ರಾಜ್ಯ ಸರ್ಕಾರದ ಹಗರಣಗಳ ವಿರುದ್ದ ಎಲ್ಲ ತಾಲೂಕು ಕಚೇರಿ ಮುಂದೆ ಪ್ರತಿಭಟನೆ: ಡಿಕೆಶಿ

|

Updated on: Aug 10, 2020 | 7:35 PM

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ,ಬಿಜೆಪಿ ಸರ್ಕಾರದ ಮೇಲೆ ಆರೋಪಗಳ ಸುರಿಮಳೆಗೈದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಈ ಬಾರಿ ಮಾನ್ಸೂನ್ ಕೊಡಗಿನಲ್ಲಿ ಭಾರಿ ಹಾನಿ ಮಾಡಿದ್ದು, ರಾಜ್ಯ ಸರ್ಕಾರ 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು. ಜೊತೆಗೆ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಲಿ ಎಂದಿದ್ದಾರೆ. ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು ಮೊದಲು ಕೊಡಗಿನಿಂದ ಆರಂಭ ಮಾಡಲಿದ್ದೇನೆ […]

ರಾಜ್ಯ ಸರ್ಕಾರದ ಹಗರಣಗಳ ವಿರುದ್ದ ಎಲ್ಲ ತಾಲೂಕು ಕಚೇರಿ ಮುಂದೆ ಪ್ರತಿಭಟನೆ: ಡಿಕೆಶಿ
Follow us on

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ,ಬಿಜೆಪಿ ಸರ್ಕಾರದ ಮೇಲೆ ಆರೋಪಗಳ ಸುರಿಮಳೆಗೈದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಈ ಬಾರಿ ಮಾನ್ಸೂನ್ ಕೊಡಗಿನಲ್ಲಿ ಭಾರಿ ಹಾನಿ ಮಾಡಿದ್ದು, ರಾಜ್ಯ ಸರ್ಕಾರ 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು. ಜೊತೆಗೆ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಲಿ ಎಂದಿದ್ದಾರೆ.

ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು ಮೊದಲು ಕೊಡಗಿನಿಂದ ಆರಂಭ ಮಾಡಲಿದ್ದೇನೆ ಎಂದರು. ಕಾವೇರಿ ನಮ್ಮ ಆಸ್ತಿ. ಹಾಗಾಗಿ ಕಾವೇರಿ ನದಿ ಹುಟ್ಟುವ ಜಾಗವನ್ನು ಸಂರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದಿದ್ದಾರೆ. ಕಳೆದ ಮೂರು ವರ್ಷಗಳಿಂದಲೂ ಕೊಡಗಿನಲ್ಲಿ ಮಳೆ ಭಾರಿ ಅನಾಹುತ ಸೃಷ್ಟಿಸುತ್ತಿದ್ದು, ಇದುವರೆಗೂ ರಾಜ್ಯ ಸರ್ಕಾರ ತಾನು ನೀಡಿರುವ ಯಾವ ಭರವಸೆಯನ್ನೂ ಈಡೇರಿಸಿಲ್ಲ.

ಜೊತೆಗೆ ಹಳ್ಳಭಾಗದಲ್ಲಿರುವ ಮನೆಗಳಿಗೆ ಹಕ್ಕುಪತ್ರ ನೀಡಿ, ಮನೆ ಕಟ್ಟಿಸಿಕೊಡುವ ಕೆಲಸವೂ ಸಹ ಆಗಿಲ್ಲ. ಮತ್ತು ಹಾಳಾದ ಮನೆಗಳ ಕುಟುಂಬಸ್ಥರಿಗೆ 5,000 ರೂ ಬಾಡಿಗೆ ಹಣ ನೀಡುತ್ತೇವೆ ಎಂದು ಸರ್ಕಾರ ಆಶ್ವಾಸನೆ ನೀಡಿತ್ತು. ಆದರೆ ಅದೂ ಸಹ ಈಡೇರಿಲ್ಲ ಎಂದು ಡಿಕೆ ಶಿವಕುಮಾರ್ ಸರ್ಕಾರದ ಮೇಲೆ ಹರಿಹಾಯ್ದರು.

ಆಗಸ್ಟ್ 20ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ಜನಧ್ವನಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಎಪಿಎಂಸಿ ಕಾಯ್ದೆ,ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಕೊರೊನಾ ಹಗರಣಗಳ ವಿಚಾರವಾಗಿ ಪ್ರತಿಯೊಂದು ತಾಲೂಕುಗಳ, ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

Published On - 5:00 pm, Mon, 10 August 20