದ ಮೇಲೆ ನಾನೂ ಹೋಗುತ್ತೇನೆ. ಅವರು ನಮ್ಮ ರಾಜ್ಯದ ಹುಡುಗ-ಹುಡುಗಿಯರು. ಯಾರಿಗೂ ಯಾರನ್ನೂ ಸಾಯಿಸುವ ಅಧಿಕಾರ ಇಲ್ಲ. ಹಿಂಸಾಚಾರಕ್ಕೆ ಯಾರೂ ಮುಂದಾಗಬಾರದು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಹಿನ್ನೆಲೆ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ಅಳವಡಿಕೆ; ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ

ಇದನ್ನೂ ಓದಿ: Mekedatu Padayatra: ಮೇಕೆದಾಟು ಪಾದಯಾತ್ರೆ ಹಿನ್ನೆಲೆ; ಕಾಂಗ್ರೆಸ್ ನಾಯಕರ ವಿರುದ್ಧ FIR ದಾಖಲು

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ